ETV Bharat / bharat

ದೆಹಲಿ ಮದ್ಯ ಹಗರಣ: ಬಿಆರ್‌ಎಸ್ ನಾಯಕಿ ಕವಿತಾ ಬಂಧಿಸಿ ದೆಹಲಿಗೆ ಕರೆತಂದ ಇ.ಡಿ - BRS leader Kavitha arrested

ದೆಹಲಿ ಮದ್ಯ ಹಗರಣ ಪ್ರಕರಣದ ಹಿನ್ನೆಲೆಯಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರನ್ನು ಹೈದರಾಬಾದ್​ನಲ್ಲಿ ಬಂಧಿಸಿದ ಇಡಿ ಅಧಿಕಾರಿಗಳು ದೆಹಲಿಗೆ ಕರೆತಂದಿದ್ದಾರೆ. ಅದಕ್ಕೂ ಮುನ್ನ ಅವರ ನಿವಾಸದಲ್ಲಿ ಇಡಿ ಮತ್ತು ಐಟಿ ಅಧಿಕಾರಿಗಳು ಜಂಟಿಯಾಗಿ ತೀವ್ರ ಶೋಧ ನಡೆಸಿದ್ದರು. ಅವರ ನಿವಾಸದಿಂದ ಹಲವು ಮಹತ್ವದ ಕಡತಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ED  Excise policy case  Delhi  K Kavitha BRS leader Kavitha arrested
ದೆಹಲಿ ಮದ್ಯ ಹಗರಣ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಬಂಧಿಸಿ ದೆಹಲಿಗೆ ಕರೆತಂದ ಇ.ಡಿ
author img

By PTI

Published : Mar 16, 2024, 11:04 AM IST

ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಮಾಜಿ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಅವರ ಪುತ್ರಿ ಹಾಗೂ ಬಿಆರ್‌ಎಸ್‌ ಪಕ್ಷದ ಎಂಎಲ್‌ಸಿ ಕೆ. ಕವಿತಾ ಅವರನ್ನು ಹೈದರಾಬಾದ್​ನಲ್ಲಿ ಬಂಧಿಸಿದ ಇಡಿ ಅಧಿಕಾರಿಗಳು ದೆಹಲಿಗೆ ಕರೆದುಕೊಂಡು ಬಂದಿದ್ದಾರೆ. ಅದಕ್ಕೂ ಮುನ್ನವೇ ಅವರ ಮನೆಯಲ್ಲಿ ಶುಕ್ರವಾರ ಇಡಿ ಹಾಗೂ ಐಟಿ ಅಧಿಕಾರಿಗಳು ಜಂಟಿಯಾಗಿ ತೀವ್ರ ಶೋಧ ನಡೆಸಿದ್ದರು. ಪ್ರಸ್ತುತ ಕೆ. ಕವಿತಾ ಅವರನ್ನು ಇಡಿ ಅಧಿಕಾರಿಗಳು ದೆಹಲಿಗೆ ಕರೆತಂದಿದ್ದಾರೆ. ಇಲ್ಲಿ ಮತ್ತಷ್ಟು ವಿಚಾರಣೆಗೊಳಪಡಿಸುವ ಸಾಧ್ಯತೆ ಹೆಚ್ಚಿದೆ. ದಾಳಿ ನಡೆಸಿದ ಸಮಯದಲ್ಲಿ ಅವರ ನಿವಾಸದಲ್ಲಿ ಇಡಿ ಹಾಗೂ ಬಿಆರ್‌ಎಸ್ ನಾಯಕ ಕೆಟಿಆರ್ ರಾವ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿರುವ ಕುರಿತು ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಕೆ. ಕವಿತಾರಿಂದ ಹೇಳಿಕೆ ದಾಖಲು: ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕರ ನಿರ್ದೇಶನದ ಮೇರೆಗೆ ಬಂಜಾರಾ ಹಿಲ್ಸ್‌ನಲ್ಲಿರುವ ಅವರ ಮನೆಯಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳು ಹಾಗೂ ಐಟಿ ಅಧಿಕಾರಿಗಳು ಸೇರಿದಂತೆ ಒಟ್ಟು 8 ಜನ ಅಧಿಕಾರಿಗಳ ತಂಡ ಜಂಟಿಯಾಗಿ ಶೋಧ ನಡೆಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ಮನೆಯ ಎಲ್ಲ ಸದಸ್ಯರ ಸೆಲ್‌ಫೋನ್‌ಗಳು ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ವಶಕ್ಕೂ ಮುನ್ನ ಕೆ. ಕವಿತಾ ಅವರಿಂದ ಹೇಳಿಕೆ ದಾಖಲಿಸಿಕೊಂಡಿದ್ದರು.

ಈ ದಾಳಿ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪಕ್ಷದ ಕಾನೂನು ಸಂಚಾಲಕ ಸೋಮ ಭರತ್ ಮತ್ತು ವಕೀಲರು ಕವಿತಾ ಅವರ ನಿವಾಸಕ್ಕೆ ಬಂದಿದ್ದರು. ಆದರೆ, ಅಧಿಕಾರಿಗಳು ಯಾರಿಗೂ ಅವರ ಮನೆಗೆ ಪ್ರವೇಶಿಸಲು ಅವಕಾಶವೇ ಕೊಡಲಿಲ್ಲ. ಮತ್ತೊಂದೆಡೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕವಿತಾ ಮನೆದ ಸುತ್ತ ಪೊಲೀಸ್ ಬಿಗಿ ಭದ್ರತೆ ಕಂಡುಬಂದಿತ್ತು. ಕವಿತಾ ಅವರ ನಿವಾಸದ ಮೇಲೆ ಇಡಿ ದಾಳಿ ಖಂಡಿಸಿ ಬಿಆರ್‌ಎಸ್ ಕಾರ್ಯಕರ್ತರು ಪ್ರತಿಭಟನೆ ಸಹ ಕೈಗೊಂಡಿದ್ದರು.

ಮಾರ್ಚ್​ 19ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ ಮುಂದೂಡಿಕೆ: ದೇಶಾದ್ಯಂತ ಸಂಚಲನ ಮೂಡಿಸಿದ್ದ ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಈ ಹಿಂದೆ ನೀಡಿದ್ದ ನೋಟಿಸ್‌ಗಳನ್ನು ಪ್ರಶ್ನಿಸಿ ಎಂಎಲ್‌ಸಿ ಕೆ. ಕವಿತಾ ಸುಪ್ರೀಂ ಕೋರ್ಟ್​ನ ಕದ ತಟ್ಟಿದ್ದರು. ತನಿಖೆಯ ಸಮಯದಲ್ಲಿ ಮಹಿಳೆಯರ ಸಿಆರ್‌ಪಿಸಿಯ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಇಡಿಗೆ ನಿರ್ದೇಶನ ನೀಡಬೇಕು ಎಂದು ಸಹ ಅರ್ಜಿಯ ಮೂಲಕ ಕೋರಿದ್ದಾರೆ. ಈ ಅರ್ಜಿಯನ್ನು ಈಗಾಗಲೇ ಹಲವು ಬಾರಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಈ ಮಾರ್ಚ್​ 19ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಈ ಮಧ್ಯೆಯೇ ನಿನ್ನೆ (ಶುಕ್ರವಾರ) ಮಧ್ಯಾಹ್ನ ಇಡಿ ಹಾಗೂ ಐಟಿ ಅಧಿಕಾರಿಗಳು ಜಂಟಿ ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸಿದ್ದರು.

ಇದನ್ನೂ ಓದಿ: 18ನೇ ಲೋಕಸಭೆ, 4 ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟಣೆಗೆ ಕ್ಷಣಗಣನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.