ETV Bharat / bharat

ಪಾಕಿಸ್ತಾನಕ್ಕೆ ಭೇಟಿ ನೀಡಲಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್! - Jaishankar to travel to Pakistan

ಶಾಂಘೈ ಸಹಕಾರ ಸಮಾವೇಶಕ್ಕಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

author img

By ANI

Published : 3 hours ago

ಸಚಿವ ಎಸ್ ಜೈಶಂಕರ್
ಸಚಿವ ಎಸ್. ಜೈಶಂಕರ್ (ETV Bharat)

ನವದೆಹಲಿ: ಈ ತಿಂಗಳ ಮಧ್ಯದಲ್ಲಿ ಶಾಂಘೈ ಸಹಕಾರ ಸಂಘಟನೆ (ಎಸ್​ಸಿಒ) ಸಮಾವೇಶದಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ಪ್ರಯಾಣಿಸಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ವಿಷಯವನ್ನು ಇಂದು ಪ್ರಕಟಿಸಿದರು.

ಪಾಕಿಸ್ತಾನ ಅ.15 ಮತ್ತು 16ರಂದು SCO ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ (CHG) ಸಭೆ ಆಯೋಜಿಸಿದೆ.

"ಅಕ್ಟೋಬರ್ 15 ಮತ್ತು 16ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವರು ನಮ್ಮ ನಿಯೋಗವನ್ನು ಮುನ್ನಡೆಸುತ್ತಾರೆ" ಎಂದು ಮಾಧ್ಯಮಗೋಷ್ಠಿಯಲ್ಲಿ ರಣಧೀರ್ ಜೈಸ್ವಾಲ್ ಹೇಳಿದರು.

ವಿದೇಶಾಂಗ ಸಚಿವರು ಎಸ್‌ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮಾತ್ರ ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಎಸ್‌ಸಿಒ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗಸ್ಟ್‌ನಲ್ಲಿ ಪಾಕಿಸ್ತಾನ ಆಹ್ವಾನಿಸಿತ್ತು.

ಇದನ್ನೂ ಓದಿ: ಶ್ರೀಲಂಕಾಕ್ಕೆ ಪ್ರವಾಸ ಹೋಗುವ ಪ್ಲ್ಯಾನ್‌ ಇದೆಯೇ? ನಿಮಗಿದು ಸಿಹಿಸುದ್ದಿ! - Sri Lanka Visa Free Entry

ETV Bharat Logo

Copyright © 2024 Ushodaya Enterprises Pvt. Ltd., All Rights Reserved.