ನವದೆಹಲಿ: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣಾ ವೇಳಾಪಟ್ಟಿಯ ಜೊತೆಗೆ ಭಾರತೀಯ ಚುನಾವಣಾ ಆಯೋಗ ಇಂದು 2 ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ 48 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕ ಘೋಷಣೆ ಮಾಡಿತು.
2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೆದ್ದಿದ್ದರು. ನಂತರದಲ್ಲಿ, ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡ ಅವರು ವಯನಾಡ್ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಕ್ಷೇತ್ರದಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ವಯನಾಡ್ ಉಪಚುನಾವಣೆ ವೇಳಾಪಟ್ಟಿ: ನಾಮಪತ್ರ ಸಲ್ಲಿಸಲು ಕಡೇಯ ದಿನ ಅಕ್ಟೋಬರ್ 25. ನಾಮಪತ್ರ ಹಿಂಪಡೆಯಲು ಕಡೇಯ ದಿನ ಅಕ್ಟೋಬರ್ 30. ಮತ ಎಣಿಕೆ ನವೆಂಬರ್ 23.
ಮಹಾರಾಷ್ಟ್ರದ ನಾದೇಂಡ್ ಲೋಕಸಭಾ ಕ್ಷೇತ್ರಕ್ಕೂ ಕೂಡಾ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್