ETV Bharat / bharat

ಲೋಕಸಭೆ ಚುನಾವಣೆ ವೇಳಾ ಪಟ್ಟಿ ಪ್ರಕಟಕ್ಕೂ ಮುನ್ನವೇ ಚುನಾವಣಾ ಆಯುಕ್ತ ಅರುಣ್ ಗೋಯಲ್​​ ರಾಜೀನಾಮೆ

author img

By ETV Bharat Karnataka Team

Published : Mar 9, 2024, 10:02 PM IST

Updated : Mar 9, 2024, 10:26 PM IST

ಭಾರಿ ಬೆಳವಣಿಗೆಯೊಂದರಲ್ಲಿ ಚುನಾವಣಾ ಆಯುಕ್ತ ಅರುಣ್ ಗೋಯಲ್​​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದನ್ನು ರಾಷ್ಟ್ರಪತಿಗಳು ಸಹ ಅಂಗೀಕರಿಸಿದ್ದಾರೆ.

Election Commissioner Arun Goel Resigns Weeks Before 2024 Lok Sabha Polls
ಲೋಕಸಭೆ ಚುನಾವಣೆಗೂ ಮುನ್ನ ಚುನಾವಣಾ ಆಯುಕ್ತ ಅರುಣ್ ಗೋಯಲ್​​ ರಾಜೀನಾಮೆ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, 2024ರ ಲೋಕಸಭೆ ಚುನಾವಣೆಯ ನಿರೀಕ್ಷಿತ ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಚುನಾವಣಾ ಆಯುಕ್ತ ಅರುಣ್ ಗೋಯಲ್​ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚುನಾವಣಾ ಆಯುಕ್ತರಾಗಿ ಗೋಯಲ್​ ಅವರ ನಿರ್ಗಮನದ ಕಾರಣವನ್ನು ಉಲ್ಲೇಖಿಸದೇ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಕಾನೂನು ಸಚಿವಾಲಯವು ತನ್ನ ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ. "ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಕಾಯಿದೆ, 2023 ರ ಸೆಕ್ಷನ್ 11 ರ ಷರತ್ತು (1) ರ ಅನುಸಾರವಾಗಿ, ಅರುಣ್ ಗೋಯಲ್​ ಅವರು ಚುನಾವಣೆಗೆ ಸಲ್ಲಿಸಿದ ರಾಜೀನಾಮೆಯನ್ನು 09 ಮಾರ್ಚ್ 2024 ರಿಂದ ಜಾರಿಗೆ ಬರುವಂತೆ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರುಣ್​ ಗೋಯಲ್​ ​ ಅವರ ಅಧಿಕಾರಾವಧಿ ಡಿಸೆಂಬರ್ 2027 ರವರೆಗೆ ಇತ್ತು. ಅವರು ತಮ್ಮ ಹುದ್ದೆಯಿಂದ ಏಕೆ ಕೆಳಗಿಳಿದಿದ್ದಾರೆ ಎಂಬ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಗೋಯಲ್​ ಅವರು ಪಂಜಾಬ್ ಕೇಡರ್‌ನ 1985-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅವರು ನವೆಂಬರ್ 2022 ರಲ್ಲಿ ಚುನಾವಣಾ ಆಯೋಗಕ್ಕೆ ನೇಮಕಗೊಂಡಿದ್ದರು. ಫೆಬ್ರವರಿಯಲ್ಲಿ ಅನುಪ್ ಪಾಂಡೆ ನಿವೃತ್ತಿ ಮತ್ತು ಗೋಯಲ್​ ಅವರ ರಾಜೀನಾಮೆಯ ನಂತರ, ಮೂವರು ಸದಸ್ಯರ EC ಸಮಿತಿಯು ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಮಾತ್ರ ಹೊಂದಿದೆ.

ಮಾಜಿ ಐಎಎಸ್ ಅಧಿಕಾರಿ, ಗೋಯಲ್​ ಅವರು ಸ್ವಯಂ ನಿವೃತ್ತಿಯ ಒಂದು ದಿನದ ನಂತರ ಅಂದರೆ ನವೆಂಬರ್ 2022 ರಲ್ಲಿ ಚುನಾವಣಾ ಆಯುಕ್ತರಾಗಿ ನೇಮಕ ಮಾಡಲಾಗಿತ್ತು. ಅವರ ಈ ನೇಮಕಾತಿಯನ್ನು ಸುಪ್ರೀಂಕೋರ್ಟ್​ ಪ್ರಶ್ನೆ ಮಾಡಿತ್ತು. ನವೆಂಬರ್ 19 ರಂದು ಚುನಾವಣಾ ಆಯುಕ್ತರಾಗಿ ನೇಮಕಗೊಂಡ ಗೋಯಲ್​ ಅವರ ನೇಮಕಾತಿಗೆ ಸಂಬಂಧಿಸಿದ ಕಡತವನ್ನು ತನ್ನ ಮುಂದೆ ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೂಚನೆ ನೀಡಿದೆ. ಗೋಯಲ್​ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸುವ ಪ್ರಕ್ರಿಯೆ ಪ್ರಶ್ನಿಸಿದ್ದ ಸುಪ್ರೀಂ ಕೋರ್ಟ್ ಇದೊಂದು ಆತುರದ ನಿರ್ಧಾರ ಎಂದು ಹೇಳಿತ್ತು.

ಭಾರತೀಯ ಆಡಳಿತ ಸೇವೆಗಳಿಂದ ಸ್ವಯಂ ನಿವೃತ್ತಿ ಹೊಂದುವ ಮೊದಲು, ಗೋಯಲ್​ ಅವರು ಕೇಂದ್ರದ ಬಾರಿ ಕೈಗಾರಿಕೆಗಳ ಕಾರ್ಯದರ್ಶಿಯಾಗಿದ್ದರು.

ಇದನ್ನು ಓದಿ: ಬಿಜೆಪಿ ಜೊತೆ ಟಿಡಿಪಿ, ಜನಸೇನಾ ಮೈತ್ರಿ ಫೈನಲ್​: ಲೋಕಸಭೆ, ವಿಧಾನಸಭಾ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧೆ

Last Updated : Mar 9, 2024, 10:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.