ಮುಂಬೈ, ಮಹಾರಾಷ್ಟ್ರ: ಬುಧವಾರ ಮುಂಬೈನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 5 ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆಗೆ ಮುಂಚಿತವಾಗಿ ಇಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಉನ್ನತ ಹುದ್ದೆಗೆ ಅಂತಿಮಗೊಳಿಸಲಾಯಿತು.
अभिनंदन देवेंद्रजी!
— Chandrashekhar Bawankule (@cbawankule) December 4, 2024
भारतीय जनता पार्टीच्या विधिमंडळ पक्षाच्या व तत्पूर्वी झालेल्या कोअर कमिटीच्या बैठकीत सर्वानुमते महाराष्ट्राचे इन्फ्रामॅन, अष्टपैलू कर्तुत्वाचे धनी, सर्व बंधू भगिनींचे लाडके देवा भाऊ अर्थातच भारतीय जनता पार्टीचे नेते आदरणीय @Dev_Fadnavis जी यांची विधिमंडळ… pic.twitter.com/CHuVYGw6Ai
ಬಿಜೆಪಿ ಕೋರ್ ಕಮಿಟಿ ಸಭೆ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ದೇವೇಂದ್ರ ಫಡ್ನವೀಸ್ ಉಪಸ್ಥಿತರಿದ್ದರು. ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಅವರನ್ನು ಕೇಂದ್ರ ವೀಕ್ಷಕರಾಗಿ ಬಿಜೆಪಿ ನೇಮಿಸಿದೆ.
ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡನೆ: ಮಹಾಯುತಿಯ ಪಾಲುದಾರ ಪಕ್ಷಗಳ ಮುಖಂಡರು ಬುಧವಾರ ಮಧ್ಯಾಹ್ನ 3.30 ಕ್ಕೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ ಎಂದು ಶಾಸಕಾಂಗ ಪಕ್ಷದ ಸಭೆಗೆ ಮುಂಚಿತವಾಗಿ, ಬಿಜೆಪಿ ನಾಯಕ ಸುಧೀರ್ ಮುನಗಂಟಿವಾರ್ ಹೇಳಿದರು.
ನಾಳೆ ಮಹಾ ಸಿಎಂ ಪ್ರಮಾಣವಚನ ಸಮಾರಂಭ: ಡಿಸೆಂಬರ್ 5 ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿರುವ ಮೆಗಾ ಸಮಾರಂಭದಲ್ಲಿ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷವು ಈಗಾಗಲೇ ಘೋಷಿಸಿದೆ. ಈ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವಾರು ಕೇಂದ್ರ ಸಚಿವರು, ಪಕ್ಷದ ನಾಯಕರು ಮತ್ತು ಪಕ್ಷದ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
या निवडणुकीने ही गोष्ट स्पष्ट केली एक है तो सेफ है आणि मोदी है तो मुमकीन है... @Dev_Fadnavis जी #bjp #Maharashtra pic.twitter.com/vjgbujqLQb
— भाजपा महाराष्ट्र (@BJP4Maharashtra) December 4, 2024
ಪದಗ್ರಹಣಕ್ಕೆ ಎಲ್ಲವೂ ರೆಡಿ: ಪ್ರಮಾಣ ವಚನ ಸಮಾರಂಭದಲ್ಲಿ 40,000 ಬಿಜೆಪಿ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ವಿವಿಧ ಧರ್ಮಗಳ ಮುಖಂಡರು ಸೇರಿದಂತೆ 2,000 ವಿವಿಐಪಿಗಳಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ 288 ವಿಧಾನಸಭಾ ಸ್ಥಾನಗಳ ಪೈಕಿ 132 ಸ್ಥಾನಗಳನ್ನು ಗಳಿಸಿ ಗಮನಾರ್ಹ ಯಶಸ್ಸನ್ನು ಸಾಧಿಸಿತ್ತು.
ಇದನ್ನೂ ಓದಿ : ಅಮೃತ್ಸರದ ಗೋಲ್ಡನ್ ಟೆಂಪಲ್ನಲ್ಲಿ ಗುಂಡಿನ ಸದ್ದು; ಸುಖಬೀರ್ ಸಿಂಗ್ ಬಾದಲ್ ಕೂದಲೆಳೆ ಅಂತರದಲ್ಲಿ ಪಾರು