ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸಂಗಮದಲ್ಲಿರುವ ಮಹಾ ಕುಂಭಮೇಳ 2025 ರ ಸೆಕ್ಟರ್ ಸಂಖ್ಯೆ 6ರ ಶಿಬಿರದಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 20 ರಿಂದ 25 ಡೇರೆಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡದಲ್ಲಿ ಭಕ್ತರಿಗೆ ಸುಟ್ಟ ಗಾಯಗಳಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಟೆಂಟ್ನಲ್ಲಿ ಅಡುಗೆ ಮಾಡುತ್ತಿದ್ದಾಗ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ರಭಸವಾಗಿ ಬೀಸುವ ಗಾಳಿಯಿಂದಾಗಿ ಬೆಂಕಿ ಒಂದು ಡೇರೆಯಿಂದ ಮತ್ತೊಂದು ಡೇರೆಗೆ ವೇಗವಾಗಿ ಹರಡುತ್ತಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಕಿಯಿಂದಾಗಿ ಕುಂಭಮೇಳ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಡೇರೆಗಳಲ್ಲಿ ಇರಿಸಲಾಗಿದ್ದ ಹಲವು ಸಿಲಿಂಡರ್ಗಳು ಸ್ಫೋಟಗೊಂಡಿವೆ ಎಂದು ಹೇಳಲಾಗುತ್ತಿದೆ. ಹಿರಿಯ ಪೊಲೀಸ್ ಹಾಗೂ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಹಲವು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಪಘಾತಕ್ಕೆ ನಿಖರವಾದ ಕಾರಣವನ್ನು ಕಂಡು ಹಿಡಿಯಲು ಹೆಚ್ಚಿನ ತನಿಖೆ ಮುಂದುವರೆದಿದೆ.
#WATCH | Prayagraj, Uttar Pradesh | A fire breaks out at the #MahaKumbhMela2025. More details awaited. pic.twitter.com/pmjsAq9jkA
— ANI (@ANI) January 19, 2025
ಸ್ವಸ್ತಿಕ್ ದ್ವಾರದ ಬಳಿ ಇರುವ ರೈಲ್ವೆ ಸೇತುವೆಯ ಕೆಳಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಇಲಾಖೆ ಸೆಕ್ಟರ್ 19 ರ ಪ್ರದೇಶವನ್ನು ಪ್ರವೇಶ ನಿಷೇಧಿಸಿದೆ. ಒಂದೇ ಸ್ಥಳದಲ್ಲಿ ಅನೇಕ ಸಿಲಿಂಡರ್ಗಳನ್ನು ಇಟ್ಟಿದ್ದ ಕಾರಣ, ನಿರಂತರವಾಗಿ ಸಿಲಿಂಡರ್ಗಳು ಸ್ಫೋಟಗೊಂಡಿವೆ. ಅನೇಕ ಅಗ್ನಿಶಾಮಕ ದಳ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಜೋರಾಗಿ ಗಾಳಿ ಬೀಸುತ್ತಿರುವುದರಿಂದ ಬೆಂಕಿಯನ್ನು ನಿಯಂತ್ರಿಸುವುದು ಕಷ್ಟಕರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಮಹಾ ಕುಂಭ ಮೇಳದಲ್ಲಿ ನಂದಿನಿ ಉತ್ಪನ್ನ: ಕೆಎಂಎಫ್-ಚಾಯ್ ಪಾಯಿಂಟ್ ಒಡಂಬಡಿಕೆ