ನವದೆಹಲಿ: ದಕ್ಷಿಣ ದೆಹಲಿಯಲ್ಲಿ 14 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆ ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮೂವರು ಆರೋಪಿಗಳು ಆತ ಸ್ನೇಹಿತನ (ಬಾಲಕ) ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಾಲಕನಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯಿಸಿದ ಈ ಘಟನೆಯ ವಿಡಿಯೋವನ್ನು ರೆಕಾರ್ಡ್ ಮಾಡಿ, ಬಳಿಕ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತನ ತಾಯಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಹಿಂದೆ ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳ ಪೈಕಿ ಓರ್ವನು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾದ ವಿಡಿಯೋದಲ್ಲಿ ಸಂತ್ರಸ್ತ ಬಾಲಕನಿಗೆ ಚಾಕುವಿನಿಂದ ಬೆದರಿಕೆ ಹಾಕಲಾಗಿದೆ. ಆ ಬಾಲಕನ ಮೂವರು ಸ್ನೇಹಿತರು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
"ಕೆಲವು ಹುಡುಗರು ತನ್ನ 14 ವರ್ಷದ ಮಗನೊಂದಿಗೆ ಅಸ್ವಾಭಾವಿಕ ಕೃತ್ಯ ಎಸಗಿದ್ದಾರೆ ಮತ್ತು ವಿಡಿಯೋ ಕ್ಲಿಪ್ ಅನ್ನು ತನ್ನ ಮೊಬೈಲ್ ಫೋನ್ಗೆ ಕಳುಹಿಸಿದ್ದಾರೆ ಎಂದು ಸಂತ್ರಸ್ತ ಬಾಲಕನ ತಾಯಿ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ'' ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪೊಲೀಸರು ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದರು ಮತ್ತು ನಂತರ ಕೌನ್ಸೆಲಿಂಗ್ ಮಾಡಿದರು. 'ಶನಿವಾರ ಸಂಜೆ 6.30 ರ ಸುಮಾರಿಗೆ ಹೌಜ್ ಖಾಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಆಟವಾಡುತ್ತಾ ನಾನು ಮನೆಗೆ ಹೋಗುತ್ತಿದ್ದೆ. ಆಗ 12 ರಿಂದ 14 ವರ್ಷ ವಯಸ್ಸಿನ ನನ್ನ ಮೂವರು ಸ್ನೇಹಿತರು ನನ್ನನ್ನು ಪ್ರತ್ಯೇಕ ಸ್ಥಳಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಕೃತ್ಯದ ಬಗ್ಗೆ ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ' ಎಂದು ಭಯದಿಂದ ಬಾಲಕ ತನಗಾದ ನೋವನ್ನು ಪೋಷಕರ ಎದುರು ಹೇಳಿಕೊಂಡಿದ್ದ.
ಸಂತ್ರಸ್ತನ ಹೇಳಿಕೆಯ ಆಧಾರದ ಮೇಲೆ, ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವನ್ನು ಹಾಕುವ ವ್ಯಕ್ತಿಯ URL ಮತ್ತು ಇತರ ವಿವರಗಳನ್ನು ಒದಗಿಸುವಂತೆ ಪೊಲೀಸರು ಮೆಟಾಗೆ ಪತ್ರ ಬರೆದಿದ್ದಾರೆ. ಫೋರೆನ್ಸಿಕ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ವಿಡಿಯೋವನ್ನು ಸಹ ಕಳುಹಿಸಲಾಗಿದೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಟ್ರಕ್ಗಳ ಮಧ್ಯೆ ಸಿಲುಕಿ ಪ್ರಾಣ ಬಿಟ್ಟ ದಂಪತಿ; ಪವಾಡದಂತೆ ಬದುಕುಳಿದ ಮಕ್ಕಳು!