ETV Bharat / bharat

'ನಿಷೇಧಿತ ವಸ್ತುಗಳ ಪಟ್ಟಿಗೆ ಪ್ಲಾಸ್ಟಿಕ್ ಹೂ ಏಕೆ ಸೇರಿಸಿಲ್ಲ?': ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ - SINGLE USE PLASTIC

ಪ್ಲಾಸ್ಟಿಕ್ ಹೂಗಳನ್ನು ನಿಷೇಧಿತ ವಸ್ತುಗಳ ಪಟ್ಟಿಗೆ ಏಕೆ ಸೇರಿಸಿಲ್ಲ ಎಂದು ಕೇಂದ್ರ ಸರ್ಕಾರವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.

ಪ್ಲಾಸ್ಟಿಕ್ ತ್ಯಾಜ್ಯ
ಪ್ಲಾಸ್ಟಿಕ್ ತ್ಯಾಜ್ಯ (IANS)
author img

By ETV Bharat Karnataka Team

Published : Feb 12, 2025, 4:22 PM IST

ಮುಂಬೈ(ಮಹಾರಾಷ್ಟ್ರ): ಕೇಂದ್ರ ಸರ್ಕಾರ ನಿಷೇಧಿಸಿರುವ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಪಟ್ಟಿಯಲ್ಲಿ ಪ್ಲಾಸ್ಟಿಕ್ ಹೂವುಗಳನ್ನು ಏಕೆ ಸೇರಿಸಲಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ.

ಪ್ಲಾಸ್ಟಿಕ್ ಹೂವುಗಳನ್ನು ಮರುಬಳಕೆ ಮಾಡಬಹುದು ಅಥವಾ ಅವು ಜೈವಿಕ ವಿಘಟನೀಯ ವಸ್ತುಗಳೆಂದು ಕೇಂದ್ರ ಭಾವಿಸಿದೆಯೇ ಎಂದು ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರ ವಿಭಾಗೀಯ ಪೀಠ ಕೇಳಿದೆ.

ಪ್ಲಾಸ್ಟಿಕ್ ಹೂವುಗಳ ಬಳಕೆಯನ್ನು ನಿಷೇಧಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಗ್ರೋವರ್ಸ್ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ (ಜಿಎಫ್‌ಸಿಐ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು.

"ಪ್ಲಾಸ್ಟಿಕ್ ಹೂವುಗಳನ್ನು ಮರುಬಳಕೆ ಮಾಡಬಹುದು ಅಥವಾ ಅವು ಜೈವಿಕ ವಿಘಟನೀಯ ಎಂಬುದು ಕೇಂದ್ರ ಸರ್ಕಾರಕ್ಕೆ ಖಚಿತವಾಗಿದೆಯೇ? ಈ ಹೂಗಳು ತುಂಬಾ ಮೃದುವಾಗಿರುತ್ತವೆ. ಅವುಗಳನ್ನು ಮರುಬಳಕೆ ಮಾಡಬಹುದೇ?" ಎಂದು ಪ್ರಶ್ನಿಸಿದ ನ್ಯಾಯಾಲಯ, ಈ ಹೂಗಳು ನಿಷೇಧಿತ ವಸ್ತುಗಳ ಪಟ್ಟಿಯಲ್ಲಿಲ್ಲ ಎಂಬ ಕೇಂದ್ರದ ಅಫಿಡವಿಟ್ ಅನ್ನು ಉಲ್ಲೇಖಿಸಿತು.

ಮರುಬಳಕೆ ಮಾಡಲಾಗದ ಅಥವಾ ಜೈವಿಕ ವಿಘಟನೀಯವಲ್ಲದ ಏಕಬಳಕೆಯ ಪ್ಲಾಸ್ಟಿಕ್​ಗಳನ್ನು ನಿಷೇಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯನ್ನು ನ್ಯಾಯಪೀಠ ಉಲ್ಲೇಖಿಸಿತು.

"ಪ್ಲಾಸ್ಟಿಕ್ ಹೂವುಗಳನ್ನು ಈ ನಿಷೇಧಿತ ವಸ್ತುಗಳ ಪಟ್ಟಿಗೆ ಸೇರಿಸಲಾಗದು ಎಂದು ನಿಮಗೆ ಖಚಿತವಾಗಿದೆಯೇ?" ಎಂದು ನ್ಯಾಯಪೀಠ ಕೇಳಿತು.

ಕೇಂದ್ರದ ನಿಲುವಿಗೆ ಪ್ರತಿಕ್ರಿಯೆಯಾಗಿ ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ಅರ್ಜಿದಾರರ ಸಂಸ್ಥೆಗೆ ನಿರ್ದೇಶನ ನೀಡಿತು.

ಅಲಂಕಾರಕ್ಕಾಗಿ ಬಳಸುವ ಪ್ಲಾಸ್ಟಿಕ್ ಹೂವುಗಳ ಗರಿಷ್ಠ ದಪ್ಪ ಸಾಮಾನ್ಯವಾಗಿ 30 ಮೈಕ್ರಾನ್ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಹೊರಡಿಸಿದ ವಿವಿಧ ಅಧಿಸೂಚನೆಗಳ ಪ್ರಕಾರ 100 ಮೈಕ್ರಾನ್ ಗಿಂತ ಕಡಿಮೆ ದಪ್ಪವಿರುವ ಪ್ಲಾಸ್ಟಿಕ್ ವಸ್ತುಗಳು ಸೇರಿದಂತೆ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.

ಅಧಿಸೂಚನೆಗಳಲ್ಲಿ ಪ್ಲಾಸ್ಟಿಕ್ ಹೂವುಗಳನ್ನು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿಲ್ಲ. ಹೀಗಾಗಿ 100 ಮೈಕ್ರಾನ್ ಗಿಂತ ಕಡಿಮೆ ದಪ್ಪವಿರುವ ಪ್ಲಾಸ್ಟಿಕ್ ಹೂವುಗಳನ್ನು ಸರ್ಕಾರ ನಿಷೇಧಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಎಸೆಯುವ ಅಥವಾ ಮರುಬಳಕೆ ಮಾಡುವ ಮೊದಲು ಒಮ್ಮೆ ಮಾತ್ರ ಬಳಸುವ ಪ್ಲಾಸ್ಟಿಕ್​ಗಳನ್ನು ಏಕಬಳಕೆಯ ಪ್ಲಾಸ್ಟಿಕ್ ಎನ್ನುತ್ತಾರೆ. ಪ್ಲಾಸ್ಟಿಕ್ ಪಾತ್ರೆ, ಸ್ಟ್ರಾಗಳು, ಕಾಫಿ ಸ್ಟಿರರ್ ಗಳು, ತಂಪು ಪಾನೀಯ ಮತ್ತು ನೀರಿನ ಬಾಟಲಿ ಮುಂತಾದುವು ಏಕ ಬಳಕೆಯ ಪ್ಲಾಸ್ಟಿಕ್​ಗಳಾಗಿವೆ. ವಾರ್ಷಿಕವಾಗಿ ಸುಮಾರು 300 ಮಿಲಿಯನ್ ಟನ್ ಪ್ಲಾಸ್ಟಿಕ್ ಉತ್ಪಾದಿಸಲಾಗುತ್ತದೆ ಮತ್ತು ಇದರಲ್ಲಿ ಅರ್ಧದಷ್ಟನ್ನು ಬಳಸಿ ಎಸೆಯಲಾಗುತ್ತದೆ. ಜಾಗತಿಕವಾಗಿ ಕೇವಲ 10% ರಿಂದ 13% ಪ್ಲಾಸ್ಟಿಕ್ ಉತ್ಪನ್ನಗಳನ್ನು ಮರುಬಳಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಮುಂದಿನ 3 ತಿಂಗಳಲ್ಲಿ ಬಿಹಾರದ 27 ಲಕ್ಷ ಸಿಮ್​ಗಳು ನಿಷ್ಕ್ರಿಯ; ಯಾಕೆ ಗೊತ್ತಾ? - CYBERCRIME

ETV Bharat Logo

Copyright © 2025 Ushodaya Enterprises Pvt. Ltd., All Rights Reserved.