ETV Bharat / bharat

ಬಿಜೆಪಿಯು ಮಣಿಪುರವನ್ನು ಸುಟ್ಟು ಹಾಕಲು ಬಯಸಿದೆ: ಮಲ್ಲಿಕಾರ್ಜುನ್​ ಖರ್ಗೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗಿದ್ದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರು ಕಟುವಾಗಿ ಟೀಕಿಸಿದ್ದಾರೆ.

ಮಲ್ಲಿಕಾರ್ಜುನ್​ ಖರ್ಗೆ
ಮಲ್ಲಿಕಾರ್ಜುನ್​ ಖರ್ಗೆ (ANI)
author img

By PTI

Published : 2 hours ago

ನವದೆಹಲಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್ರೆಸ್​​ ಸೇರಿದಂತೆ ವಿಪಕ್ಷಗಳು ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿ ಮಣಿಪುರವನ್ನು ಸುಟ್ಟು ಹಾಕಲು ಬಯಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಆರೋಪಿಸಿದ್ದಾರೆ.

ಎಕ್ಸ್​​​ ಖಾತೆಯಲ್ಲಿ ಮಣಿಪುರ ಸಂಘರ್ಷದ ಬಗ್ಗೆ ಬರೆದುಕೊಂಡಿರುವ ಖರ್ಗೆ ಅವರು, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ರಾಜ್ಯವನ್ನು ನಾಶ ಮಾಡಲು ಮುಂದಾಗಿದೆ. ಉದ್ದೇಶಪೂರ್ವಕವಾಗಿ ಸಂಘರ್ಷವನ್ನು ತಡೆಯುತ್ತಿಲ್ಲ. ದ್ವೇಷಪೂರಿತ ವಿಭಜಕ ರಾಜಕಾರಣವನ್ನು ಮಾಡುತ್ತಿದೆ ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಇಲ್ಲಿನ ಸಮಸ್ಯೆಯನ್ನು ಸರಿಪಡಿಸಲು ಅವರು ರಾಜ್ಯಕ್ಕೆ ಎಂದೂ ಭೇಟಿ ನೀಡಿಲ್ಲ. ರಾಜ್ಯದ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಮತ್ತು ಮರೆಯುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಜನರ ಭವಿಷ್ಯ ಹಾಳಾಗಿದೆ: ನರೇಂದ್ರ ಮೋದಿ ಅವರೇ, ನಿಮ್ಮ ಡಬಲ್ ಎಂಜಿನ್ ಸರ್ಕಾರದಲ್ಲಿ, ಮಣಿಪುರವೂ ಒಂದಾಗಿಲ್ಲ, ಸುರಕ್ಷಿತವೂ ಅಲ್ಲ. ಮೇ 2023 ರಿಂದ ರಾಜ್ಯದ ಜನರು ಊಹಿಸಲಾಗದ ನೋವು ಮತ್ತು ಹಿಂಸೆಗೆ ಒಳಗಾಗಿದ್ದಾರೆ. ಇದು ಅಲ್ಲಿನ ಜನರ ಭವಿಷ್ಯವನ್ನು ನಾಶಪಡಿಸಿದೆ ಎಂದು ಕಿಡಿಕಾರಿದ್ದಾರೆ.

ನವೆಂಬರ್ 7 ರಿಂದ ಮತ್ತೆ ಸಂಘರ್ಷ ಶುರುವಾಗಿದೆ. ಅಲ್ಲಿಂದ ಕನಿಷ್ಠ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಲಹ ಪೀಡಿತ ಪ್ರದೇಶಗಳ ಪಟ್ಟಿಗೆ ಹೊಸ ಜಿಲ್ಲೆಗಳು ಸೇರಿವೆ. ಈಶಾನ್ಯ ರಾಜ್ಯಗಳಿಗೂ ಈ ಬೆಂಕಿ ಹರಡುತ್ತಿದೆ ಎಂದಿದ್ದಾರೆ.

ದಳ್ಳುರಿಯಲ್ಲಿ ಮಣಿಪುರ: ಸುಂದರ ಮಣಿಪುರವನ್ನು ನೀವು ದಳ್ಳುರಿಗೆ ದೂಡಿದ್ದೀರಿ. ಪ್ರಧಾನಿಗಳೇ, ನೀವು ಭವಿಷ್ಯದಲ್ಲಿ ಮಣಿಪುರಕ್ಕೆ ಭೇಟಿ ನೀಡಿದರೂ, ರಾಜ್ಯದ ಜನರು ಎಂದಿಗೂ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮೊದಲು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಮಣಿಪುರದಲ್ಲಿ ಇತ್ತೀಚಿನ ಹಿಂಸಾತ್ಮಕ ಘರ್ಷಣೆಗಳು ಮತ್ತು ನಿರಂತರ ರಕ್ತಪಾತಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿ ಈ ಪ್ರದೇಶದಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಮಧ್ಯೆ, ಮಣಿಪುರದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಚುನಾವಣಾ ರ್ಯಾಲಿಗಳನ್ನು ರದ್ದು ಮಾಡಿ, ದೆಹಲಿಗೆ ವಾಪಸ್​ ಆಗಿದ್ದಾರೆ. ಅಲ್ಲಿ ಆಗುತ್ತಿರುವ ಬೆಳಗಣಿಗೆಗಳ ಬಗ್ಗೆ ತೀವ್ರ ನಿಗಾ ವಹಿಸಿದ್ದಾರೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ ರ್ಯಾಲಿ ರದ್ದುಗೊಳಿಸಿ ದೆಹಲಿಗೆ ವಾಪಸ್​ ತೆರಳಿದ ಕೇಂದ್ರ ಗೃಹಸಚಿವ ಅಮಿತ್​ ಶಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.