ETV Bharat / bharat

ವಾರಾಣಸಿಯ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮ - VARANASI RAILWAY STATION

ವಾರಾಣಸಿಯ ಕ್ಯಾಂಟ್​​​ ರೈಲು ನಿಲ್ದಾಣದ ಪಾರ್ಕಿಂಗ್​​ ಸ್ಟ್ಯಾಂಡ್​ನಲ್ಲಿ ಶುಕ್ರವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ನಾಶವಾಗಿವೆ.

ವಾರಾಣಸಿಯ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ
ವಾರಾಣಸಿಯ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ (ETV Bharat)
author img

By ETV Bharat Karnataka Team

Published : Nov 30, 2024, 2:10 PM IST

ವಾರಾಣಸಿ (ಉತ್ತರ ಪ್ರದೇಶ): ಕ್ಯಾಂಟ್​​​ ರೈಲು ನಿಲ್ದಾಣದ ಪಾರ್ಕಿಂಗ್​​ ಸ್ಟ್ಯಾಂಡ್​ನಲ್ಲಿ ಬೆಂಕಿ ಅವಘಡ ಸಂಭವಿಸಿ, 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಪ್ಲಾಟ್‌ಫಾರ್ಮ್ ಒಂದರ ಪಾರ್ಕಿಂಗ್ ಸ್ಟ್ಯಾಂಡ್​ ಬಳಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ರೈಲ್ವೆ ರಕ್ಷಣಾ ಪಡೆ ಮತ್ತು ಸರ್ಕಾರಿ ರೈಲ್ವೆ ಪೊಲೀಸ್ ತಂಡಗಳು ಅಗ್ನಿಶಾಮಕ ಇಲಾಖೆಯೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತಂದರೂ 150ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲವಾಗಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಜಿ ಚೌಧರಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ರೈಲ್ವೆ ನೌಕರರಿಗಾಗಿ ಪಾರ್ಕಿಂಗ್ ಸ್ಟ್ಯಾಂಡ್ ನಿರ್ಮಿಸಲಾಗಿದ್ದು, ಬೆಂಕಿಯಿಂದಾಗಿ ಸಾಕಷ್ಟು ಹಾನಿಯಾಗಿದೆ. ಬೆಂಕಿ ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಚೌಧರಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.