ನವದೆಹಲಿ: ನವದೆಹಲಿಯ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಬಳಿಕ ಜನದಟ್ಟಣೆ ನಿರ್ವಹಣೆಗೆ ಇದೀಗ ದೆಹಲಿ ಪೊಲೀಸರೊಂದಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯನ್ನು ನಿಯೋಜಿಸಲಾಗಿದೆ. ಹಿರಿಯ ಸಿಆರ್ಪಿಎಫ್ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಜನಸಂದಣಿ ನಿರ್ವಹಣೆ ಹೆಚ್ಚಿಸಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು 6 ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಗಳನ್ನು ನಿಲ್ದಾಣದಲ್ಲಿ ನಿಯೋಜಿಸಿದ್ದಾರೆ. ವಿವಿಧ ಜಿಲ್ಲೆಗಳಿಂದ ಬಂದಿರುವ ಈ ಅಧಿಕಾರಿಗಳನ್ನು ವಿಶೇಷವಾಗಿ ದೇಶದ ಅತ್ಯಂತ ಜನನಿಬಿಡ ಸಾರಿಗೆ ಕೇಂದ್ರಗಳ ಪೈಕಿ ಒಂದಾದ ನವದೆಹಲಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.
ಈಗಾಗಲೇ ದಟ್ಟಣೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವ, ಯಶಸ್ವಿಯಾಗಿ ನಿರ್ವಹಿಸಿರುವ ವಿವಿಧ ಜಿಲ್ಲೆಗಳ ಅಧಿಕಾರಿಗಳು ಇವರಾಗಿದ್ದಾರೆ. ಇವರಲ್ಲಿ ಕೆಲವರು ನಿಲ್ದಾಣಗಳಲ್ಲಿ ಎಸ್ಎಚ್ಒ ಆಗಿ ಕಾರ್ಯನಿರ್ವಹಿಸಿದ್ದು, ಜನಸಂದಣಿಯಲ್ಲಿ ಲಾಜಿಸ್ಟಿಕ್ ಮತ್ತು ಭದ್ರತಾ ಸವಾಲುಗಳನ್ನು ಅರ್ಥೈಸಿಕೊಂಡು ಕೆಲಸ ಮಾಡಲಿದ್ದಾರೆ.
ಶನಿವಾರ ದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದಲ್ಲಿ 18 ಜನರು ಸಾವನ್ನಪ್ಪಿದ್ದರು.
ಇದನ್ನೂ ಓದಿ: ದೆಹಲಿ ಕಾಲ್ತುಳಿತ: ತನಿಖಾ ಸಮಿತಿ ರಚನೆ, ಮೃತರಿಗೆ ₹10 ಲಕ್ಷ ಪರಿಹಾರ ಘೋಷಿಸಿದ ರೈಲ್ವೆ
ಇದನ್ನೂ ಓದಿ: ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ?: ಪ್ರತ್ಯಕ್ಷದರ್ಶಿಗಳ ಮಾತು