ರಾಂಚಿ: ರಾಂಚಿಯಲ್ಲಿ ನಡೆದ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಜೈಲಿನಲ್ಲಿರುವ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಇಂದು ಆರೋಪಪಟ್ಟಿ ಸಲ್ಲಿಸಿದೆ. 5,000 ಪುಟಗಳ ದಾಖಲೆಗಳನ್ನು ಹೊತ್ತು ತಂದ ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಲುಪಿಸಿದ್ದಾರೆ.
ಕೋಟ್ಯಂತರ ರೂಪಾಯಿ ಬೆಲೆಬಾಳುವ ಭಾರತೀಯ ಸೇನೆಗೆ ಸೇರಿದ ಭೂಮಿ ಕಬಳಿಕೆ ಮಾಡಿದ ಆರೋಪ ಎದುರಿಸುತ್ತಿರುವ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ, ಸಿಎಂ ಹೇಮಂತ್ ಸೊರೆನ್ ಅವರನ್ನು ಜನವರಿ 31 ರಂದು ಬಂಧಿಸಲಾಗಿದೆ. ಇಂದಿಗೆ ಅವರ 60 ದಿನಗಳ ನ್ಯಾಯಾಂಗ ಬಂಧನ ಪೂರ್ಣಗೊಂಡಿದೆ. ಕಾನುನೂನಡಿ ಇಡಿ ಅಧಿಕಾರಿಗಳು 60 ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಬೇಕು. ಅದರಂತೆ ಇಡಿ ತಂಡ 60 ದಿನಗಳೊಳಗೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಇದೀಗ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಚಾರ್ಜ್ ಶೀಟ್ ಆಧರಿಸಿ ನ್ಯಾಯಾಲಯ ಮುಂದಿನ ಕ್ರಮ ಕೈಗೊಳ್ಳಲಿದೆ. ಜೈಲು ಸೇರುತ್ತಿದ್ದಂತೆ ಹೇಮಂತ್ ಸೊರೆನ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಚಂಪೈ ಸೊರೆನ್ ಅವರನ್ನು ಆಯ್ಕೆ ಮಾಡಲಾಗಿದೆ.
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಬಂಧಿಸಿದ ಇಡಿ: ಚಂಪೈ ಸೊರೆನ್ ಹೊಸ ಮುಖ್ಯಮಂತ್ರಿ?
ಮೋದಿ ವಿರುದ್ಧ ಒಗ್ಗಟ್ಟಿನ ಸೂತ್ರ ಹೆಣೆದ ಮಹಿಳಾಮಣಿಗಳು! - Maharally In Delhi
ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು, ಭೂಮಿ ಕಬಳಿಕೆ ಮಾಡಿದ ಆರೋಪದಲ್ಲಿ ಹೇಮಂತ್ ಸೊರೆನ್ ಅವರನ್ನು ಬಂಧಿಸಲಾಗಿದ್ದು, ಈ ಕ್ರಮ ಖಂಡಿಸಿ ನಾಳೆ (ಮಾರ್ಚ್ 31) ದೆಹಲಿಯ ರಾಮಲೀಲಾ ಮೈದಾನದ I.N.D.I.A ಮೈತ್ರಿ ಕೂಟ ಬೃಹತ್ ಪ್ರತಿಭಟನಾ ಜಾಥಾ ನಡೆಸಲಿದೆ. ಜಾಥಾದಲ್ಲಿ ಆಮ್ ಆದ್ಮಿ ಪಕ್ಷ, ಕಾಂಗ್ರೆಸ್‌ನ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಆಪ್ ಪಕ್ಷ ಎಲ್ಲ ನಾಯಕರಿಗೆ ಆಹ್ವಾನ ನೀಡಿದೆ. ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಕೂಡ ಈ ಮೆಗಾ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಅವರಷ್ಟೇ ಅಲ್ಲದೇ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಕೂಡ ಭಾಗವಹಿಸಲಿದ್ದಾರೆ. ಈ ಭಾಗವಾಗಿ ಕಲ್ಪನಾ ಸೊರೆನ್ ಅವರು ಶನಿವಾರ ದೆಹಲಿಗೆ ತೆರಳಿದ್ದು, ಸುನಿತಾ ಕೇಜ್ರಿವಾಲ್ ಅವರನ್ನು ಭೇಟಿ ಸಹ ಮಾಡಿದ್ದಾರೆ.