ETV Bharat / bharat

ಆಗಸ್ಟ್​ 16ರಂದು ಡಿಎಂಕೆ ಸಭೆ: ಉದಯನಿಧಿ ಸ್ಟಾಲಿನ್​ ಡಿಸಿಎಂ ನೇಮಕ ಬಗ್ಗೆ ಚರ್ಚೆ ಸಾಧ್ಯತೆ - Udhayanidhi Stalin

author img

By ETV Bharat Karnataka Team

Published : Aug 13, 2024, 11:52 AM IST

Updated : Aug 13, 2024, 5:58 PM IST

ಸಿಎಂ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಅವರು ಶೀಘ್ರದಲ್ಲೇ ಡಿಸಿಎಂ ಆಗಲಿದ್ದಾರೆ ಎಂಬ ಊಹಾಪೋಹಗಳು ದಟ್ಟವಾಗಿವೆ.

Udhayanidhi Stalin
ಉದಯನಿಧಿ ಸ್ಟಾಲಿನ್​ (ETV Bharat)

ಚೆನ್ನೈ : ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳ ಸಭೆ ಆಗಸ್ಟ್ 16 ರಂದು ನಡೆಯಲಿದ್ದು, ವಾರ್ಷಿಕ 'ಮುಪ್ಪೆರುಮ್ ವಿಳ' ಆಚರಣೆಯ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ. ಅಲ್ಲದೆ ರಾಜ್ಯದ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸುವ ಬಗ್ಗೆಯೂ ಇದೇ ಸಭೆಯಲ್ಲಿ ಚರ್ಚೆಯಾಗಲಿದೆ ಎಂಬ ವದಂತಿಗಳು ದಟ್ಟವಾಗಿವೆ.

ಡಿಎಂಕೆ ಸಂಘಟನಾ ಕಾರ್ಯದರ್ಶಿ ಮತ್ತು ತಮಿಳುನಾಡು ಜಲಸಂಪನ್ಮೂಲ ಸಚಿವ ಎಸ್. ದುರೈಮುರುಗನ್ ಸೋಮವಾರ ತಡರಾತ್ರಿ ನೀಡಿದ ಹೇಳಿಕೆಯಲ್ಲಿ, ಪಕ್ಷದ ಪ್ರಧಾನ ಕಚೇರಿ 'ಅಣ್ಣಾ ಅರಿವಾಲಯಂ' ನಲ್ಲಿ ಸಭೆ ನಡೆಯಲಿದ್ದು, ಅಂದು ಬೆಳಗ್ಗೆ 10.30 ರಿಂದ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಸೆಪ್ಟೆಂಬರ್ 15 ರಂದು ಡಿಎಂಕೆ ಸಂಸ್ಥಾಪಕ ಸಿ.ಎನ್. ಅಣ್ಣಾದೊರೈ ಅವರ ಜನ್ಮ ದಿನಾಚರಣೆ, ಸೆಪ್ಟೆಂಬರ್ 16 ರಂದು ಪಕ್ಷದ ಸಂಸ್ಥಾಪನಾ ದಿನ ಮತ್ತು ಸೆಪ್ಟೆಂಬರ್ 17 ರಂದು ದ್ರಾವಿಡ ಸಿದ್ಧಾಂತಿ ಇವಿಎಸ್ ರಾಮಸ್ವಾಮಿ ಪೆರಿಯಾರ್ ಅವರ ಜನ್ಮ ದಿನ ಆಚರಣೆಯ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಮುಪೆರುಮ್ ವಿಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದ್ದರೂ, ತಮಿಳುನಾಡು ಯುವ ಕಲ್ಯಾಣ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಿಸುವ ಬಗ್ಗೆಯೂ ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.

ತಮಿಳುನಾಡಿಗೆ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವ ಸಲುವಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಯುಎಸ್​ ಪ್ರವಾಸ ಕೈಗೊಳ್ಳಲಿದ್ದು, ಅದಕ್ಕೂ ಮುನ್ನವೇ ತಮ್ಮ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಪಟ್ಟಕ್ಕೇರಿಸಲು ಬಯಸಿದ್ದಾರೆ ಎನ್ನಲಾಗಿದೆ.

ತಮಿಳುನಾಡು ಸಚಿವ ರಾಜಕಣ್ಣಪ್ಪನ್ ಇತ್ತೀಚೆಗೆ ಸಾರ್ವಜನಿಕ ಸಮಾರಂಭದಲ್ಲಿ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಎಂದು ಸಂಬೋಧಿಸಿದ್ದರು. ಆದರೆ ತಕ್ಷಣ ಅವರು ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡು, ಆಗಸ್ಟ್ 19 ರ ನಂತರ ಅವರನ್ನು ಉಪಮುಖ್ಯಮಂತ್ರಿ ಎಂದು ಸಂಬೋಧಿಸಬಹುದು ಎಂದು ಹೇಳಿದ್ದರು.

ಸಚಿವೆ ಗೀತಾ ಜೀವನ್ ಕೂಡ ಉದಯನಿಧಿ ಸ್ಟಾಲಿನ್ ಅವರನ್ನು ಭವಿಷ್ಯದ ಉಪಮುಖ್ಯಮಂತ್ರಿ ಎಂದು ಉಲ್ಲೇಖಿಸಿದ್ದಾರೆ. ತೂತುಕುಡಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಸ್ಟಾಲಿನ್​ ಭವಿಷ್ಯದ ಉಪಮುಖ್ಯಮಂತ್ರಿ ಎಂದು ಅವರು ಹೇಳಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ಶೀಘ್ರದಲ್ಲೇ ಉಪಮುಖ್ಯಮಂತ್ರಿ ಪಟ್ಟ ಅಲಂಕರಿಸಲಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ.

ಇದನ್ನೂ ಓದಿ : ಪೂಜಾ ಖೇಡ್ಕರ್​ಗೆ ಕೊಂಚ ನಿರಾಳ: ಬಂಧಿಸದಂತೆ ಪೊಲೀಸರಿಗೆ ಕೋರ್ಟ್​ ಸೂಚನೆ - Puja Khedkar Case

Last Updated : Aug 13, 2024, 5:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.