ಆಗ್ರಾ, ಉತ್ತರಪ್ರದೇಶ: ಗುರು - ಶಿಷ್ಯರ ನಡುವಿನ ಸಂಬಂಧಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕನೊಬ್ಬ ಕಿರುಕುಳ ನೀಡಿದ್ದಾನೆ. ಇದಲ್ಲದೇ ಅಶ್ಲೀಲ ಫೋಟೊ, ವಿಡಿಯೋಗಳನ್ನೂ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಶಿಕ್ಷಕ ವಿದ್ಯಾರ್ಥಿನಿಗೆ ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಭಾನುವಾರ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಶಿಕ್ಷಕನ ವಿರುದ್ಧ ದೂರು ದಾಖಲಿಸಿದ್ದಾಳೆ. ಆರೋಪಿ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಶಾಲೆಯಲ್ಲಿ ಕಿರುಕುಳ, ಕುಟುಂಬಕ್ಕೆ ಬೆದರಿಕೆ: ಈ ಪ್ರಕರಣ ಆಗ್ರಾ ಜಿಲ್ಲೆಯ ಪಿಧೌರಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಭಾನುವಾರ 14 ವರ್ಷದ 8 ನೇ ತರಗತಿ ವಿದ್ಯಾರ್ಥಿನಿ ಪೊಲೀಸರನ್ನು ಸಂಪರ್ಕಿಸಿ ತನಗಾದ ನೋವಿನ ಅನುಭವವನ್ನು ದೂರಿನ ಮೂಲಕ ಹಂಚಿಕೊಂಡಿದ್ದಾಳೆ. 2023ರ ನವೆಂಬರ್‌ನಲ್ಲಿ ತನ್ನ ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕರೊಬ್ಬರು ನನಗೆ ಶಾಲೆಯಲ್ಲಿಯೇ ಕಿರುಕುಳ ನೀಡಿದ್ದರು. ನಾನು ಅದನ್ನು ಪ್ರತಿಭಟಿಸಿದೆ ಮತ್ತು ಈ ವಿಷಯವನ್ನು ಪೋಷಕರಿಗೆ ತಿಳಿಸಿದೆ. ಆದರೆ ಆತ ನಮ್ಮ ಕುಟುಂಬಕ್ಕೂ ಬೆದರಿಕೆ ಹಾಕಿದ್ದಾನೆ. ಆರೋಪಿ ಶಿಕ್ಷಕ ತನ್ನ ಹೆತ್ತವರು ಮತ್ತು ಸಹೋದರನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ: ನಮ್ಮ ಪೋಷಕರು ಶಿಕ್ಷಕರ ಬಳಿ ತೆರಳಿ ಘಟನೆ ಬಗ್ಗೆ ವಿಚಾರಿಸಿದಾಗ ಆತ ಮತ್ತೊಮ್ಮೆ ಬೆದರಿಕೆ ಹಾಕಿದ್ದಾನೆ. ಇದರಿಂದ ಕುಟುಂಬಸ್ಥರು ಭಯಭೀತರಾಗಿದ್ದರು. ಆರೋಪಿ ಶಿಕ್ಷಕ ತನ್ನ ಮೊಬೈಲ್‌ನಿಂದ ವಿದ್ಯಾರ್ಥಿನಿಯ ಕೆಲವು ಅಶ್ಲೀಲ ಫೋಟೋಗಳು ಮತ್ತು ಅಶ್ಲೀಲ ವಿಡಿಯೋಗಳನ್ನು ಸೆರೆ ಹಿಡಿದಿದ್ದಾನೆ. ಅವುಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಶೋಷಣೆ ಮಾಡತೊಡಗಿದ್ದ. ಹೀಗಾಗಿ ನಾನು ಶಿಕ್ಷಕನಿಂದ ಬೇಸತ್ತು ಶಾಲೆಗೆ ಹೋಗುವುದನ್ನು ನಿಲ್ಲಿಸಿದೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾಳೆ.
ಪೋಕ್ಸೋ ಪ್ರಕರಣ ದಾಖಲು: ಭಾನುವಾರ ಸಂತ್ರಸ್ತೆ ಆರೋಪಿ ಶಿಕ್ಷಕನ ವಿರುದ್ಧ ಲಿಖಿತ ದೂರು ನೀಡಿದ್ದಾರೆ. ವಿದ್ಯಾರ್ಥಿನಿಯ ದೂರಿನ ಮೇರೆಗೆ ಆರೋಪಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪಿಧೌರಾ ಪೊಲೀಸ್ ಠಾಣೆ ಪ್ರಭಾರಿ ಉದಯವೀರ್ ಸಿಂಗ್ ಹೇಳಿದ್ದಾರೆ.
ಓದಿ: ಭಾರತೀಯ ನೌಕಾಪಡೆಯ 8 ಮಾಜಿ ಯೋಧರ ಬಿಡುಗಡೆ ಮಾಡಿದ ಕತಾರ್: 7 ಮಂದಿ ಭಾರತಕ್ಕೆ ಆಗಮನ