ETV Bharat / bharat

ಅಮಿತ್‌ ಶಾ ವಿಡಿಯೋ ಮಾರ್ಫಿಂಗ್‌ ಕೇಸ್‌: ತೆಲಂಗಾಣ ಕಾಂಗ್ರೆಸ್​ ನಾಯಕರಿಗೆ ದೆಹಲಿ ಪೊಲೀಸರಿಂದ ಸಮನ್ಸ್ - Amit Shah Fake Video Case

ಕೇಂದ್ರ ಗೃಹ ಅಮಿತ್ ಶಾ ಹೆಸರಿನಲ್ಲಿ ಕೆಲವು ನಕಲಿ ವಿಡಿಯೋಗಳು ಹರಿದಾಡುತ್ತಿದ್ದು, ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

DELHI POLICE  TELANGANA CONGRESS LEADERS  HYDERABAD
ವಿಚಾರಣೆಗೆ ಹಾಜರಾಗುವಂತೆ ಆದೇಶ
author img

By ANI

Published : Apr 29, 2024, 8:02 PM IST

ಹೈದರಾಬಾದ್(ತೆಲಂಗಾಣ): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿಡಿಯೋ ಮಾರ್ಫಿಂಗ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಲವು ತೆಲಂಗಾಣ ಕಾಂಗ್ರೆಸ್ ನಾಯಕರು ಮತ್ತು ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ. ಹೈದರಾಬಾದ್‌ನ ಗಾಂಧಿ ಭವನಕ್ಕೆ ಆಗಮಿಸಿದ ಅವರು ಕಾಂಗ್ರೆಸ್ ಅಸ್ಲಂ ತಸ್ಮಿನ್, ಪಕ್ಷದ ಸಾಮಾಜಿಕ ಜಾಲತಾಣ ಉಸ್ತುವಾರಿ ಮನ್ನೆ ಸತೀಶ್, ನವೀನ್ ಮತ್ತು ಶಿವಕುಮಾರ್ ಅವರಿಗೆ ನೋಟಿಸ್ ನೀಡಿದರು. ಅಮಿತ್ ಶಾ ಅವರ ಮಾರ್ಫಿಂಗ್ ವಿಡಿಯೋವನ್ನು 'ಎಕ್ಸ್'ನಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ನೋಟಿಸ್‌ಗಳ ಬಗ್ಗೆ ವಿವರಣೆ ನೀಡುವುದಾಗಿ ರಾಜ್ಯ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಅಮಿತ್ ಶಾ ಹೆಸರಿನಲ್ಲಿ ಬಳಸಲಾಗುತ್ತಿರುವ ಕೆಲವು ನಕಲಿ ವಿಡಿಯೋಗಳ ವಿರುದ್ಧ ದೆಹಲಿ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ. ಗೃಹ ಸಚಿವಾಲಯದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೇ ತಿಂಗಳ 23ರಂದು ತೆಲಂಗಾಣದಲ್ಲಿ ನಡೆದ ವಿಜಯ ಸಂಕಲ್ಪ ಸಭೆಯಲ್ಲಿ ಅಮಿತ್ ಶಾ ಭಾಗವಹಿಸಿದ್ದರು. ಅಲ್ಲಿ ಮಾತನಾಡಿರುವ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಅಸಾಂವಿಧಾನಿಕ ಮುಸ್ಲಿಂ ಮೀಸಲಾತಿ ರದ್ದುಪಡಿಸುತ್ತೇವೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ಸೇರಿದ ಹಕ್ಕುಗಳನ್ನು ಅವರಿಗೆ ಮರಳಿ ನೀಡಲಾಗುವುದು ಎಂದು ಹೇಳಿದ್ದಾರೆ. ಆದರೆ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿ ರದ್ದುಪಡಿಸುವುದಾಗಿ ಶಾ ಹೇಳಿರುವಂತೆ ಕೆಲವರು ಅದನ್ನು ತಿರುಚಿ ಎಡಿಟ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಇದನ್ನೂ ಓದಿ: ಹಾಸನ‌ ಪೆನ್ ಡ್ರೈವ್ ಪ್ರಕರಣ ಖಂಡಿಸಿ ಬೆಂಗಳೂರಲ್ಲಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ - Hassan Pen Drive Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.