ETV Bharat / bharat

ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ: 5ನೇ ಸಾಲಿನಲ್ಲಿ ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿಗೆ ಸ್ಥಾನ- ಕಾಂಗ್ರೆಸ್​ ಆಕ್ಷೇಪ - Rahul Gandhi Seat Row - RAHUL GANDHI SEAT ROW

78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಅವರಿಗೆ ನೀಡಲಾದ ಆಸನ ಸಾಲಿನ ಬಗ್ಗೆ ಕಾಂಗ್ರೆಸ್​ ಅಸಮಾಧಾನ ವ್ಯಕ್ತಪಡಿಸಿದೆ.

ಐದನೇ ಸಾಲಿನಲ್ಲಿ ವಿಪಕ್ಷ ನಾಯಕ ರಾಹುಲ್​ ಗಾಂಧಿಗೆ ಸ್ಥಾನ
ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಐದನೇ ಸಾಲಿನಲ್ಲಿ ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿಗೆ ಸ್ಥಾನ (ANI)
author img

By PTI

Published : Aug 15, 2024, 6:29 PM IST

ನವದೆಹಲಿ: ಕೆಂಪುಕೋಟೆಯಲ್ಲಿ ಇಂದು ನಡೆದ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಒಲಿಂಪಿಕ್ಸ್​​ ಆಟಗಾರರು, ದೇಶದ ವಿವಿಧ ರಾಜ್ಯಗಳಿಂದ ಆಹ್ವಾನಿತ ಸಾರ್ವಜನಿಕರು, ಗಣ್ಯರು ಭಾಗಿಯಾಗಿದ್ದರು. ವಿಶೇಷವೆಂದರೆ, ಒಲಿಂಪಿಕ್ಸ್​ ಆಟಗಾರರಿಗೆ ಮೊದಲ ಸಾಲಿನಲ್ಲಿ ಕೂರಲು ಅವಕಾಶ ನೀಡಲಾಗಿತ್ತು.

ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಗೆ ಐದನೇ ಸಾಲಿನಲ್ಲಿ ಆಸನ ನಿಗದಿ ಮಾಡಲಾಗಿತ್ತು. ರಕ್ಷಣಾ ಸಚಿವಾಲಯದ ಈ ನಡೆಯ ಬಗ್ಗೆ ಕಾಂಗ್ರೆಸ್​ ಅಸಮಾಧಾನ ವ್ಯಕ್ತಪಡಿಸಿದೆ.

ಸಂಸತ್ತಿನಲ್ಲಿ ಪ್ರಧಾನಿ ಬಳಿಕದ ಸ್ಥಾನ ಪ್ರತಿಪಕ್ಷ ನಾಯಕರಿಗೆ ಇದೆ. ಆದರೆ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರನ್ನು ಹಿಂಬದಿ ಸಾಲಿನಲ್ಲಿ ಕೂರಿಸುವ ಮೂಲಕ ರಾಜಕೀಯ ಮಾಡಲಾಗಿದೆ ಎಂದು ಟೀಕಿಸಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕಾರ್ಯಕ್ರಮದಲ್ಲಿ ಐದನೇ ಸಾಲಿನಲ್ಲಿ ಸೀಟು ನೀಡಲಾಗಿದೆ. ಅವರು ಕಾರ್ಯಕ್ರಮದಲ್ಲಿ ಹಾಜರಾಗಿರಲಿಲ್ಲ. ಇದು ಪ್ರೋಟೋಕಾಲ್ ಉಲ್ಲಂಘನೆ ಎಂದು ಕಾಂಗ್ರೆಸ್​ ದೂರಿದೆ.

"ರಕ್ಷಣಾ ಸಚಿವಾಲಯವು ಕ್ಷುಲ್ಲಕವಾಗಿ ವರ್ತಿಸುತ್ತಿದೆಯೇ? ಲೋಕಸಭೆಯ ಪ್ರತಿಪಕ್ಷ ನಾಯಕರನ್ನು ಐದನೇ ಸಾಲಿನಲ್ಲಿ ಕುಳ್ಳಿರಿಸಿದೆ. ಕ್ಯಾಬಿನೆಟ್ ಸಚಿವರಿಗಿಂತ ಪ್ರತಿಪಕ್ಷ ನಾಯಕನ ಸ್ಥಾನ ದೊಡ್ಡದು. ಲೋಕಸಭೆಯಲ್ಲಿ ಪ್ರಧಾನಿಯ ನಂತರದ ಸ್ಥಾನವಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಷ್ಟ್ರೀಯ ಕಾರ್ಯಕ್ರಮಗಳನ್ನೂ ರಾಜಕೀಯಗೊಳಿಸುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ" ಎಂದು ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ವಿವೇಕ್ ತಂಖಾ ಹೇಳಿದ್ದಾರೆ.

ಎಐಸಿಸಿ ಕಾರ್ಯಾಧ್ಯಕ್ಷ ಬಿ.ಎಂ.ಸಂದೀಪ್ ಮಾತನಾಡಿ, "ರಾಹುಲ್ ಗಾಂಧಿ ಅವರು ಎನ್‌ಡಿಎ ಸರ್ಕಾರದ ವಿರುದ್ಧ ಸತತ ವಾಗ್ದಾಳಿ ನಡೆಸಿದ್ದರಿಂದ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಅವರನ್ನು ಹಿಂಬದಿ ಕೂರಿಸಲಾಗಿದೆ. ಲೋಕಸಭೆಯಲ್ಲೂ ಅವರ ಮೈಕ್​ ಅನ್ನು ಸ್ತಬ್ಧ ಮಾಡಲಾಗುತ್ತದೆ. ವಿಪಕ್ಷ ನಾಯಕನ ಸ್ಥಾನ ಸಾಂವಿಧಾನಿಕವಾಗಿದೆ. ಸರ್ಕಾರ ಇದನ್ನು ನಿರ್ಲಕ್ಷಿಸಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ನಡೆದುಕೊಳ್ಳಬೇಕು" ಎಂದು ಹೇಳಿದ್ದಾರೆ.

ಸರ್ಕಾರದ ಸ್ಪಷ್ಟನೆ ಏನು?: ಮೊದಲೆರಡು ಸಾಲಿನಲ್ಲಿ ಪ್ಯಾರಿಸ್​​ನಲ್ಲಿ ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಒಲಿಂಪಿಕ್​ ಆಟಗಾರರಿಗೆ ಮೀಸಲಿಡಲಾಗಿತ್ತು. ಹೀಗಾಗಿ ಹಿಂದಿನ ಸಾಲಿನಲ್ಲಿ ಮಂತ್ರಿಗಳು, ಪ್ರತಿಪಕ್ಷ ನಾಯಕರಿಗೆ ಸ್ಥಾನ ನಿಗದಿ ಮಾಡಲಾಗಿತ್ತು. ಇದರಲ್ಲಿ ಯಾವುದೇ ರಾಜಕೀಯ ಮಾಡಿಲ್ಲ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಜನರ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ; ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನಿ ಭಾಷಣ - Modi address nation

ETV Bharat Logo

Copyright © 2025 Ushodaya Enterprises Pvt. Ltd., All Rights Reserved.