ETV Bharat / bharat

ರಾಜ್ಯದ 17 ಕ್ಷೇತ್ರಗಳಿಗೆ ಕಾಂಗ್ರೆಸ್​ ಅಭ್ಯರ್ಥಿಗಳು ಪ್ರಕಟ; ಐವರು ಸಚಿವರ ಮಕ್ಕಳಿಗೆ ಟಿಕೆಟ್; ಸುರಪುರ ವಿಧಾನಸಭೆ ಉಪಚುನಾವಣೆಗೂ ಅಭ್ಯರ್ಥಿ ಘೋಷಣೆ - Lok Sabha Elections - LOK SABHA ELECTIONS

Congress Lok Sabha Candidates List: ಕರ್ನಾಟಕದ 17 ಕ್ಷೇತ್ರಗಳು ಸೇರಿ ಇತರ ರಾಜ್ಯಗಳ 57 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಪ್ರಕಟಿಸಿದೆ.

Lok Sabha election
Lok Sabha election
author img

By ETV Bharat Karnataka Team

Published : Mar 21, 2024, 9:28 PM IST

Updated : Mar 21, 2024, 10:19 PM IST

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ 17 ಕ್ಷೇತ್ರಗಳು ಸೇರಿ ಇತರ ರಾಜ್ಯಗಳ 57 ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಕರ್ನಾಟಕದ ಐವರು ಸಚಿವರ ಮಕ್ಕಳಿಗೆ ಟಿಕೆಟ್​ ದೊರೆತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಾರಿಯ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ರಾಜ್ಯದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಇದೀಗ ಬಾಕಿ ಉಳಿದ 21 ಕ್ಷೇತ್ರಗಳ ಪೈಕಿ ಕಲಬುರಗಿ, ಮೈಸೂರು ಸೇರಿದಂತೆ ರಾಜ್ಯದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಮೂಲಕ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಇನ್ನು ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಾಕಿ ಉಳಿಸಿಕೊಂಡಿದೆ.

ಎಐಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಮಂಗಳವಾರ ರಾತ್ರಿ ನಡೆದ ಕೇಂದ್ರ ಚುನಾವಣ ಸಮಿತಿ (ಸಿಇಸಿ)ಯ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿಯಲ್ಲಿ ಖರ್ಗೆ ಸೋಲು ಕಂಡಿದ್ದರು. ಈ ಬಾರಿ ಕಲಬುರಗಿಯಲ್ಲಿ ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್​ ಪ್ರಕಟಿಸಲಾಗಿದೆ. ಆದರೆ, ಯಾವೊಬ್ಬ ಹಾಲಿ ಸಚಿವರನ್ನೂ ಅಖಾಡಕ್ಕೆ ಇಳಿಸಿಲ್ಲ. ಸಚಿವರ ಬದಲಿಗೆ ಅವರ ಮಕ್ಕಳಿಗೆ ಮಣೆ ಹಾಕಲಾಗಿದೆ.

ಖರ್ಗೆ ಅಳಿಯನಿಗೆ ಟಿಕೆಟ್: ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೇ ಸ್ಪರ್ಧಿಸಬೇಕೆಂದು ಸಾಕಷ್ಟು ಬೇಡಿಕೆ ಇತ್ತು. ಆದರೆ, ನಿರೀಕ್ಷೆಯಂತೆ ಖರ್ಗೆ ಈ ಬಾರಿ ಸ್ಪರ್ಧಿಸದಿರಲು ನಿರ್ಧರಿಸಿದ್ದು, ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಟಿಕೆಟ್ ನೀಡಿದ್ದಾರೆ. ರಾಧಾಕೃಷ್ಣ ಉದ್ಯಮಿಯಾಗಿದ್ದು, ರಾಜಕೀಯವಾಗಿ ಯಾವತ್ತೂ ತೆರೆಮರೆಯಲ್ಲೇ ಕೆಲಸ ಮಾಡಿದವರು. ಗುರುಮಿಠ್ಕಲ್ ಕ್ಷೇತ್ರದಲ್ಲಿ ರಾಧಾಕೃಷ್ಣ ಹೆಚ್ಚು ಚಿರಪರಿಚಿತ ವ್ಯಕ್ತಿಯಾಗಿದ್ದಾರೆ.

ಐವರು ಸಚಿವರ ಮಕ್ಕಳಿಗೆ ಮಣೆ: ರಾಜ್ಯದ 17 ಅಭ್ಯರ್ಥಿಗಳ ಪೈಕಿ ಐವರು ಸಚಿವರ ಮಕ್ಕಳಿಗೆ ಮಣೆ ಹಾಕಲಾಗಿದೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಅಖಾಡಕ್ಕೆ ಇಳಿಸಲಾಗಿದೆ. ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ್ ಪ್ರಬಲ ಲಾಬಿ ಮಧ್ಯೆಯೂ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಅವರಿಗೆ ಟಿಕೆಟ್​ ನೀಡಲಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಅವಕಾಶ ನೀಡಲಾಗಿದೆ. ಅದೇ ರೀತಿ ಬೀದರ್ ಕ್ಷೇತ್ರದಲ್ಲಿ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಅವರಿಗೆ ಟಿಕೆಟ್​ ಕೊಡಲಾಗಿದೆ. ಬೀದರ್ ಕ್ಷೇತ್ರಕ್ಕೆ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಪ್ರಬಲ ಆಕಾಂಕ್ಷಿಯಾಗಿದ್ದರು.

ಶಾಮನೂರು ಸೊಸೆ, ಮಾಜಿ ಸಚಿವರ ಪುತ್ರರಿಗೆ ಟಿಕೆಟ್: ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ನಿರೀಕ್ಷೆಯಂತೆಯೇ ಶಾಮನೂರು ಶಿವಶಂಕರಪ್ಪರ ಸೊಸೆ ಹಾಗೂ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲಾಗಿದೆ.‌ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿ ಖಾನ್ ಅವರಿಗೆ ಬೆಂಗಳೂರು ಕೇಂದ್ರದಿಂದ ಟಿಕೆಟ್ ನೀಡಲಾಗಿದೆ.

ಹೊಸ ಮುಖಗಳಿಗೆ ಟಿಕೆಟ್: ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್​ ಅಸೂಟಿ ಅವರಿಗೆ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ನವಲಗುಂದ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ವಿನೋದ ಅಸೂಟಿ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಎನ್.ಎಚ್.ಕೋನರಡ್ಡಿ ಕಾಂಗ್ರೆಸ್ ಸೇರಿದ್ದರಿಂದ ಅವರಿಗೆ ಟಿಕೆಟ್ ಕೈ ತಪ್ಪಿತ್ತು. ಕ್ಷೇತ್ರದಲ್ಲಿ ಕುರುಬ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಅಸೂಟಿ ಅವರಿಗೆ ಮಣೆ ಹಾಕಲಾಗಿದೆ.

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲೂ ಕಾಂಗ್ರೆಸ್ ಹೊಸ‌ ಮುಖಕ್ಕೆ ಮಣೆ ಹಾಕಿದೆ. ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಿಲ್ಲವ ಸಮುದಾಯದ ಯುವ ನಾಯಕರಾಗಿರುವ ಅವರು, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಶಿಷ್ಯನಾಗಿದ್ದಾರೆ. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲೂ ತೊಡಗಿಸಿಕೊಂಡಿದ್ದಾರೆ.

ಎಂ.ಲಕ್ಷ್ಮಣ್​ಗೆ ಮೈಸೂರು ಟಿಕೆಟ್: ಮೈಸೂರಲ್ಲಿ ಸಕ್ರಿಯರಾಗಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿದ ಪಕ್ಷದ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಕಳೆದೆರಡು ವರ್ಷಗಳಿಂದ ಕೊಡುಗು ಜಿಲ್ಲೆಯ ಉಸ್ತುವಾರಿಯಾಗಿ ಲಕ್ಷ್ಮಣ್ ದುಡಿಯುತ್ತಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ, ರಾಜ ವಂಶಸ್ಥ ಯದುವೀರ್ ಒಡೆಯರ್‌ ಅವರಿಗೆ ಮಣೆ ಹಾಕಿದೆ. ಈ ಹಿನ್ನೆಲೆಯಲ್ಲಿ ಲಕ್ಷ್ಮಣ್ ಮೂಲಕ ಒಕ್ಕಲಿಗ ಸಮುದಾಯದ ಮತಗಳನ್ನು ತನ್ನ ಪರವಾಗಿ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ.

ಇನ್ನೂ ನಾಲ್ಕು ಕ್ಷೇತ್ರ ಬಾಕಿ: ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಸೇರಿದಂತೆ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ಕೋಲಾರದಿಂದ ರಾಜ್ಯಸಭೆ ಮಾಜಿ ಸದಸ್ಯ ಡಾ.ಎಲ್‌.ಹನುಮಂತಯ್ಯ, ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅಳಿಯನ ನಡುವೆ ಟಿಕೆಟ್‌ಗಾಗಿ ಪೈಪೋಟಿ ನಡೆದಿದೆ. ಚಾಮರಾಜನಗರ ಕ್ಷೇತ್ರದಿಂದ ಸಚಿವ ಹೆಚ್.ಸಿ.ಮಹದೇವಪ್ಪ ಅಖಾಡಕ್ಕೆ ಇಳಿಯಲು ಆಸಕ್ತಿ ಹೊಂದಿಲ್ಲ. ತಮ್ಮ ಬದಲು ಮಗ ಸುನಿಲ್ ಬೋಸ್ ಕಣಕ್ಕಿಳಿಸುವಂತೆ ಒತ್ತಡ ಹೇರುತ್ತಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಕ್ಷೇತ್ರದಲ್ಲಿ ಮಹದೇವಪ್ಪನವರೇ ನಿಲ್ಲುವಂತೆ ಪಟ್ಟು ಹಿಡಿದಿದ್ದಾರೆ. ಇದರಿಂದ ಚಾಮರಾಜನಗರ ಗೊಂದಲ ಹಾಗೇ ಮುಂದುವರಿದಿದೆ.

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಪುತ್ರ ಹಾಗೂ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ರಕ್ಷಾ ರಾಮಯ್ಯ ಮುಂಚೂಣಿಯಲ್ಲಿದ್ದಾರೆ. ಇದೇ ವೇಳೆ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಕೂಡ ತೀವ್ರ ಲಾಬಿ ನಡೆಸುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡದೇ ಹಾಗೇ ಉಳಿಸಿಕೊಂಡಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲೂ ತೀವ್ರ ಪೈಪೋಟಿ ಉಂಟಾಗಿದೆ. ಉಗ್ರಪ್ಪ, ಸಚಿವ ನಾಗೇಂದ್ರ ಸಂಬಂಧಿ, ವೆಂಕಟೇಶ್ ಪ್ರಸಾದ್ ಆಕಾಂಕ್ಷಿಗಳಾಗಿದ್ದಾರೆ. ಆದರೆ ಕೊನೆಗೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕ ತುಕಾರಾಂ ಹೆಸರು ಫೈನಲ್ ಆಗಿದೆ ಎನ್ನಲಾಗಿದೆ. ಇನ್ನು ಎರಡು ದಿನಗಳಲ್ಲಿ ಈ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಇಂದು ಪ್ರಕಟವಾದ 17 ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ.

  • ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ
  • ಬೆಳಗಾವಿ - ಮೃಣಾಲ್ ಹೆಬ್ಬಾಳ್ಕರ್​
  • ಬಾಗಲಕೋಟೆ - ಸಂಯುಕ್ತಾ ಪಾಟೀಲ್
  • ಗುಲಬರ್ಗಾ - ರಾಧಾಕೃಷ್ಣ
  • ರಾಯಚೂರು - ಜಿ.ಕುಮಾರ ನಾಯಕ್
  • ಬೀದರ್​ - ಸಾಗರ್ ಖಂಡ್ರೆ
  • ಕೊಪ್ಪಳ - ರಾಜಶೇಖರ್​ ಬಸವರಾಜ ಹಿಟ್ನಾಳ್
  • ಧಾರವಾಡ - ವಿನೋದ್ ಅಸೂಟಿ
  • ಉತ್ತರ ಕನ್ನಡ - ಅಂಜಲಿ ನಿಂಬಾಳ್ಕರ್
  • ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ್
  • ಉಡುಪಿ-ಚಿಕ್ಕಮಗಳೂರು - ಜಯಪ್ರಕಾಶ್ ಹೆಗ್ಡೆ
  • ದಕ್ಷಿಣ ಕನ್ನಡ - ಪದ್ಮರಾಜ್
  • ಚಿತ್ರದುರ್ಗ - ಬಿ.ಎನ್​.ಚಂದ್ರಪ್ಪ
  • ಮೈಸೂರು - ಎಂ. ಲಕ್ಷ್ಮಣ್
  • ಬೆಂಗಳೂರು ದಕ್ಷಿಣ​ - ಸೌಮ್ಯ ರೆಡ್ಡಿ
  • ಬೆಂಗಳೂರು ಸೆಂಟ್ರಲ್​ - ಮನ್ಸೂರ್ ಅಲಿ ಖಾನ್
  • ಬೆಂಗಳೂರು ಉತ್ತರ - ರಾಜೀವ್​ ಗೌಡ

Last Updated : Mar 21, 2024, 10:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.