ಥಾಣೆ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬೆದರಿಕೆ ಹಾಕಿದ 26 ವರ್ಷದ ಯುವಕನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿ, ಬಂಧಿಸಿದ್ದಾರೆ.
ಥಾಣೆ ನಗರದ ವರ್ಲಿ ಪಂಡದ ನಿವಾಸಿ ಹಿತೇಶ್ ಧೇಂಡೆ ಬೆದರಿಕೆ ಹಾಕಿದ ಆರೋಪಿ ಎಂದು ಶ್ರೀ ನಗರ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಗುಲ್ಜಾರಿಲ್ಲ್ ಫದ್ಥೆರೆ ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ ಉಪ ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಪದ ಬಳಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ
ಶಿಂಧೆ ನೇತೃತ್ವದ ಶಿವಸೇನಾ ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳಾದ 133 (ವ್ಯಕ್ತಿಯನ್ನು ಅವಮಾನಿಸುವ ಉದ್ದೇಶದಿಂದ ಆಕ್ರಮಣ ಅಥವಾ ಕ್ರಿಮಿನಲ್ ಸಂಚು), 352 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ), 351(1) (ಬೆದರಿಕೆ) ಮತ್ತು 356 (2) (ಮಾನನಷ್ಟ) ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ಅಜ್ಜಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಸಾವು