ETV Bharat / bharat

ದೆಹಲಿ ಮದ್ಯ ನೀತಿ ಹಗರಣ: ಕೇಜ್ರಿವಾಲ್, ಸಿಸೋಡಿಯಾ, ಕವಿತಾರ ನ್ಯಾಯಾಂಗ ಬಂಧನ ವಿಸ್ತರಣೆ - Delhi Liquor Policy Scam - DELHI LIQUOR POLICY SCAM

ದೆಹಲಿ ಮದ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (IANS)
author img

By PTI

Published : Jul 25, 2024, 1:16 PM IST

ನವದೆಹಲಿ: ಅಕ್ರಮ ಹಣ ವರ್ಗಾವಣೆ ಮತ್ತು ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಗುರುವಾರ ಮತ್ತೆ ವಿಸ್ತರಿಸಿದೆ. ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಇಂದು ಪ್ರಕರಣದ ವಿಚಾರಣೆ ನಡೆಸಿದರು.

ಇನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಕಸ್ಟಡಿಯನ್ನು ಜುಲೈ 31ರವರೆಗೆ ವಿಸ್ತರಿಸಿದರೆ, ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 8ರವರೆಗೆ ವಿಸ್ತರಿಸಲಾಗಿದೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ಕೂಡ ನ್ಯಾಯಾಧೀಶರು ಜುಲೈ 31ರವರೆಗೆ ವಿಸ್ತರಿಸಿದರು.

ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಡಿ ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ಹಿಂದೆ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಆದಾಗ್ಯೂ, ಈ ಪ್ರಕರಣದಲ್ಲಿ ಜಾಮೀನು ಬಾಂಡ್ ಸಲ್ಲಿಸದ ಕಾರಣ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಇನ್ನು ಸಿಬಿಐ ವಿಚಾರಣೆ ನಡೆಸುತ್ತಿರುವ ಪ್ರಕರಣದಲ್ಲಿಯೂ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜಾರಿ ನಿರ್ದೇಶನಾಲಯದ (ಇಡಿ) ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಮಾರ್ಚ್ 31ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮದ್ಯ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಅಬಕಾರಿ ನೀತಿ 2021-22 ಅನ್ನು ರೂಪಿಸುವ ಸಮಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಈ ಪ್ರಕರಣ ಸಂಬಂಧಿಸಿದೆ.

ಈ ನೀತಿಯು ಕಾರ್ಟೆಲೈಸೇಶನ್​ಗೆ ಅವಕಾಶ ಮಾಡಿಕೊಟ್ಟಿತು ಮತ್ತು ಲಂಚ ಪಡೆದು ಕೆಲ ವಿತರಕರಿಗೆ ಅನುಖೂಲ ಮಾಡಿಕೊಡಲಾಯಿತು ಎಂದು ಆರೋಪಿಸಲಾಗಿದೆ. ಆರೋಪಗಳ ನಂತರ ಹೊಸ ಮದ್ಯ ನೀತಿಯನ್ನು ರದ್ದುಗೊಳಿಸಲಾಯಿತು. ಇದರ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಈ ಯೋಜನೆಯ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದರು. ಸಿಬಿಐ ತನಿಖೆಯ ನಂತರ, ಜಾರಿ ನಿರ್ದೇಶನಾಲಯ ಕೂಡ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ಶಿರಡಿ ಸಾಯಿಬಾಬಾ ಮಂದಿರಕ್ಕೆ ₹6.25 ಕೋಟಿ ದೇಣಿಗೆ ನೀಡಿದ ಭಕ್ತ! - shirdi sai babas donation

ETV Bharat Logo

Copyright © 2025 Ushodaya Enterprises Pvt. Ltd., All Rights Reserved.