ETV Bharat / bharat

ಅರುಣಾಚಲ, ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಜೂನ್ 2ಕ್ಕೆ: ದಿನಾಂಕ ಬದಲಿಸಿದ್ದೇಕೆ ಗೊತ್ತೇ?

author img

By ETV Bharat Karnataka Team

Published : Mar 18, 2024, 9:53 AM IST

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಜೂನ್ 4ರ ಬದಲು ಜೂನ್ 2ಕ್ಕೆ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

Arunachal Assembly polls  Sikkim Assembly polls  Election Commission
ಅರುಣಾಚಲ, ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಜೂನ್ 2ಕ್ಕೆ: ಚುನಾವಣಾ ಆಯೋಗ ದಿನಾಂಕ ಬದಲಿಸಿದ್ದೇಕೆ?

ನವದೆಹಲಿ/ಇಟಾನಗರ: ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಜೂನ್ 4ರ ಬದಲು ಜೂನ್ 2ಕ್ಕೆ ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಈ ಎರಡು ಈಶಾನ್ಯ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಇದರ ಜೊತೆಗೆ ಮತ್ತೆರಡು ಎರಡು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಲೋಕಸಭೆ ಚುನಾವಣೆಯೊಂದಿಗೆ ವಿಧಾನಸಭೆ ಚುನಾವಣೆಗಳೂ ಸಹ ನಡೆಯಲಿವೆ.

ಜೂನ್‌ 4ರಂದು ಎಣಿಕೆ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿನ ವಿಧಾನಸಭೆಗಳ ಅವಧಿ ಜೂನ್ 2ರಂದು ಕೊನೆಗೊಳ್ಳುತ್ತದೆ. ಇದರಿಂದಾಗಿ ನಿಯಮದಂತೆ ಹೊಸ ವಿಧಾನಸಭೆ ಅಸ್ತಿತ್ವಕ್ಕೆ ಬರಲು ಅನುವಾಗಲು ಅದೇ ದಿನ ಫಲಿತಾಂಶ ಪ್ರಕಟಿಸಬೇಕಿದೆ. ಆದರೆ, ಎರಡೂ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಆಯೋಗ ತಿಳಿಸಿದೆ.

ಅರುಣಾಚಲ ಪ್ರದೇಶದಲ್ಲಿ 60 ವಿಧಾನಸಭೆ ಕ್ಷೇತ್ರಗಳಿದ್ದರೆ, ಸಿಕ್ಕಿಂನಲ್ಲಿ 32 ವಿಧಾನಸಭೆ ಕ್ಷೇತ್ರಗಳಿವೆ. ಎರಡು ರಾಜ್ಯಗಳಲ್ಲಿ ಏಪ್ರಿಲ್ 19ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಭಾರತ ಸಂವಿಧಾನದ 172(1)ನೇ ವಿಧಿ ಮತ್ತು 1951ರ ಪ್ರಜಾಪ್ರತಿನಿಧಿ ಕಾಯ್ದೆಯ 15ನೇ ಪರಿಚ್ಛೇದದೊಂದಿಗೆ 324ನೇ ಕಲಂ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಚುನಾವಣಾ ಸಂಘಟನೆಯ ಜವಾಬ್ದಾರಿ ನೀಡಲಾಗಿದೆ ಎಂದು ಚುನಾವಣಾ ಆಯೋಗ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಸಂವಿಧಾನ ನೀಡಿರುವ ಅಧಿಕಾರದಡಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ದಿನಾಂಕಗಳು ಮತ್ತು ಮತ ಎಣಿಕೆಯ ದಿನಾಂಕ ಘೋಷಿಸಿದೆ.

175 ಸದಸ್ಯ ಬಲದ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮೇ 13ರಂದು ನಡೆಯಲಿದೆ. 147 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಒಡಿಶಾದಲ್ಲಿ ಒಟ್ಟು 4 ಹಂತಗಳಲ್ಲಿ ಮತದಾನ ಜರುಗಲಿದೆ. ಒಡಿಶಾ ವಿಧಾನಸಭೆ ಚುನಾವಣೆ ಮೇ 13, 20, 25 ಮತ್ತು ಜೂನ್ 1ರಂದು ನಡೆಯಲಿದೆ.

ವಿಧಾನಸಭೆ ಉಪಚುನಾವಣೆಗಳು: ಇನ್ನು ದೇಶದ ವಿವಿಧ ರಾಜ್ಯಗಳಲ್ಲಿ ಅನೇಕ ಕಾರಣಗಳಿಂದ ತೆರವಾದ 26 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಈ ಪೈಕಿ ಕರ್ನಾಟಕದ ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ. ಕಾಂಗ್ರೆಸ್​ನ ರಾಜಾ ವೆಂಕಟಪ್ಪ ನಾಯಕ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಇತ್ತೀಚೆಗೆ ಅವರು ಅಕಾಲಿಕ ನಿಧನ ಹೊಂದಿದ ಹಿನ್ನೆಲೆಯಲ್ಲಿ ಈ ಕ್ಷೇತ್ರ ತೆರವಾಗಿದೆ.

ಇದನ್ನೂ ಓದಿ: ದೇಶ ವಿಭಜಿಸುವ ಶಕ್ತಿ I.N.D.I.Aವನ್ನು ಸೋಲಿಸಲಾಗದು: ರಾಹುಲ್​ ಗಾಂಧಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.