ETV Bharat / bharat

'ನಮ್ಮದು ಈಸ್ಟ್​ ಇಂಡಿಯಾ ಕಂಪನಿ ಅಲ್ಲ, ಕಲ್ಯಾಣ ರಾಜ್ಯ': ಹೈಕೋರ್ಟ್​ ಹೀಗಂದಿದ್ದೇಕೆ?

ಸಾರ್ವಜನಿಕರು ತಮ್ಮ ಕುಂದುಕೊರತೆ ಬಗೆಹರಿಸುವಂತೆ ಕೋರಿ ಮನವಿ ಸಲ್ಲಿಸಿದರೆ, ಸಕ್ಷಮ ಪ್ರಾಧಿಕಾರಿಗಳು ಅವುಗಳನ್ನು ಕಡ್ಡಾಯವಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಸೂಚನೆ ನಿಡಿದೆ.

ಹೈಕೋರ್ಟ್
High Court
author img

By ETV Bharat Karnataka Team

Published : Mar 14, 2024, 9:42 PM IST

ಬೆಂಗಳೂರು: ಸಾರ್ವಜನಿಕರು ತಮ್ಮ ಕುಂದುಕೊರತೆ ಬಗೆಹರಿಸಲು ಕೋರಿ ಸಲ್ಲಿಸಿದ್ದ ಮನವಿಯನ್ನು ಸೂಕ್ತ ರೀತಿಯಲ್ಲಿ ನಿರ್ಧಾರ ತೆಗೆದುಕೊಳ್ಳದ ಸರ್ಕಾರದ ಕ್ರಮದ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿರುವ ಹೈಕೋರ್ಟ್, 'ನಮ್ಮದು ಕಲ್ಯಾಣ ರಾಜ್ಯವಾಗಿದ್ದು, ಈಸ್ಟ್ ಇಂಡಿಯಾ ಕಂಪನಿಯಲ್ಲ' ಎಂದು ಖಾರವಾಗಿ ನುಡಿದು ಬಿಸಿ ಮುಟ್ಟಿಸಿದೆ.

ಬಳ್ಳಾರಿ ನಗರಸಭೆ ವಾರ್ಡ್‌ ನಂ.34ರ ವ್ಯಾಪ್ತಿಯಲ್ಲಿ ಉದ್ದೇಶಿತ ರೈಲ್ವೆ ಮೇಲ್ಸೇತುವೆ ಯೋಜನೆಯ ಬದಲಿಗೆ ಪರ್ಯಾಯ ಯೋಜನೆ ಕುರಿತಂತೆ ಹೈಕೋರ್ಟ್​ಗೆ ಸಿ.ಕೆ.ಮೊಯಿನುದ್ದೀನ್‌ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಬಳ್ಳಾರಿಯ ಕಂಟೊನ್ಮೆಂಟ್‌ ಪ್ರದೇಶದ ಹಳೆ ಮಸೀದಿ ಹಿಂಭಾಗದ ತಿಲಕ್‌ ನಗರ ರಸ್ತೆಯ 'ರಹೀಮ್‌ಬಾದ್‌ ಕಾಲೊನಿ ನಿವಾಸಿಗಳ ಸಂಘ'ದ ಕಾರ್ಯದರ್ಶಿ ಆಗಿರುವ ಮೊಯಿನುದ್ದೀನ್‌, ಈ ಪರ್ಯಾಯ ಯೋಜನೆ ಅನುಸರಿಸಲು ತಾವು ಸಲ್ಲಿಸಿರುವ ಮನವಿ ಪತ್ರ ಪರಿಗಣಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂದಿದೆ. ಇದರ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್.ಸುನಿಲ್ ಕುಮಾರ್, ಉದ್ದೇಶಿತ ರೈಲ್ವೆ ಮೇಲ್ಸೆತುವೆ ನಿರ್ಮಾಣದಿಂದ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸಲಿದ್ದಾರೆ. ಆದ್ದರಿಂದ, ಈಗಾಗಲೇ ರೂಪಿಸಲಾಗಿರುವ ಪರ್ಯಾಯ ಮಾರ್ಗಗಳಲ್ಲಿ ಯಾವುದಾದರೂ ಒಂದನ್ನು ಅಳವಡಿಸಿಕೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಲಾಗಿತ್ತು. ತಮ್ಮ ಮನವಿಯನ್ನು ಪ್ರಾಧಿಕಾರಗಳು ಪರಿಗಣಿಸಿಲ್ಲ ಎಂದು ನ್ಯಾಯ ಪೀಠಕ್ಕೆ ವಿವರಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯ ಪೀಠವು, ''ಸಾರ್ವಜನಿಕರು ತಮ್ಮ ಕುಂದುಕೊರತೆ ಬಗೆಹರಿಸುವಂತೆ ಕೋರಿ ಮನವಿ ಸಲ್ಲಿಸಿದರೆ, ಸಕ್ಷಮ ಪ್ರಾಧಿಕಾರಗಳು ಅವುಗಳನ್ನು ಕಡ್ಡಾಯವಾಗಿ ಪರಿಗಣಿಸಿ ತಮ್ಮ ನಿರ್ಧಾರಗಳನ್ನು ತಡಮಾಡದೇ ಅರ್ಜಿದಾರರಿಗೆ ತಿಳಿಸಬೇಕು. ಅದು ಬಿಟ್ಟು ಸರ್ಕಾರ ನಮ್ಮ ಮನವಿ ಪರಿಗಣಿಸಿಲ್ಲ ಎಂದು ಆಕ್ಷೇಪಿಸಿ ಸಾರ್ವಜನಿಕರು ಕೋರ್ಟ್‌ ಮೆಟ್ಟಿಲೇರುವಂತಾಗಬಾರದು'' ಎಂದು ಅಸಮಾಧಾನ ವ್ಯಕ್ತಪಡಿಸಿತು.

ಮುಂದುವರೆದು, ''ನಮ್ಮದು ಕಲ್ಯಾಣ ರಾಜ್ಯವಾಗಿದೆ. ಈಸ್ಟ್ ಇಂಡಿಯಾ ಕಂಪನಿಯಡಿ ನಾವು ಜೀವನ ಮಾಡುತ್ತಿಲ್ಲ. ಮನವಿ ಪರಿಗಣಿಸಿಲ್ಲ ಎಂದೇಳಿ ಸಾರ್ವಜನಿಕರು ನ್ಯಾಯಾಲಯದ ಮೆಟ್ಟಿಲು ತುಳಿಯುವಂತೆ ಅಸಹಾಯಕರನ್ನಾಗಿ ಮಾಡಬಾರದು'' ಎಂದು ತಾಕೀತು ಮಾಡಿದ ನ್ಯಾಯಪೀಠ, ಅಂತಿಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳು ಅರ್ಜಿದಾರರ ಮನವಿಯನ್ನು ಆರು ವಾರಗಳಲ್ಲಿ ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು. ಆ ನಿರ್ಧಾರವನ್ನು ಅರ್ಜಿದಾರರಿಗೆ ಅಂಚೆ ಮೂಲಕ ತಿಳಿಸಬೇಕು ಎಂದು‌ ಅರ್ಜಿ ಇತ್ಯರ್ಥಪಡಿಸಿತು.

ಇದನ್ನೂ ಓದಿ: ಬೋರ್ಡ್ ಪರೀಕ್ಷೆ ಪ್ರಶ್ನಿಸಿದ್ದ ಅರ್ಜಿ ವಿಸ್ತೃತ ಪೀಠಕ್ಕೆ ವರ್ಗಾವಣೆ ಕೋರಿದ್ದ ಮನವಿ ತಿರಸ್ಕೃತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.