ಲಕ್ನೋ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಮಸೀದಿ ಕಟ್ಟಡದ ಸರ್ವೇ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಇಂಟರ್ನೆಟ್ ಸ್ಥಗಿತ ಸೇರಿದಂತೆ ನಗರಕ್ಕೆ ಹೊರಗಿನವರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ನವೆಂಬರ್ 30ರವರೆಗೂ ಈ ಆದೇಶ ಜಾರಿಯಲ್ಲಿರಲಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಅಡಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಅಧಿಕಾರಿಗಳ ಅನುಮತಿಯಿಲ್ಲದೇ ಯಾರೂ ಕೂಡಾ ಒಜಿಲ್ಲೆಯ ಗಡಿ ದಾಟಿ ಪ್ರವೇಶ ಮಾಡುವಂತಿಲ್ಲ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಆದೇಶ ಉಲ್ಲಂಘನೆ ಬಿಎನ್ಎಸ್ ಸೆಕ್ಷನ್ 223ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಎಚ್ಚರಿಸಲಾಗಿದೆ.
#WATCH | Drone visuals from Uttar Pradesh's Sambhal where an incident of stone pelting took place when a survey team arrived to conduct a survey of Shahi Jama Masjid yesterday
— ANI (@ANI) November 25, 2024
Security has been enhanced in the area. pic.twitter.com/lvgyJ6kWfW
ನಗರಕ್ಕೆ ಯಾವುದೇ ಸಾರ್ವಜನಿಕ ಪ್ರತಿನಿಧಿಗಳು ಕೂಡ ಭೇಟಿ ನೀಡುವಂತಿಲ್ಲ. ಸಾರ್ವಜನಿಕರು ಗುಂಪುಗೂಡುವಿಕೆಯನ್ನೂ ನಿರ್ಬಂಧಿಸಲಾಗಿದೆ. ಸಂಭಾಲ್ ಪ್ರದೇಶದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದ್ದು, ಶಾಲಾ, ಕಾಲೇಜ್ಗಳನ್ನು ಬಂದ್ ಮಾಡಲಾಗಿದೆ.
ಭಾನುವಾರ ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಪೊಲೀಸರು 21 ಮಂದಿಯನ್ನು ಬಂಧಿಸಿದ್ದಾರೆ. ಹಲವರ ಮನೆಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ ಇಬ್ಬರು ಮಹಿಳೆಯರಿದ್ದು, ಸಿಸಿಟಿವಿ ಕ್ಯಾಮೆರಾ ಮೂಲಕ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ವಿವಾದವೇನು?: ಮೊಘಲ್ ಕಾಲದ ಇಲ್ಲಿನ ಮಸೀದಿ ಇದ್ದ ಜಾಗದಲ್ಲಿ ಹಿಂದೂ ದೇವಾಲಯವಿತ್ತು. ದೇವಾಲಯ ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ಹಿಂದೂ ಅರ್ಜಿದಾರರೊಬ್ಬರು ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಮಸೀದಿ ಸರ್ವೇಗೆ ನ.19ರಂದು ಆದೇಶಿಸಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ವೇಗೆ ತೆರಳಿದ್ದಾಗ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಹಿಂಸಾಚಾರ ಉಂಟಾಗಿದೆ.
ಪೊಲೀಸರ ಮೇಲೆ ಕಲ್ಲು ತೂರಾಟ: ಪೊಲೀಸರು ಮಸೀದಿ ಪ್ರವೇಶಿಸದಂತೆ ಅನೇಕರು ತಡೆದಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ 10 ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
#WATCH | Uttar Pradesh: On the stone pelting incident in Sambhal, DIG, Moradabad Range, Muniraj G says " the current situation in sambhal is peaceful. police have been deployed at important places. last night, we confirmed three deaths but today while undergoing treatment in… pic.twitter.com/kjYQp4sYZZ
— ANI (@ANI) November 25, 2024
ನಾಲ್ವರು ಸಾವು: ಘಟನೆಯನ್ನು ಹತೋಟಿಗೆ ತರಲು ಪೊಲೀಸರು ಟಿಯರ್ ಗ್ಯಾಸ್ ಹಾರಿಸಿದ್ದು, ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಭದ್ರತಾ ಪಡೆ ಬೀಡುಬಿಟ್ಟಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮಸೀದಿ ಸರ್ವೇ ವೇಳೆ ಹಿಂಸಾಚಾರ, ಮೂವರು ಸಾವು; ಎಸ್ಪಿ ಸೇರಿ ಹಲವು ಪೊಲೀಸರಿಗೆ ಗಾಯ