ETV Bharat / bharat

'ಸಿಬಿಎಸ್​ಇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ': ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಮಂಡಳಿ - CBSE EXAM

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಸಿಬಿಎಸ್​ಇ ಹೇಳಿದೆ.

ಸಿಬಿಎಸ್​ಇ
ಸಿಬಿಎಸ್​ಇ (ani)
author img

By ANI

Published : Feb 17, 2025, 4:53 PM IST

ನವದೆಹಲಿ: ಸಿಬಿಎಸ್ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಸೋಮವಾರ ನಿರಾಕರಿಸಿದೆ. ಇಂಥ ಆರೋಪಗಳು ಆಧಾರರಹಿತವಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಭೀತಿಯನ್ನು ಸೃಷ್ಟಿಸುವ ಪ್ರಯತ್ನವಾಗಿವೆ ಎಂದು ಅದು ಹೇಳಿದೆ.

ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳು ಶನಿವಾರ ಪ್ರಾರಂಭವಾಗಿದ್ದು, ಭಾರತ ಮತ್ತು ವಿದೇಶಗಳಲ್ಲಿನ 7,800 ಕ್ಕೂ ಹೆಚ್ಚು ಕೇಂದ್ರಗಳಲ್ಲಿ 42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಮಂಡಳಿಯ ಅಧಿಕಾರಿಗಳ ಪ್ರಕಾರ, ಒಟ್ಟು 24.12 ಲಕ್ಷ 10 ನೇ ತರಗತಿ ವಿದ್ಯಾರ್ಥಿಗಳು 84 ವಿಷಯಗಳಲ್ಲಿ ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತಿದ್ದರೆ, 17.88 ಲಕ್ಷಕ್ಕೂ ಹೆಚ್ಚು 12 ನೇ ತರಗತಿ ವಿದ್ಯಾರ್ಥಿಗಳು 120 ವಿಷಯಗಳಲ್ಲಿ ಪರೀಕ್ಷೆಗಳಿಗೆ ಹಾಜರಾಗುತ್ತಿದ್ದಾರೆ.

"ಕೆಲವೊಂದು ದುಷ್ಟ ಶಕ್ತಿಗಳು ಯೂಟ್ಯೂಬ್, ಫೇಸ್ ಬುಕ್, ಎಕ್ಸ್ (ಹಿಂದೆ ಟ್ವಿಟರ್) ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್​ಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ವದಂತಿಗಳನ್ನು ಹರಡುತ್ತಿವೆ ಎಂಬುದು ಮಂಡಳಿಯ ಗಮನಕ್ಕೆ ಬಂದಿದೆ. ಈ ಹೇಳಿಕೆಗಳು ಆಧಾರರಹಿತ ಮತ್ತು ಅನಗತ್ಯ ಭೀತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿವೆ" ಎಂದು ಸಿಬಿಎಸ್​ಇ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಸುಗಮ ಮತ್ತು ನ್ಯಾಯಸಮ್ಮತ ಪರೀಕ್ಷಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಮಂಡಳಿ ಭರವಸೆ ನೀಡಿದೆ. ಇಂತಹ ತಪ್ಪು ಮಾಹಿತಿ ಹರಡುವಿಕೆಯ ವಿರುದ್ಧ ಅದು ಎಚ್ಚರಿಕೆ ನೀಡಿದ್ದು, ಅಂಥ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ಕಂಡು ಬಂದ ವಿದ್ಯಾರ್ಥಿಗಳ ವಿರುದ್ಧ ಸಿಬಿಎಸ್ಇಯ ನಿಯಮಗಳು ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಕಾನೂನುಗಳ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.

ಸಿಬಿಎಸ್ಇ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸುಳ್ಳು ಮಾಹಿತಿಯನ್ನು ಹರಡಲು ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದೆ.

"ಪರೀಕ್ಷಾ ಪ್ರಕ್ರಿಯೆಯ ಸಮಗ್ರತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ತಪ್ಪು ಮಾಹಿತಿ ಹರಡಲು ಕಾರಣರಾದವರ ವಿರುದ್ಧ ಸಿಬಿಎಸ್ಇ ಕಾನೂನು ಕ್ರಮ ಕೈಗೊಳ್ಳಲಿದೆ" ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲೆಗಳು ಸಿಬಿಎಸ್ಇ ವೆಬ್ ಸೈಟ್ (www.cbse.gov.in) ಮತ್ತು ಅಧಿಕೃತ ಸಾರ್ವಜನಿಕ ಚಾನೆಲ್​ಗಳಲ್ಲಿ ಲಭ್ಯವಿರುವ ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಬೇಕೆಂದು ಮಂಡಳಿ ತಿಳಿಸಿದೆ. ಅನಧಿಕೃತ ಸುದ್ದಿಗಳನ್ನು ನಂಬದಂತೆ ಪೋಷಕರು ತಮ್ಮ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು ಎಂದು ಅದು ಸಲಹೆ ನೀಡಿದೆ.

ಇದನ್ನೂ ಓದಿ: ಪ್ರಾರ್ಥನಾ ಸ್ಥಳಗಳ ಕಾಯ್ದೆ: ಅರ್ಜಿಗಳ ವಿಚಾರಣೆ ಏಪ್ರಿಲ್ ಮೊದಲ ವಾರಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್ - PLACES OF WORSHIP ACT

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.