ETV Bharat / bharat

ಇಂದು ದೆಹಲಿಯಲ್ಲಿ ಎನ್​ ಡಿಎ ಮಹತ್ವದ ಮೀಟಿಂಗ್: ಚಂದ್ರಬಾಬು ನಾಯ್ಡು ಭಾಗಿ - TODAY NDA MEETING

ಇಂದು ಮಾಜಿ ಪ್ರಧಾನಿ ವಾಜಪೇಯಿ ಅವರ 100 ನೇ ಜನ್ಮ ವಾರ್ಷಿಕೋತ್ಸವ. ಈ ಹಿನ್ನೆಲೆಯಲ್ಲಿ ಇಂದು ಮಹತ್ವದ ಎನ್​ಡಿಎ ಸಭೆ ಕೂಡ ನಡೆಯಲಿದೆ.

Chandrababu Naidu to attend NDA meeting in Delhi Today
ಇಂದು ದೆಹಲಿ ಎನ್​ ಡಿಎ ಮಹತ್ವದ ಮೀಟಿಂಗ್: ಚಂದ್ರಬಾಬು ನಾಯ್ಡು ಭಾಗಿ (IANS)
author img

By ETV Bharat Karnataka Team

Published : Dec 25, 2024, 7:09 AM IST

ಅಮರಾವತಿ, ಆಂಧ್ರಪ್ರದೇಶ: ಬುಧವಾರ ನಡೆಯುವ ಎನ್‌ಡಿಎ ಉನ್ನತ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮಂಗಳವಾರವೇ ದೆಹಲಿ ತಲುಪಿದ್ದಾರೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾಗಿರುವ ತೆಲುಗು ದೇಶಂ ಪಕ್ಷದ ನಾಯಕ ಹಾಗೂ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಆಂಧ್ರಪ್ರದೇಶದಲ್ಲಿ ಟಿಡಿಪಿ ನೇತೃತ್ವದ ಎನ್‌ಡಿಎ ಸರ್ಕಾರದ ನೇತೃತ್ವ ವಹಿಸಿರುವ ನಾಯ್ಡು ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಬುಧವಾರ ಬೆಳಗ್ಗೆ ಅಟಲ್ ಸಮಾಧಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಮಾಜಿ ಪ್ರಧಾನಿ ವಾಜಪೇಯಿ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿಇಂದು ಎನ್‌ಡಿಎ ಸಭೆ ಆಯೋಜಿಸಲಾಗಿದೆ. ರಾಜ್ಯ-ನಿರ್ದಿಷ್ಟ ವಿಷಯಗಳ ಕುರಿತು ಚರ್ಚಿಸಲು ಟಿಡಿಪಿ ಮುಖ್ಯಸ್ಥರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸುವ ಸಾಧ್ಯತೆಯಿದೆ.

ಮಹತ್ವ ಪಡೆದುಕೊಂಡ ಎನ್​ಡಿಎ ಸಭೆ: ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಎನ್‌ಡಿಎ ಸಭೆ ಮಹತ್ವ ಪಡೆದುಕೊಂಡಿದೆ. ಅದರಲ್ಲೂ ವಿಶೇಷವಾಗಿ ಭಾರತ ರತ್ನ ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ಅವರ ಟೀಕೆಗಳ ಗದ್ದಲ ಮತ್ತು ಅವರ ರಾಜೀನಾಮೆಗೆ ವಿರೋಧ ಪಕ್ಷಗಳ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಈ ಸಭೆ ಭಾರಿ ಮಹತ್ವ ಪಡೆದುಕೊಂಡಿದೆ

ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಕಾರ್ಯತಂತ್ರ: ಎನ್‌ಡಿಎ ನಾಯಕರು ಈ ಸಭೆಯಲ್ಲಿ ಪ್ರತಿಪಕ್ಷಗಳ ದಾಳಿಯನ್ನು ಎದುರಿಸುವ ಕಾರ್ಯತಂತ್ರವನ್ನು ಚರ್ಚಿಸುವ ಸಾಧ್ಯತೆಯಿದೆ. ಆಡಳಿತಾರೂಢ ಎನ್‌ಡಿಎ ಪಾಲುದಾರರಾಗಿರುವ ಚಂದ್ರಬಾಬು ನಾಯ್ಡು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಉಪಸ್ಥಿತಿಯನ್ನು ಬಳಸಿಕೊಂಡು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ಪ್ರಬಲ ಪ್ರತಿತಂತ್ರ ರೂಪಿಸುವ ಸಾಧ್ಯತೆಗಳಿವೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನದ 75 ನೇ ವರ್ಷವನ್ನು ಆಚರಿಸುವ ಚರ್ಚೆಯಲ್ಲಿ ಭಾಗವಹಿಸಿದ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಕೆಲವು ಟೀಕೆಗಳನ್ನು ಮಾಡಿದ್ದರು. ವಿರೋಧ ಪಕ್ಷಗಳು ಅವರ ಹೇಳಿಕೆಯನ್ನು ಅವಹೇಳನಕಾರಿ ಮತ್ತು ನಾಚಿಕೆಗೇಡಿತನದ್ದು ಎಂದು ಕರೆದಿದ್ದು, ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿವೆ.

ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಒತ್ತಾಯಿಸಿವೆ.ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಎನ್​ ಡಿಎ ಸಭೆಯಲ್ಲಿ ಎನ್‌ಡಿಎ ಮಿತ್ರಪಕ್ಷಗಳ ನಡುವೆ ಉತ್ತಮ ಸಮನ್ವಯ ಸಾಧಿಸುವ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

ಮೈತ್ರಿಕೂಟದ ನಾಯಕರು 'ಒಂದು ರಾಷ್ಟ್ರ ಒಂದು ಚುನಾವಣೆ' ಮತ್ತು ವಕ್ಫ್ (ತಿದ್ದುಪಡಿ) ಮಸೂದೆ, 2024 ರಂತಹ ಪ್ರಮುಖ ಶಾಸನಗಳ ಮೇಲೆ ಜಂಟಿ ಕಾರ್ಯತಂತ್ರವನ್ನು ರೂಪಿಸುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ. ಎರಡೂ ವಿಧೇಯಕಗಳನ್ನು ಜಂಟಿ ಸಂಸದೀಯ ಸಮಿತಿಗೆ ಶಿಫಾರಸು ಮಾಡಲಾಗಿದೆ.

ಇದನ್ನು ಓದಿ: 1924ರ ಬೆಳಗಾವಿ ಕಾಂಗ್ರೆಸ್​ ಅಧಿವೇಶನಕ್ಕೆ 100 ವಸಂತ: 'ಕೈ'ನಿಂದ ನವ ಸತ್ಯಾಗ್ರಹ ಬೈಠಕ್​

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಆರೋಪ: ಕಾಂಗ್ರೆಸ್​​ಗೆ ಇಸಿ ನೀಡಿದ ಸ್ಪಷ್ಟನೆ ಹೀಗಿದೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.