ETV Bharat / bharat

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ CBI ತನಿಖೆ: ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳ ಬಂಧನ! - NEET UG Paper Leak

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಶನಿವಾರ ಮತ್ತಿಬ್ಬರು ಮಾಸ್ಟರ್‌ಮೈಂಡ್‌ಗಳನ್ನು ಬಂಧಿಸಿದೆ.

CBI NABS NIT GRADUATE  MBBS STUDENTS ARREST  CBI NABS MASTERMINDS  NEET UG PAPER LEAK CBI
ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ CBI ತನಿಖೆ (ETV Bharat)
author img

By PTI

Published : Jul 21, 2024, 8:53 AM IST

ನವದೆಹಲಿ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮತ್ತಿಬ್ಬರು ಆರೋಪಿಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಅರೆಸ್ಟ್ ಮಾಡಿದೆ. ಮಂಗಳಂ ಬಿಷ್ಣೋಯ್ ಶರ್ಮಾ ಮತ್ತು ದೀಪೇಂದರ್ ಶರ್ಮಾ ಬಂಧಿತರು. ಇವರು ರಾಜಸ್ಥಾನದ ಭರತ್‌ಪುರ ವೈದ್ಯಕೀಯ ಶಾಲೆಯ ಎಂಬಿಬಿಎಸ್ ವಿದ್ಯಾರ್ಥಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಈ ಹಿಂದೆ ಸುಪ್ರೀಂ ಕೋರ್ಟ್‌ ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ನಗರಗಳು ಮತ್ತು ಪರೀಕ್ಷಾ ಕೇಂದ್ರಗಳ ಮೂಲಕ ನೀಟ್ ಫಲಿತಾಂಶಗಳನ್ನು ಪ್ರಕಟಿಸಿತ್ತು. ಈ ಫಲಿತಾಂಶವನ್ನು ಪ್ರಕಟಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಗುರುತು ಬಹಿರಂಗಪಡಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ 40ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಇತ್ತೀಚೆಗೆ ವಿಚಾರಣೆ ನಡೆಸಿತು. ಶನಿವಾರ ಮಧ್ಯಾಹ್ನ 12 ಗಂಟೆಯೊಳಗೆ ನಗರವಾರು ಹಾಗೂ ಪರೀಕ್ಷಾ ಕೇಂದ್ರವಾರು ಫಲಿತಾಂಶ ಪ್ರಕಟಿಸುವಂತೆ ಎನ್‌ಟಿಎಗೆ ಕೋರ್ಟ್ ಸೂಚಿಸಿತ್ತು.

ಪತ್ರಿಕೆ ಸೋರಿಕೆಯಾದ ಶಂಕಿತ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾದವರು ಇತರ ಕೇಂದ್ರಗಳಿಗೆ ಹೋಲಿಸಿದರೆ ಹೆಚ್ಚು ಅಂಕಗಳನ್ನು ಪಡೆದಿದ್ದಾರೆಯೇ ಎಂಬುದನ್ನು ತಿಳಿಯಲು ಈ ಪಟ್ಟಿ ಬಿಡುಗಡೆ ಮಾಡಲು ಬಯಸುತ್ತೇವೆ ಎಂದು ಕೋರ್ಟ್ ಹೇಳಿತ್ತು. ವಿದ್ಯಾರ್ಥಿಗಳ ಗುರುತು ಬಹಿರಂಗವಾಗದಂತೆ ನೋಡಿಕೊಳ್ಳಲು ಎನ್‌ಟಿಎ ವೆಬ್‌ಸೈಟ್‌ನಲ್ಲೇ ಫಲಿತಾಂಶಗಳನ್ನು ಅಪ್‌ಲೋಡ್ ಮಾಡಬೇಕು ಎಂದು ತಿಳಿಸಿ, ಮುಂದಿನ ವಿಚಾರಣೆಯನ್ನು ಜುಲೈ 22ರಂದು ಮುಂದೂಡಿದೆ.

ನೀಟ್‌ನಲ್ಲಿ ಅವ್ಯವಹಾರ ನಡೆದ ಹಿನ್ನೆಲೆಯಲ್ಲಿ ಹೆಚ್ಚು ಅಂಕ ಪಡೆದವರನ್ನು ಮರು ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಬ್ಬರು ಮಾತ್ರ 682 ಅಂಕ ಪಡೆದಿದ್ದಾರೆ. ಜೂನ್ 4ರಂದು ಬಿಡುಗಡೆಯಾದ ಫಲಿತಾಂಶದಲ್ಲಿ 67 ಮಂದಿ ಪ್ರಥಮ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿದ್ದಾರೆ. ಈ ಪೈಕಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕ ಸಿಕ್ಕಿದೆ. ಇದರಿಂದ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬರುತ್ತಿದೆ. 1,563 ಜನರ ಗ್ರೇಸ್ ಮಾರ್ಕ್ ಹಿಂಪಡೆಯುತ್ತಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಜೂನ್ 23ರಂದು ಮರು ಪರೀಕ್ಷೆ ನಡೆದಿದ್ದು, 1,563ರಲ್ಲಿ 813 ಮಂದಿ ಮಾತ್ರ ಹಾಜರಾಗಿದ್ದರು. 720 ಅಂಕ ಪಡೆದ 67 ವಿದ್ಯಾರ್ಥಿಗಳ ಪೈಕಿ ಒಬ್ಬ ವಿದ್ಯಾರ್ಥಿ ಮಾತ್ರ 682 ಅಂಕ ಗಳಿಸಿದ್ದಾನೆ. 13 ವಿದ್ಯಾರ್ಥಿಗಳು 600ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ. ಎರಡನೇ ಪರೀಕ್ಷೆಯ ನಂತರ ಎಲ್ಲಾ ನೀಟ್ ಅಭ್ಯರ್ಥಿಗಳ ಶ್ರೇಣಿಗಳು ಬದಲಾಗಿವೆ ಎಂದು ಎನ್‌ಟಿಎ ತಿಳಿಸಿದೆ.

ಇದನ್ನೂ ಓದಿ: NEET UG ಪರೀಕ್ಷೆಯ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್​ - NEET UG 2024 Result

ETV Bharat Logo

Copyright © 2024 Ushodaya Enterprises Pvt. Ltd., All Rights Reserved.