ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಪ್ಯಾರಿ ದೀದಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂಪಾಯಿ ನೀಡಲಾಗುವುದು ಎಂದು ಸೋಮವಾರ ದೆಹಲಿ ಕಾಂಗ್ರೆಸ್ ಘೋಷಿಸಿದೆ. ಕರ್ನಾಟಕ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ದೆಹಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಅವರು ರಾಜ್ಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಯೋಜನೆ ಘೋಷಣೆ ಮಾಡಿದರು.
ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, "ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ನಮ್ಮ ಪಕ್ಷ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವುದಾಗಿ ಭರವಸೆ ನೀಡಿತ್ತು. ಸರ್ಕಾರ ರಚನೆಯಾದ ನಂತರ ಆ ಭರವಸೆಯನ್ನು ಈಡೇರಿಸಿದ್ದೇವೆ. ಈಗ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ ಜೊತೆಗೆ ಚುನಾವಣೆಗೂ ಮುನ್ನ ಭರವಸೆ ನೀಡಿದ್ದ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಕೆಲಸವನ್ನೂ ನಮ್ಮ ಸರ್ಕಾರ ಮಾಡಿದೆ" ಎಂದರು.
दिल्ली के लिए कांग्रेस की गारंटी 📢
— Delhi Congress (@INCDelhi) January 6, 2025
✨प्यारी दीदी योजना ✨
महिलाओं को हर महीने 2,500 रुपए
pic.twitter.com/qjP2WafxuV
ನಮ್ಮ ಸರ್ಕಾರಗಳು ಭರವಸೆಗಳನ್ನು ಈಡೇರಿಸಿವೆ: ದೆಹಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಮಾತನಾಡಿ,"ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸೇರಿದಂತೆ ನಮ್ಮ ಸರ್ಕಾರ ಎಲ್ಲೆಲ್ಲಿ ಅಧಿಕಾರದಲ್ಲಿದ್ದೇವೆಯೋ ಅಲ್ಲಿ ಚುನಾವಣೆಗೂ ಮೊದಲು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಾಗಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವಿದೆ, ಅದು ವೇಷಧಾರಿ ಮತ್ತು ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತದೆ. ಅವರ ಮಾತಿಗೆ ಮರುಳಾಗಬೇಡಿ ಎಂದು ನಾವು ಜನರಿಗೆ ಮನವಿ ಮಾಡುತ್ತೇವೆ.
ಶೀಲಾ ದೀಕ್ಷಿತ್ ಅವರ ಸರ್ಕಾರದ ಅವಧಿಯಲ್ಲಿ ಮಾಡಿದ ಎಲ್ಲ ಘೋಷಣೆಗಳನ್ನು ಕಾಂಗ್ರೆಸ್ ಈಡೇರಿಸಿದೆ ಮತ್ತು ಈಗ ನಾವು ಮತ್ತೆ ಭರವಸೆ ನೀಡುತ್ತಿದ್ದೇವೆ. ದೆಹಲಿಯಲ್ಲಿ ಸರ್ಕಾರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ಯಾರಿ ದೀದಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ.ನೀಡುತ್ತೇವೆ" ಎಂದು ತಿಳಿಸಿದರು.
ಈ ಬಾರಿ ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ: ಮಹಿಳಾ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಲ್ಕಾ ಲಂಬಾ ಅವರು ಕರ್ನಾಟಕದ ಮಹಿಳೆಯೊಬ್ಬರ ಪಾಸ್‌ಬುಕ್‌ನ ಪ್ರತಿ ತೋರಿಸಿ, ನಮ್ಮ ಸರ್ಕಾರವು ಅವರ ಖಾತೆಗೆ ನೇರವಾಗಿ ತಿಂಗಳಿಗೆ 2,000 ರೂ. ಹಾಕುವ ಕೆಲಸ ಮಾಡಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಪಂಜಾಬ್‌ನ ಮಹಿಳೆಯರನ್ನು ದೆಹಲಿಗೆ ಕರೆತಂದು ಅವರ ಪಾಸ್‌ಬುಕ್‌ಗಳ ಪ್ರತಿ ತೋರಿಸುತ್ತಾರೆ ಮತ್ತು ಅವರ ಸರ್ಕಾರ 1,000 ರೂ. ನೀಡುವ ಭರವಸೆ ಈಡೇರಿಸಿದೆ ಎಂದು ಹೇಳುತ್ತಾರೆ ಎಂದು ನಾವು ಭಾವಿಸಿದ್ದೇವೆ. ನಾವು ಈಗ ಆ ದಿನಕ್ಕಾಗಿ ಕಾಯುತ್ತಿದ್ದೇವೆ. ಈ ಬಾರಿ ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ತ.ನಾಡು ವಿಧಾನಸಭೆಯಲ್ಲಿ ಅಣ್ಣಾ ವಿವಿ ಅತ್ಯಾಚಾರ ಘಟನೆ ಪ್ರತಿಧ್ವನಿ: ಎಐಎಡಿಎಂಕೆ ಸದಸ್ಯರ ತೆರವು