ETV Bharat / bharat

ದೆಹಲಿ ಚುನಾವಣೆಯಲ್ಲಿ ಎಎಪಿ ಜೊತೆ ಮೈತ್ರಿ ಇಲ್ಲ: ಕಾಂಗ್ರೆಸ್​ ಪ್ರದೇಶ ಅಧ್ಯಕ್ಷ ದೇವೆಂದರ್ ಯಾದವ್ - DELHI ASSEMBLY ELECTION

ದೆಹಲಿ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಏಕಾಂಗಿಯಾಗಿ ಎದುರಿಸಲಿದೆ. ಆಪ್​ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ದೆಹಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದೇವೆಂದರ್ ಯಾದವ್ ಸ್ಪಷ್ಟಪಡಿಸಿದ್ದಾರೆ.

ದೇವೆಂದರ್ ಯಾದವ್
ದೇವೆಂದರ್ ಯಾದವ್ (ANI)
author img

By ETV Bharat Karnataka Team

Published : Nov 30, 2024, 3:22 PM IST

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಏಕಾಂಗಿಯಾಗಿ ಎದುರಿಸಲಿದೆ. ಆಮ್ ಆದ್ಮಿ ಪಕ್ಷ (ಎಎಪಿ)ದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ದೆಹಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದೇವೆಂದರ್ ಯಾದವ್ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಎಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದಿದ್ದರೆ, ಒಂದು ಅಥವಾ ಎರಡು ಸ್ಥಾನಗಳನ್ನು ಗೆಲ್ಲಬಹುದಿತ್ತು. ನಾವು ನಡೆಸುತ್ತಿರುವ ನ್ಯಾಯ ಯಾತ್ರೆಯಲ್ಲಿ ಎಎಪಿ ವಿರುದ್ಧ ಭಾರಿ ಜನವಿರೋಧಿ ಅಲೆ ಇರುವುದು ತೋರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ದೆಹಲಿ ಜನರ ಕೆಂಗಣ್ಣಿಗೆ ನಾವೇಕೆ ಗುರಿಯಾಗಬೇಕು? ಎಂದು ಪ್ರಶ್ನಿಸಿದರು.

ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಸಿಗುತ್ತಿಲ್ಲ, ಬಡವರಿಗೆ ಪಡಿತರ ಚೀಟಿ ಸಿಗುತ್ತಿಲ್ಲ, ರಸ್ತೆಗಳು ಹಾಳಾಗಿವೆ, ಮಾಲಿನ್ಯ ಮಿತಿ ಮೀರಿದೆ, ಯುವಕರು ನಿರುದ್ಯೋಗಿಗಳಿದ್ದಾರೆ. ಮಹಿಳೆಯರು ಹಣದುಬ್ಬರದಿಂದ ಕಂಗೆಟ್ಟಿದ್ದಾರೆ, ಕೇವಲ ಪ್ರದರ್ಶನಕ್ಕಾಗಿ ಎಎಪಿ ಮೊಹಲ್ಲಾ ಕ್ಲಿನಿಕ್‌ಗಳನ್ನು ತೆರೆದಿದೆ. ಇದು ಕೇಜ್ರಿವಾಲ್ ಮಾದರಿ ಎಂದು ಟೀಕಿಸಿದ್ದಾರೆ.

ಗೆದ್ದ ನಂತರ ನಾಯಕನ ಆಯ್ಕೆ: ನಾವು ಜಿಲ್ಲಾ ಮಟ್ಟದಲ್ಲಿ ಅಭ್ಯರ್ಥಿಗಳ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ ಮತ್ತು ನಮ್ಮ ನಾಯಕರಿಂದ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತೇವೆ. ನಾವು ಮೊದಲೇ ಸಿಎಂ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ. ನಾವು ಎಲ್ಲಾ 70 ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ. ನಾವು ಗೆದ್ದ ನಂತರ ನಮ್ಮ ನಾಯಕನನ್ನು ಆಯ್ಕೆ ಮಾಡುತ್ತೇವೆ. ಅದೇ ವಿಧಾನವನ್ನು ದೆಹಲಿಯಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದರು.

ಕಾಂಗ್ರೆಸ್ ಮುಖಂಡರು "ನ್ಯಾಯ ಯಾತ್ರೆ" ಮುಗಿಸಿ ಡಿಸೆಂಬರ್ 6 ರಂದು ಎಲ್ಲಾ 70 ವಿಧಾನಸಭಾ ಸ್ಥಾನಗಳಲ್ಲಿ ಶಕ್ತಿ ಪ್ರದರ್ಶನ ನಡೆಸಲು ಯೋಜಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ವಿವಾದ ಸೃಷ್ಟಿಸಿದ ಕಾಂಗ್ರೆಸ್​ ಮುಖಂಡ ಭಾಯ್ ಜಗತಾಪ್ ಹೇಳಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.