ಉನ್ನಾವ್(ಉತ್ತರ ಪ್ರದೇಶ): ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಡಬಲ್ ಡೆಕ್ಕರ್ ಬಸ್ಸೊಂದು ಹಾಲಿನ ಕಂಟೈನರ್‌ಗೆ ಡಿಕ್ಕಿಯಾಗಿ 18 ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ನತದೃಷ್ಟ ಬಸ್ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ಸಂಚರಿಸುತ್ತಿತ್ತು ಎಂದು ಹೇಳಲಾಗುತ್ತಿದೆ.
#WATCH | Uttar Pradesh: Visuals from the Lucknow-Agra Expressway in Unnao where a bus collided with a milk container in which 18 people lost their lives and 19 others were injured. pic.twitter.com/cf06cM6ehf
— ANI (@ANI) July 10, 2024
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿ, ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಘಟಿಸಿದೆ. ಅತಿ ವೇಗವಾಗಿ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
#WATCH | Uttar Pradesh: 18 people died after a double-decker bus going from Bihar to Delhi, hit a milk tanker at around 05:15 AM on the Agra-Lucknow Expressway under the Behtamujawar PS area.
— ANI (@ANI) July 10, 2024
(Visuals from CHC Hospital, Unnao) pic.twitter.com/6h9a56t3n5
ಪೊಲೀಸರು ಮೃತದೇಹಗಳನ್ನು ಗುರುತಿಸುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಹಲವರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ನಾಗ್ಪುರದಲ್ಲಿ ಎರಡು 'ಹಿಟ್ ಅಂಡ್ ರನ್' ಕೇಸ್ ; ಇಬ್ಬರು ಸಾವು - hit and run case