ಹೈದರಾಬಾದ್: ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗುರುವಾರ ರಾತ್ರಿ ಈ ದುರ್ಘಟನೆ ನಡೆದಿದ್ದು, ರೂಪಾ ದೇವಿ ಸಾವನ್ನಪ್ಪಿದ್ದಾರೆ.
ಹೈದರಾಬಾದ್ನ ಆಲ್ವಾಲ್ನ ಪಂಚಶೀಲ ಕಾಲೋನಿಯ ಮನೆಯಲ್ಲಿ ರೂಪಾ ದೇವಿ ನೇಣಿಗೆ ಶರಣಾಗಿದ್ದಾರೆ. ಇವರು ವಿಕಾರಾಬಾದ್ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸಕ ದಂಪತಿಗೆ ಇಬ್ಬರು ಮಕ್ಕಳು ಇದ್ದು, ಕಳೆದ ಎರಡು ದಿನಗಳಿಂದ ರೂಪಾ ದೇವಿ ಶಾಲೆಗೆ ತೆರಳಿರಲಿಲ್ಲ. ಶಾಸಕರು ತಮ್ಮ ಕ್ಷೇತ್ರದಲ್ಲಿನ ಕಾರ್ಯಗಳ ಹಿನ್ನೆಲೆಯಲ್ಲಿ ಬೆಳಗ್ಗೆಯೇ ತೆರಳಿದ್ದು, ರಾತ್ರಿ ಅಲ್ಲಿಯೇ ತಂಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಶಾಸಕರು ತಮ್ಮ ಕುಟುಂಬ ಹಾಗೂ ಇತರ ಸಂಬಂಧಿಗಳ ಜೊತೆಯಲ್ಲಿ ತಿರುಮಲಕ್ಕೆ ಭೇಟಿ ಕೂಡಾ ನೀಡಿದ್ದರು. ಸದ್ಯ ರೂಪದೇವಿ ದೇಹವನ್ನು ಕೊಂಪಲ್ಲಿಯ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಈ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.
ಇದನ್ನೂ ಓದಿ: 11 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕೇಸ್ ಅಡಿ ಶಾಲೆ ಪಕ್ಕದ ಅಂಗಡಿಯವ ಅರೆಸ್ಟ್