ETV Bharat / bharat

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ - ಹುಸಿ ಬಾಂಬ್​ ಬೆದರಿಕೆ

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಗಳವಾರ ಅನಾಮಧೇಯ ವ್ಯಕ್ತಿಯೊಬ್ಬ ಹುಸಿ ಬಾಂಬ್ ಬೆದರಿಕೆಯ ಕರೆ ಮಾಡಿದ್ದಾನೆ.

Etv Bharat
Etv Bharat
author img

By PTI

Published : Feb 27, 2024, 1:20 PM IST

ನವದೆಹಲಿ: ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಗಳವಾರ ಅನಾಮಧೇಯ ವ್ಯಕ್ತಿಯೊಬ್ಬನಿಂದ ಬಾಂಬ್ ಹುಸಿ ಬೆದರಿಕೆಯ ಕರೆ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪರಿಶೀಲಿಸಿದಾಗ ಇದು ಬರೀ ಹುಸಿ ಬೆದರಿಕೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ 5.15 ಗಂಟೆ ಸುಮಾರಿಗೆ, ದೆಹಲಿಯಿಂದ ಕೋಲ್ಕತ್ತಾಗೆ ತೆರಳಬೇಕಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿತ್ತು. ವಿಚಾರಣೆ ವೇಳೆ ಈ ಬಾಂಬ್ ಬೆದರಿಕೆಯ ಹುಸಿ ಕರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಯಾಣಿಕರ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿದೆ. ಜೊತೆಗೆ ನಕಲಿ ಕರೆ ಮಾಡಿದ ವ್ಯಕ್ತಿಯನ್ನು ಗುರುತಿಸುವ ಕಾರ್ಯದಲ್ಲಿ ನಿರತರಾಗಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ತಿಂಗಳು, ದರ್ಭಾಂಗದಿಂದ ದೆಹಲಿಯ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ನಂತರ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿತ್ತು. ಆದರೆ, ವಿಚಾರಣೆ ವೇಳೆ ಅದೊಂದು ಹುಸಿ ಕರೆ ಎಂದು ತಿಳಿದು ಬಂದಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು. ವಿಮಾನವು ದೆಹಲಿಯಲ್ಲಿ ಇಳಿದ ನಂತರ ಪ್ರಯಾಣಿಕರನ್ನು ತ್ವರಿತವಾಗಿ ಕೆಳಗಿಳಿಸಲಾಗಿತ್ತು.

ಇದನ್ನೂ ಓದಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ವೈರಲ್​ ಪ್ರಕರಣ: ನಾಲ್ವರು ಬಾಲಕರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.