ETV Bharat / bharat

ಕಾರು ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಸಾವು, ಸಹೋದರಿ ಸ್ಥಿತಿ ಗಂಭೀರ: ಸಿಸಿಟಿವಿಯಲ್ಲಿ ಘಟನೆಯ ದೃಶ್ಯ ಸೆರೆ - car accident - CAR ACCIDENT

ಜಾರ್ಖಂಡ್‌ನ ಧನ್‌ಬಾದ್​ನಲ್ಲಿ ನಡೆದ ಕಾರು ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಅವರ ಬಾವ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಸಹೋದರಿ ಸ್ಥಿತಿ ಚಿಂತಾಜನಕವಾಗಿದೆ.

cctv-footage-of-pankaj-tripathis-brother-in-laws-car-accident-in-jharkhands-dhanbad
ಕಾರು ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಸಾವು, ಸಹೋದರಿ ಸ್ಥಿತಿ ಗಂಭೀರ
author img

By ETV Bharat Karnataka Team

Published : Apr 21, 2024, 3:50 PM IST

ಕಾರು ಅಪಘಾತದ ಸಿಸಿಟಿವಿ ದೃಶ್ಯ

ಧನ್‌ಬಾದ್ (ಜಾರ್ಖಂಡ್): ಬಾಲಿವುಡ್ ನಟ ಪಂಕಜ್ ತ್ರಿಪಾಠಿ ಅವರ ಸಹೋದರಿ ಮತ್ತು ಆಕೆಯ ಪತ್ನಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಜಾರ್ಖಂಡ್‌ನ ಧನ್‌ಬಾದ್​ನಲ್ಲಿ ಶನಿವಾರ ನಡೆದಿದೆ. ಈ ಘಟನೆಯಲ್ಲಿ ಪಂಕಜ್ ತ್ರಿಪಾಠಿ ಅವರ ಬಾವ ರಾಜೇಶ್ ತಿವಾರಿ ಅಲಿಯಾಸ್ ಮುನ್ನಾ ಮೃತಪಟ್ಟಿದ್ದರೆ, ಸಹೋದರಿ ಸರಿತಾ ತಿವಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಿಹಾರದ ಗೋಪಾಲ್‌ಗಂಜ್‌ನಿಂದ ಪಶ್ಚಿಮ ಬಂಗಾಳದ ಚಿತ್ತರಂಜನ್‌ಗೆ ರಾಜೇಶ್ ಮತ್ತು ಸರಿತಾ ಇಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ, ಮಾರ್ಗಮಧ್ಯೆ ಧನಬಾದ್‌ನ ನಿರ್ಸಾ ಪ್ರದೇಶದ ಹೆದ್ದಾರಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಕೂಡಲೇ ಎಸ್‌ಎನ್‌ಎಂಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ರಾಜೇಶ್ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಸರಿತಾ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಸರಿತಾ ತಿವಾರಿ ಸ್ಥಿತಿ ಚಿಂತಾಜನಕವಾಗಿದೆ. ಮುನ್ನಾ ತಿವಾರಿ ಚಿತ್ತರಂಜನ್‌ನಲ್ಲಿ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ರಜೆಯಲ್ಲಿದ್ದ ಅವರು ಗೋಪಾಲಗಂಜ್‌ನಲ್ಲಿರುವ ತಮ್ಮ ಮನೆಗೆ ಭೇಟಿ ನೀಡಿದ್ದರು. ವಾಪಸ್ ಹೋಗುತ್ತಿದ್ದಾಗ ಸಂಜೆ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆ: ರಾಜೇಶ್ ಮತ್ತು ಸರಿತಾ ತಿವಾರಿ ದಂಪತಿಯ ಕಾರು ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ರಾಜೇಶ್ ತಿವಾರಿ ಖುದ್ದು ಕಾರು ಚಲಾಯಿಸುತ್ತಿದ್ದರು. ದೆಹಲಿ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿ-2ರ ಮೂಲಕ ವೇಗವಾಗಿ ಹೋಗುತ್ತಿದ್ದಾಗ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿರುವುದು ದೃಶ್ಯಗಳಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ವ್ಯಾನ್​​ಗೆ ಟ್ರಕ್​ ಡಿಕ್ಕಿ: ಮದುವೆ ಮುಗಿಸಿ ವಾಪಸ್​ ಬರುತ್ತಿದ್ದ 9 ಜನರ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.