ETV Bharat / bharat

ಕರ್ನಾಟಕ ಸೇರಿದಂತೆ 15 ರಾಜ್ಯಗಳಿಗೆ ಕೇಂದ್ರದಿಂದ ವಿಪತ್ತು ಪರಿಹಾರ ನಿಧಿ ಬಿಡುಗಡೆ - FUND FOR DISASTER MITIGATION

ದೇಶದ 15 ರಾಜ್ಯಗಳಿಗೆ 1,000 ಕೋಟಿ ರೂಪಾಯಿ ವಿಪತ್ತು ಪರಿಹಾರ ನಿಧಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಪ್ರಧಾನಿ ಮೋದಿ
ಪ್ರಧಾನಿ ಮೋದಿ (ETV Bharat)
author img

By ETV Bharat Karnataka Team

Published : Nov 27, 2024, 1:21 PM IST

ನವದೆಹಲಿ: ರಾಜ್ಯಗಳ ವಿಪತ್ತು ಪರಿಹಾರ ನಿಧಿ ಮತ್ತು ನೈಸರ್ಗಿಕ ವಿಪತ್ತು ನಿಭಾಯಿಸುವ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮಂಗಳವಾರ, 15 ರಾಜ್ಯಗಳಿಗೆ 1,000 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಕರ್ನಾಟಕಕ್ಕೆ 72 ಕೋಟಿ ರೂಪಾಯಿ: ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ 139 ಕೋಟಿ ರೂ, ಮಹಾರಾಷ್ಟ್ರಕ್ಕೆ 100 ಕೋಟಿ ರೂ, ಕರ್ನಾಟಕ ಮತ್ತು ಕೇರಳಕ್ಕೆ ತಲಾ 72 ಕೋಟಿ ರೂ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ತಲಾ 50 ಕೋಟಿ ರೂ, ಈಶಾನ್ಯ ರಾಜ್ಯದ 8 ಜಿಲ್ಲೆಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ​, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್​, ಸಿಕ್ಕಿಂ ಮತ್ತು ತ್ರಿಪುರಾಕ್ಕೆ 378 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್​ ಶಾ, ಕೃಷಿ, ಹಣಕಾಸು ಸಚಿವರು ಹಾಗು ನೀತಿ ಆಯೋಗದ ಉಪಾಧ್ಯಕ್ಷರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ಈ ನಿರ್ಧಾರ ಕೈಗೊಂಡಿತು.

ಈ ಸಮಿತಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿ ಪ್ರದೇಶದಲ್ಲಿ ನಾಗರಿಕ ರಕ್ಷಣಾ ಸ್ವಯಂ ಸೇವಕರ ಸಾಮರ್ಥ್ಯ ವೃದ್ಧಿ ಮತ್ತು ತರಬೇತಿ ಯೋಜನೆಗೆ 115.67 ಕೋಟಿ ರೂ ಬಿಡುಗಡೆಗೊಳಿಸಿದೆ.​(ಐಎಎನ್ಎಸ್​)

ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರಿ ಮಳೆ; ಕಾವೇರಿ ತೀರ ಪ್ರದೇಶದಲ್ಲಿ ಹೆಚ್ಚಿನ ಬೆಳೆ ಹಾನಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.