ನವದೆಹಲಿ: ದೇಶದಾದ್ಯಂತ ಲೋಕಸಭೆ ಚುನಾವಣೆಯ ಅತ್ಯಂತ ಪ್ರಮುಖ ಘಟ್ಟ ಮತ ಎಣಿಕೆ ಇಂದು (ಮಂಗಳವಾರ) ಬೆಳಗ್ಗೆ 7.30ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯಲಾಯಿತು. ಬೆಳಗ್ಗೆ 8ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಆರಂಭಿಸಲಾಗಿದೆ. ಪ್ರಸ್ತುತ ಆರಂಭಿಕ ಮುನ್ನಡೆ ಪಡೆದುಕೊಂಡಿದೆ.
ದೇಶದ ವಿವಿಧೆಡೆಯ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಸುಮಾರು 64.2 ಕೋಟಿ ಮತದಾರರು ನೀಡಿರುವ ತೀರ್ಪು ಸಂಜೆಯೊಳಗೆ ಸ್ಪಷ್ಟವಾಗುತ್ತದೆ.

ಏಪ್ರಿಲ್ 19ರಿಂದ ಆರಂಭವಾಗಿದ್ದ ಲೋಕಸಭೆ ಚುನಾವಣೆಯ ಮತದಾನ ಜೂನ್ 1ರವರೆಗೂ ಜರುಗಿತ್ತು. ಹೀಗಾಗಿ ಸುದೀರ್ಘವಾಗಿ ನಡೆದ ಚುನಾವಣಾ ಪ್ರಕ್ರಿಯೆ ಎಂಬ ದಾಖಲೆಯನ್ನೂ ಬರೆದಿದೆ. ಹಲವು ಅಡೆತಡೆಗಳು, ಸಾಕಷ್ಟು ಸವಾಲುಗಳ ಮಧ್ಯೆ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿ ಚುನಾವಣಾ ಪ್ರಕ್ರಿಯೆ ಮುಗಿಸಿತ್ತು. ಜೊತೆಗೆ ಇಂದು ನಡೆಯುವ ಮತ ಎಣಿಕೆಯೊಂದಿಗೆ ಈ ಎಲ್ಲಾ ಪ್ರಕ್ರಿಯೆಗಳೂ ಮುಕ್ತಾಯ ಹಂತಕ್ಕೆ ತಲುಪಿದೆ.
ಇದನ್ನೂ ಓದಿ: ಜಡ್ಜ್ಮೆಂಟ್ ಡೇ: ಅಂಚೆ ಮತ ಎಣಿಕೆ ಆರಂಭ, ಗೆಲುವಿಗಾಗಿ ದೇವರ ಮೊರೆ ಹೋದ ಅಭ್ಯರ್ಥಿಗಳು - LOK SABHA ELECTION RESULTS 2024