ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ನೋಂದಾಯಿತ, ಗುರುತಿಸದ ಪಕ್ಷಗಳಿಗೆ ಸಾಮಾನ್ಯ ಚಿಹ್ನೆಗಳನ್ನು ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಕೇಂದ್ರ ಚುನಾವಣಾ ಆಯೋಗವು, ಈ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ.
ಇತ್ತೀಚಿನ ಅಧಿಸೂಚನೆಯಲ್ಲಿ, 1968ರ ಚುನಾವಣಾ ಚಿಹ್ನೆಗಳ (ಮೀಸಲಾತಿ ಮತ್ತು ಹಂಚಿಕೆ) ಆದೇಶದ ಪ್ಯಾರಾ 10B ಅಡಿ ಸಾಮಾನ್ಯ ಚಿಹ್ನೆಗಳಿಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸುವ ನಿರ್ಧಾರವನ್ನು ಚುನಾವಣಾ ಆಯೋಗ ಘೋಷಿಸಿತು. ಇದು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೆ ಅನ್ವಯಿಸುತ್ತದೆ.
ಚುನಾವಣಾ ಆಯೋಗದ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಪ್ರಕ್ರಿಯೆ ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂಬುದನ್ನು ಸೂಚಿಸುತ್ತದೆ. ಡಿಸೆಂಬರ್ 2023 ರಲ್ಲಿ ಸುಪ್ರೀಂಕೋರ್ಟ್, ಈ ಚುನಾವಣೆಯನ್ನು ಸೆಪ್ಟೆಂಬರ್ 30, 2024ರೊಳಗೆ ನಡೆಸುವಂತೆ ಆಯೋಗಕ್ಕೆ ನಿರ್ದೇಶನ ನೀಡಿತ್ತು.
ಇದನ್ನೂ ಓದಿ: ಟ್ರೇಡ್ ಮಾರ್ಕ್ ಬಳಕೆ ವಿಚಾರ: ಕೋರ್ಟ್ ಆದೇಶದ ಮೇಲೆ ರೆಸ್ಟೋರೆಂಟ್ ಮೇಲೆ ದಾಳಿ - INDORE ACTION AGAINST RESTAURANT