ETV Bharat / bharat

ಶಂಕಿತ ಉಗ್ರರ ಗುಂಡಿನ ದಾಳಿ: ಸಿಆರ್‌ಪಿಎಫ್ ಯೋಧ ಹುತಾತ್ಮ - CRPF jawan killed

ಮಣಿಪುರದ ಜಿರಿಬಾಮ್ ಜಿಲ್ಲೆಯ ಮೊಂಗ್‌ಬಂಗ್ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಗೆ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ.

ಭದ್ರತಾ ಪಡೆಗಳ ಕಾರ್ಯಾಚರಣೆ
ಭದ್ರತಾ ಪಡೆಗಳ ಕಾರ್ಯಾಚರಣೆ (ETV Bharat)
author img

By PTI

Published : Jul 14, 2024, 4:01 PM IST

Updated : Jul 14, 2024, 5:03 PM IST

ಇಂಫಾಲ್(ಮಣಿಪುರ): ಇಲ್ಲಿನ ಜಿರಿಬಾಮ್ ಜಿಲ್ಲೆಯ ಮೊಂಗ್‌ಬಂಗ್ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಹಾರ ಮೂಲದ ಅಜಯ್ ಕುಮಾರ್ ಝಾ (43) ಹುತಾತ್ಮರಾದ ಯೋಧ. ಘಟನೆಯಲ್ಲಿ ಓರ್ವ ಪೊಲೀಸ್ ಕಾನ್​ಸ್ಟೇಬಲ್​ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಲೆಗೆ ಗುಂಡು ತಗುಲಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಯೋಧ ಮೃತಪಟ್ಟಿದ್ದಾರೆ. ಗಾಯಗೊಂಡ ಪೊಲೀಸ್ ಕಾನ್​ಸ್ಟೇಬಲ್ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಶನಿವಾರ ರಾತ್ರಿಯೂ ಗ್ರಾಮದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಭಾನುವಾರದ ದಾಳಿಯ ನಂತರ ಪಕ್ಕದ ಬೆಟ್ಟ ಪ್ರದೇಶಗಳಿಂದ ಮೊಂಗ್‌ಬಂಗ್‌ನಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಗುಂಡಿನ ದಾಳಿಯಲ್ಲಿ ಭದ್ರತಾ ಸಿಬ್ಬಂದಿಗೆ ಸೇರಿದ ವಾಹನಕ್ಕೂ ಹಾನಿಯಾಗಿದೆ ಎಂದು ಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಎರಡು ತಿಂಗಳಲ್ಲಿ ಇಬ್ಬರು ಪುತ್ರರನ್ನು ದೇಶಕ್ಕೆ ಅರ್ಪಿಸಿದ ಕುಟುಂಬ! - Uttarakhand Family Mourns Soldiers

Last Updated : Jul 14, 2024, 5:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.