ETV Bharat / bharat

ಜಮ್ಮು ಕಾಶ್ಮೀರದಲ್ಲಿ ದೇವೇಗೌಡರು: ಶಂಕರಾಚಾರ್ಯ ಬೆಟ್ಟದ ಮೆಟ್ಟಿಲು ಹತ್ತಿ ಶಿವನ ದರ್ಶನ ಪಡೆದ ಮಾಜಿ ಪ್ರಧಾನಿ - Ex PM HD Deve Gowda - EX PM HD DEVE GOWDA

28 ವರ್ಷಗಳ ನಂತರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಣಿವೆ ನಾಡು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಶಿವನ ದೇವಸ್ಥಾನವೆಂದೇ ಕರೆಯಲ್ಪಡುವ ಇಲ್ಲಿಯ ಪವಿತ್ರ ಶಂಕರಾಚಾರ್ಯ ದೇವಸ್ಥಾನದಲ್ಲಿ ದೇವರ ದರ್ಶನ‌ ಪಡೆದು ಪ್ರಾರ್ಥನೆ ಸಲ್ಲಿಸಿದರು.

Ex PM HD Deve Gowda had darshan of Lord Shiva at Sri Shankaracharya Hill
ಶಿವನ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (ETV Bharat)
author img

By ETV Bharat Karnataka Team

Published : Aug 30, 2024, 8:23 PM IST

ಮಳೆಯ ನಡುವೆ ಶ್ರೀ ಶಂಕರಾಚಾರ್ಯ ಬೆಟ್ಟದ ಮೆಟ್ಟಿಲು ಹತ್ತಿ ಶಿವನ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (ETV Bharat)

ಬೆಂಗಳೂರು/ಶ್ರೀನಗರ: ಎರಡು ದಿನಗಳಿಂದ ಕಾಶ್ಮೀರ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಇಂದು ಇಲ್ಲಿನ ಶಂಕರಾಚಾರ್ಯ ಬೆಟ್ಟದಲ್ಲಿರುವ ಜ್ಯೇಷ್ಟೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಶಿವನ ದೇವಸ್ಥಾನವೆಂದೇ ಕರೆಯಲ್ಪಡುವ ಈ ಪವಿತ್ರ ಶಂಕರಾಚಾರ್ಯ ದೇವಸ್ಥಾನದಲ್ಲಿ ದೇವರ ದರ್ಶನ‌ ಪಡೆದು ಪ್ರಾರ್ಥನೆ ಸಲ್ಲಿಸಿದ ಅವರು, ''ಈ ಕ್ಷಣ ನನ್ನ ಬದುಕಿನ ಅನನ್ಯ ಕ್ಷಣ. ಶಿವನ ದರ್ಶನದಿಂದ ನಾನು ಧನ್ಯನಾಗಿದ್ದೇನೆ'' ಎಂದು ಭಾವುಕರಾದರು. ''ನನ್ನನ್ನು ಇಲ್ಲಿಗೆ ಆ ಶಿವನೇ ಕರೆಸಿಕೊಂಡಿದ್ದಾನೆ'' ಎಂದ ಅವರು, ಬಹಳ ಹೊತ್ತು ದೇವಾಲಯದಲ್ಲಿಯೇ ಇದ್ದರು.

Ex PM HD Deve Gowda had darshan of Lord Shiva at Sri Shankaracharya Hill
ಶಿವನ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (ETV Bharat)

ಮಳೆಯ ನಡುವೆಯೇ ಸಿಆರ್​​ಪಿಎಫ್ ಪೊಲೀಸರು ಹಾಗೂ ಕಾಶ್ಮೀರ ಪೊಲೀಸರ ಸಹಾಯದಿಂದ ಮೆಟ್ಟಿಲು ಹತ್ತಿದ ದೇವೇಗೌಡರು, ಶಿವನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

"ಇಲ್ಲಿಗೆ ಭೇಟಿ ನೀಡಿ ಶಿವನ‌‌ ದರ್ಶನ ಪಡೆಯಬೇಕೆಂಬುದು ನನ್ನ ಜೀವಮಾನದ ಆಸೆಯಾಗಿತ್ತು. ಇವತ್ತು ನನ್ನ ಆಸೆ ನೆರವೇರಿದೆ. ನನ್ನನ್ನು ಇಲ್ಲಿಗೆ ಕರೆಸಿಕೊಂಡ ಆ ದೇವರಿಗೆ ಆಭಾರಿಯಾಗಿದ್ದೇನೆ" ಎಂದು ಮಾಜಿ ಪ್ರಧಾನಿ ಹೇಳಿದರು.

ಕಾಶ್ಮೀರ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (ETV Bharat)

ದೇಗುಲಕ್ಕೆ ತೆರಳಿದ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಸಿಆರ್​​ಪಿಎಫ್ ಪೊಲೀಸರು ಹಾಗೂ ಕಾಶ್ಮೀರ ಪೊಲೀಸರು ಭದ್ರತೆ ಒದಗಿಸಿದ್ದರು.

ಗುರುವಾರ ಉರಿಯ ಜಲವಿದ್ಯುತ್ ಸ್ಥಾವರಕ್ಕೆ ದೇವೇಗೌಡರು ಭೇಟಿ ನೀಡಿದ್ದರು. ವಿಶೇಷವೆಂದ್ರೆ ಅಲ್ಲಿಗೆ ತೆರಳಲು ಶ್ರೀನಗರದಿಂದ ಬಾರಮುಲ್ಲಾವರೆಗೂ ರೈಲಿನಲ್ಲಿ ಪ್ರಯಾಣ ಮಾಡಿದ್ದರು. ಇಲ್ಲಿನ ದಾಲ್ ಸರೋವರಕ್ಕೂ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ, ಮಳೆಯ ಕಾರಣ ಅಲ್ಲಿಗೆ ಭೇಟಿ ನೀಡಲಾಗಲಿಲ್ಲ. ಮುಂದಿನ ಮಾರ್ಚ್ ತಿಂಗಳಿನಲ್ಲಿ ಮತ್ತೆ ಇಲ್ಲಿಗೆ ಬರುವೆ ಎಂದು ದೇವೇಗೌಡರು ತಿಳಿಸಿದರು.

ಪವಿತ್ರ ಶಂಕರಾಚಾರ್ಯ ದೇವಸ್ಥಾನ (ETV Bharat)

ಇದನ್ನೂ ಓದಿ: ತಾವು ಉದ್ಘಾಟಿಸಿದ್ದ ಉರಿ ಜಲ ವಿದ್ಯುತ್ ಘಟಕಕ್ಕೆ ದೇವೇಗೌಡ ಭೇಟಿ : ಶ್ರೀನಗರ - ಬಾರಾಮುಲ್ಲಾ ರೈಲಿನಲ್ಲಿ ಹೆಚ್​ಡಿಡಿ ಪ್ರಯಾಣ - H D DEVEGOWDA

ETV Bharat Logo

Copyright © 2025 Ushodaya Enterprises Pvt. Ltd., All Rights Reserved.