ETV Bharat / bharat

ಉಗ್ರರೂಪ ತಾಳಿದ ರೆಮಲ್ ಚಂಡಮಾರುತಕ್ಕೆ 27 ಜನ ಬಲಿ; ಬೀದಿಗೆ ಬಿದ್ದ 250ಕ್ಕೂ ಹೆಚ್ಚು ಕುಟುಂಬಗಳು - CYCLONE REMAL EFFECT

ರೆಮಲ್ ಚಂಡಮಾರುತ ಈಶಾನ್ಯ ರಾಜ್ಯಗಳ ಮೇಲೂ ತೀವ್ರ ಪರಿಣಾಮ ಬೀರುತ್ತಿದೆ. ಭಾರೀ ಮಳೆಯಿಂದಾಗಿ ಮಿಜೋರಾಂನ ವಿವಿಧ ಭಾಗಗಳಲ್ಲಿ ಸಂಭವಿಸಿದ ಅವಘಡಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

HEAVY RAIN  SHELTER FOR PEOPLE  TRIPURA MINISTER  RELIEF CAMPS
ಬೀದಿಗೆ ಬಿದ್ದ 250ಕ್ಕೂ ಹೆಚ್ಚು ಕುಟುಂಬಗಳು (ಕೃಪೆ: Associated Press)
author img

By ANI

Published : May 29, 2024, 1:08 PM IST

Updated : May 29, 2024, 1:16 PM IST

ಅಗರ್ತಲಾ (ಮಿಜೋರಾಂ): ಪಶ್ಚಿಮ ಬಂಗಾಳದಲ್ಲಿ ಅನಾಹುತ ಸೃಷ್ಟಿಸಿದ್ದ ರೆಮಲ್ ಚಂಡಮಾರುತ ಈಶಾನ್ಯ ರಾಜ್ಯಗಳಲ್ಲಿ ಭಾರಿ ಪರಿಣಾಮ ಬೀರಿದೆ. ಚಂಡಮಾರುತದ ಪ್ರಭಾವದಿಂದಾಗಿ ಮಿಜೋರಾಂನಲ್ಲಿ ವಿವಿಧ ಅಪಘಾತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿದೆ. ಐಜ್ವಾಲ್‌ನ ಉಪನಗರದಲ್ಲಿ ಭಾರೀ ಮಳೆಯಿಂದಾಗಿ ಕಲ್ಲು ಕ್ವಾರಿ ಕುಸಿದು ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿದೆ. 8 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಐಜೋಲ್ ಬಳಿಯ ಹ್ಲಿಮೆನ್​ನಲ್ಲಿ ಭೂಕುಸಿತದಿಂದಾಗಿ ಹಲವಾರು ಮನೆಗಳು ಕುಸಿದಿವೆ. ಈ ಘಟನೆಯಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ನಾಪತ್ತೆಯಾಗಿದ್ದಾರೆ.

ರೂ. 4 ಲಕ್ಷ ಪರಿಹಾರ ಪ್ರಕಟಿಸಿದ ಸಿಎಂ: ಮಿಜೋರಾಂನಲ್ಲಿ ಇಂದು ಕೂಡ ಹಲವು ಸ್ಥಳಗಳಲ್ಲಿ ಮಳೆಯಾಗಲಿದೆ. ಗುಡುಗು ಮತ್ತು ಮಿಂಚು ಸಹಿತ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಟಿಸಿದೆ. ಕಲ್ಲು ಕ್ವಾರಿ ಕುಸಿತ ಮತ್ತು ಮಳೆಯಿಂದ ಉಂಟಾದ ಅನಾಹುತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಲಾಲ್ದುಹೋಮ ₹ 4 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ರಾಜ್ಯ ವಿಪತ್ತು ಪರಿಹಾರ ನಿಧಿಗೆ ರೂ.15 ಕೋಟಿ ನೀಡುವುದಾಗಿ ಅವರು ಘೋಷಿಸಿದ್ದಾರೆ.

ಸಿಎಂ ಲಾಲ್ದುಹೋಮ ಅವರು ಪರಿಸ್ಥಿತಿ ಅವಲೋಕಿಸಲು ಉನ್ನತಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ಭಾರೀ ಮಳೆಯ ಹಿನ್ನೆಲೆ ಮಿಜೋರಾಂನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ತುರ್ತು ಸೇವೆಗಳನ್ನು ಒದಗಿಸುವವರನ್ನು ಹೊರತುಪಡಿಸಿ ಎಲ್ಲಾ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ಮಿಜೋರಾಂ ಸರ್ಕಾರ ಆದೇಶಿಸಿದೆ. ರೆಮಲ್ ಚಂಡಮಾರುತದ ಪ್ರಭಾವದಿಂದಾಗಿ ಮಿಜೋರಾಂನಲ್ಲಿ ಸುಮಾರು 150 ಮನೆಗಳು ನಾಶವಾಗಿವೆ. ಹತ್ತಾರು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಅಸ್ಸೋಂನಲ್ಲಿ ನಾಲ್ವರು ಸಾವು: ರೆಮಲ್ ಚಂಡಮಾರುತದ ಪ್ರಭಾವದಿಂದ ಅಸ್ಸೋಂನಲ್ಲಿಯೂ ಭಾರೀ ಮಳೆಯಾಗುತ್ತಿದೆ. ಅಸ್ಸೋಂನಲ್ಲಿ ಮಂಗಳವಾರ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ. ಕಮ್ರೂಪ್ ಜಿಲ್ಲೆಯಲ್ಲಿ ಮರ ಬಿದ್ದು 60 ವರ್ಷದ ಲಾಬನ್ಯಾ ಕುಮಾರಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಉಳಿದಂತೆ ಮರ ಬಿದ್ದು ಬಾಲಕನೊಬ್ಬ ಅಸುನೀಗಿದ್ದು, ಆತನ ತಂದೆ ಗಾಯಗೊಂಡಿದ್ದಾರೆ.

ಒಡಿಶಾಗೆ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ತೆರಳಿದ್ದ ಅಸ್ಸೋಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಈ ಕೆಟ್ಟ ವಾತಾವರಣ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದರು. ಗಂಟೆಗೆ 15 ಕಿಲೋಮೀಟರ್ ವೇಗದಲ್ಲಿ ಚಂಡಮಾರುತ ಈಶಾನ್ಯ ದಿಕ್ಕಿಗೆ ಚಲಿಸುತ್ತಿದ್ದು, ಮಂಗಳವಾರ ರಾತ್ರಿ ದುರ್ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಎಲ್ಲಾ ಜನರು ಮನೆಯಲ್ಲಿಯೇ ಇರಲು ಮತ್ತು ತುರ್ತು ಕೆಲಸಗಳಿಗಾಗಿ ಮಾತ್ರ ಹೊರಗೆ ಬರಲು ಸೂಚಿಸಲಾಗಿದೆ.

ಸಾರಿಗೆ ಸಚಿವ ಹೇಳಿದ್ದು ಹೀಗೆ: ತ್ರಿಪುರಾ ಸಾರಿಗೆ ಮತ್ತು ಪ್ರವಾಸೋದ್ಯಮ ಸಚಿವ ಸುಶಾಂತ ಚೌಧರಿ ಮಾತನಾಡಿ, ಮಂಗಳವಾರ 'ರೆಮಲ್' ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ 246 ಕುಟುಂಬಗಳ ಒಟ್ಟು 746 ಜನರನ್ನು ಸ್ಥಳಾಂತರಿಸಲಾಗಿದೆ. ಸೋಮವಾರ ರಾತ್ರಿ ಎಡೆಬಿಡದೆ ಸುರಿದ ಮಳೆಯಿಂದಾಗಿ ಕೆಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದಡದ ತಗ್ಗು ಪ್ರದೇಶಗಳನ್ನು ಜಲಾವೃತವಾಗಿವೆ. ಪರಿಣಾಮ ಅಲ್ಲಿನ ಜನರು ರಾಜ್ಯದ ವಿವಿಧ ಭಾಗಗಳಲ್ಲಿ ತೆರೆದಿರುವ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ದಾಖಲೆ ಮಳೆ: ಕಳೆದ 24 ಗಂಟೆಗಳಲ್ಲಿ ಇಂದು ಬೆಳಗ್ಗೆ 8:30ರ ವರೆಗೆ ರಾಜ್ಯದಲ್ಲಿ ಸರಾಸರಿ 215.5 ಮಿಲಿಮೀಟರ್ ಮಳೆ ದಾಖಲಾಗಿದೆ. ಇದೊಂದು ದಾಖಲೆ. ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಅದು 252.4 ಮಿ.ಮೀ, ದಕ್ಷಿಣ ತ್ರಿಪುರಾ ಜಿಲ್ಲೆಯಲ್ಲಿ ಕಡಿಮೆ ಮಳೆ 168 ಮಿ.ಮೀ ದಾಖಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ನೆಲಕಚ್ಚಿದ ಕೃಷಿ ಬೆಳೆ: ಚಂಡಮಾರುತದಿಂದ ಮುಳುಗಡೆಯಾದ ಕೃಷಿ ಭೂಮಿಯ ಒಟ್ಟು ವಿಸ್ತೀರ್ಣ 397 ಹೆಕ್ಟೇರ್ ಆಗಿದ್ದು, ಅದರಲ್ಲಿ 1,764 ರೈತರು ಹಾನಿಗೊಳಗಾಗಿದ್ದಾರೆ. ಅಂದಾಜು 3,804 ಮೆಟ್ರಿಕ್ ಟನ್ ಉತ್ಪಾದನೆ ನಷ್ಟವಾಗಿದೆ. ಇದು ಹಣದ ಲೆಕ್ಕದಲ್ಲಿ 8 ಕೋಟಿ ರೂಪಾಯಿ ದಾಟುತ್ತದೆ. ಜಿಲ್ಲೆಗಳಿಂದ ನಮಗೆ ಇಷ್ಟು ಮಾಹಿತಿ ಲಭಿಸಿದೆ ಎಂದು ಸಚಿವರು ಹೇಳಿದರು.

ನಿರಾಶ್ರಿತರಾದ 746 ಮಂದಿ: ತ್ರಿಪುರಾದಲ್ಲಿ ರೆಮಲ್ ಚಂಡಮಾರುತದ ಪ್ರಭಾವದಿಂದ ಧಾರಾಕಾರ ಮಳೆಯಿಂದಾಗಿ 246 ಕುಟುಂಬದ 746 ಜನರು ನಿರಾಶ್ರಿತರಾಗಿದ್ದಾರೆ. ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ ವಿದ್ಯುತ್ ವ್ಯತ್ಯಯದಿಂದ ಕೃಷಿ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ.

ಒಟ್ಟು 15 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 746 ಜನರು ಆಶ್ರಯ ಪಡೆದಿದ್ದಾರೆ. ಅಗರ್ತಲಾದಲ್ಲಿರುವ ಪರಿಹಾರ ಶಿಬಿರಕ್ಕೆ ತ್ರಿಪುರಾ ಸಿಎಂ ಮಾಣಿಕ್​ ಸಹಾ ಭೇಟಿ ನೀಡಿದ್ದರು. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಅಗತ್ಯ ವಸ್ತುಗಳ ಸಾಕಷ್ಟು ದಾಸ್ತಾನು ಲಭ್ಯವಿದೆ. ಜನರಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಮೇಘಾಲಯದಲ್ಲಿ ಮಳೆ ಸಂಬಂಧಿತ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಓದಿ: ಮಿಜೋರಾಂ: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿದು 12 ಮಂದಿ ಸಾವು, ಹಲವರು ನಾಪತ್ತೆ - Stone quarry collapsed

Last Updated : May 29, 2024, 1:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.