ಕಾರ್ಗಿಲ್, ಲಡಾಖ್: ಲಡಾಖ್‌ನ ಕಾರ್ಗಿಲ್‌ನಲ್ಲಿ ಭಾನುವಾರ ಮಧ್ಯಾಹ್ನ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. NCS ಪ್ರಕಾರ, ಭೂಕಂಪನವು ಮಧ್ಯಾಹ್ನ 2:42 ಕ್ಕೆ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು 10 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಪೋಸ್ಟ್ ಮಾಡಿದೆ.
ಭೂಕಂಪದಿಂದ ಯಾವುದೇ ಹಾನಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಭೂಕಂಪನದ ಅನುಭವವಾದ ತಕ್ಷಣ ಜನರು ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದರು ಎಂದು ತಿಳಿದು ಬಂದಿದೆ.