ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾಗಶಃ ಹೊರಬಿದ್ದಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೋಲು ಅನುಭವಿಸಿದ್ದಾರೆ. 70 ಸ್ಥಾನಗಳಲ್ಲಿ ಬಹುಮತಕ್ಕೆ ಅಗತ್ಯವಿರುವ 40 ಸ್ಥಾನಗಳಿಗಿಂತ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಜಿದ್ದಾ ಜಿದ್ದಿನ ಕದನದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ 3 ಸಾವಿರ ಮತಗಳಿಂದ ಪರಾಜಯಗೊಂಡರೆ, ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮನೀಶ್ ಸಿಸೋಡಿಯಾ ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಮಾರ್ವಾ ವಿರುದ್ಧ 675 ಮತಗಳಿಂದ ಸೋಲು ಅನುಭವಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಅವರ ಸೋಲು ಎಎಪಿಗೆ ಭಾರೀ ಮುಖಭಂಗವಾಗಿದೆ.
#WATCH | AAP candidate from Jangpura constituency, Manish Sisodia concedes defeat, says, " party workers fought well; we all did hard work. people have supported us as well. but, i lose by 600 votes. i congratulate the candidate who won. i hope he will work for the constituency." https://t.co/szW8leInSp pic.twitter.com/B1VVvsbfNI
— ANI (@ANI) February 8, 2025
ಕೇಜ್ರಿವಾಲ್ 4ನೇ ಭಾರಿಗೆ ಚುನಾವಣೆಗೆ ಸ್ಫರ್ಧಿಸಿದ್ದರು. 3 ಸಲ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದ ಇವರು ಈ ಸಲ ಪರಾಭವಗೊಂಡಿದ್ದಾರೆ. ಬಿಜೆಪಿಗೆ ಬಹುಮತ ಬಂದರೆ ಇಡೀ ಚುನಾವಣಾ ಪ್ರಚಾರದಲ್ಲಿ ಮುಂಚೂಣಿಯಲ್ಲಿದ್ದ ದಿಲ್ಲಿಯ ಬಿಜೆಪಿ ಅಭ್ಯರ್ಥಿ ಪ್ರವೇಶ್ ವರ್ಮಾ ಸಿಎಂ ಅಭ್ಯರ್ಥಿ ಆಗುವಲ್ಲಿ ಮುಂದಿದ್ದಾರೆಂದು ವಿಶ್ಲೇಷಕರು ಅಂದಾಜಿಸಿದ್ದಾರೆ.
ಪತ್ಪರ್ಗಂಜ್ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಎಪಿಯ ಅವಧ್ ಓಜಾ ಕೂಡ ಸೋಲು ಕಂಡಿದ್ದಾರೆ. ಪತ್ಪರ್‌ಗಂಜ್ ಕ್ಷೇತ್ರದಿಂದ ಬಿಜೆಪಿಯ ರವೀಂದರ್ ಸಿಂಗ್ ನೇಗಿ ಅವರು ಎಎಪಿಯ ಅವಧ್ ಓಜಾ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ. "ಇದು ನನ್ನ ವೈಯಕ್ತಿಕ ಸೋಲು. ನನಗೆ ಜನರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಲಿಲ್ಲ. ಮುಂದಿನ ಚುನಾವಣೆಯಲ್ಲಿ ಇಲ್ಲಿಂದಲೇ ಸ್ಪರ್ಧಿಸುತ್ತೇನೆ" ಎಂದು ಅವಧ್ ಓಜಾ ಹೇಳಿದ್ದಾರೆ.
#WATCH | BJP candidate from New Delhi assembly seat Parvesh Verma celebrates his victory after he defeats AAP national convener and former Delhi CM, Arvind Kejriwal#DelhiElection2025 pic.twitter.com/Z20ZjMM81m
— ANI (@ANI) February 8, 2025
ಜಂಗ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಲನ್ನು ಒಪ್ಪಿಕೊಂಡಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಮುಖ ನಾಯಕ ಮನೀಶ್ ಸಿಸೋಡಿಯಾ, "ಪಕ್ಷದ ಕಾರ್ಯಕರ್ತರು ಚೆನ್ನಾಗಿ ಹೋರಾಡಿದರು. ನಾವೆಲ್ಲರೂ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಜನರು ಕೂಡ ನಮ್ಮನ್ನು ಬೆಂಬಲಿಸಿದ್ದಾರೆ. ಆದರೆ, ನಾನು ಅಲ್ಪ ಮತಗಳಿಂದ ಸೋತಿದ್ದೇನೆ. ಗೆದ್ದ ಅಭ್ಯರ್ಥಿಯನ್ನು ನಾನು ಅಭಿನಂದಿಸುತ್ತೇನೆ. ಅವರು ಕ್ಷೇತ್ರಕ್ಕಾಗಿ ಕೆಲಸ ಮಾಡುತ್ತಾರೆಂದು ನಾನು ಭಾವಿಸುತ್ತೇನೆ" ಎಂದು ಹೇಳಿದ್ದಾರೆ.
ನಾಲ್ಕನೇ ಬಾರಿಗೆ ಮರುಚುನಾವಣೆ ಬಯಸಿದ್ದ ಕೇಜ್ರಿವಾಲ್, ಕಳೆದ ಮೂರು ಚುನಾವಣೆಗಳಿಂದ ಅವರ ಭದ್ರಕೋಟೆಯಾಗಿರುವ ನವದೆಹಲಿ ವಿಧಾನಸಭಾ ಸ್ಥಾನವನ್ನು ಗೆಲ್ಲುವ ಭರವಸೆ ಹೊಂದಿದ್ದರು. ಆದರೆ, ಬಿಜೆಪಿ ಮುಂದೆ ಸೋಲು ಒಪ್ಪಿಕೊಂಡಿದೆ. ಈ ಬಾರಿ ಪರ್ವೇಶ್ ವರ್ಮಾ ಗೆಲುವು ಸಾಧಿಸಿದ್ದು, ದೆಹಲಿ ಸಿಎಂ ರೇಸ್‌ನಲ್ಲೂ ಮುಂಚುಣಿಯಲ್ಲಿದ್ದಾರೆ.
ಇದನ್ನು ಓದಿ: ಬಿಜೆಪಿಗೆ ಬಹುಮತ ಬಂದರೆ ಸಿಎಂ ಯಾರು?: ರೇಸ್‌ನಲ್ಲಿ ಪರ್ವೇಶ್ ವರ್ಮಾ, ವಿಜೇಂದರ್ ಗುಪ್ತಾ, ದುಷ್ಯಂತ್ ಗೌತಮ್