ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾವಿನ ಕುರಿತು ಸುಳ್ಳು ಸುದ್ದಿ ಬಿತ್ತರಿಸಿದ ಯುಟ್ಯೂಬ್ ಚಾನಲ್ ವಿರುದ್ಧ ಗಾಜಿಯಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ನಾಯಕ ರಾಜೇಶ್ ಸಿಂಗ್ ಗಾಜಿಯಬಾದ್ನ ಶಾಲಿಮರ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಈ ದೂರನ್ನು ಸಲ್ಲಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಾವಿನ ಕುರಿತು ಸುಳ್ಳು ಸುದ್ದಿಯನ್ನು ಯೂಟ್ಯೂಬ್ ಚಾನೆಲ್ ಒಂದು ಪ್ರಸಾರ ಮಾಡಿದ ಹಿನ್ನೆಲೆ ಈ ದೂರು ದಾಖಲಿಸಲಾಗಿದೆ. ರಕ್ಷಣಾ ಸಚಿವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ಈ ಸುಳ್ಳು ಸುದ್ದಿ ಕುರಿತು ಆತಂಕ ವ್ಯಕ್ತಪಡಿಸಿದ ಸ್ಥಳೀಯ ಬಿಜೆಪಿ ನಾಯಕ ರಾಜೇಶ್ ಸಿಂಗ್, ಸುಳ್ಳು ಸುದ್ದಿ ಮೂಲಕ ಜನರನ್ನು ದಾರಿ ತಪ್ಪಿಸುತ್ತಿರುವ ಯೂಟ್ಯೂಬ್ ಚಾನಲ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ರೀತಿಯ ಸುದ್ದಿಗಳು ದೇಶದ ಭದ್ರತೆಗೆ ಮಾತ್ರ ಧಕ್ಕೆ ತರುವುದಿಲ್ಲ. ಇದು ಸಾಮಾಜಿಕ ಅಸ್ಥಿರತೆಗೆ ಕಾರಣವಾಗುತ್ತದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಪ್ರಕರಣ ಸಂಬಂಧ ಪೊಲೀಸರು ದೂರು ಸ್ವೀಕರಿಸಿದ್ದು, ಈ ಕುರಿತು ಕ್ರಮ ಕೈಗೊಳ್ಳಲಾಗುವುದು. ಹಾಗೇ ಯೂಟ್ಯೂಬ್ ಚಾನೆಲ್‌ನ ಖಾತೆಯನ್ನು ರದ್ದುಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮೈಮೇಲೆ 25 ಕೆ.ಜಿ ಚಿನ್ನ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿರಿವಂತ ಕುಟುಂಬ!: ವಿಡಿಯೋ ನೋಡಿ