ETV Bharat / bharat

ಕೇರಳ: ಬಾಡಿಗೆ ಮನೆಯಲ್ಲಿ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ

ಕೇರಳದ ಕೊಟ್ಟಾಯಂನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

author img

By PTI

Published : Mar 5, 2024, 1:09 PM IST

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ
ಒಂದೇ ಕುಟುಂಬದ ಐವರು ಶವವಾಗಿ ಪತ್ತೆ

ಕೊಟ್ಟಾಯಂ(ಕೇರಳ): ಕೇರಳದ ಕೊಟ್ಟಾಯಂನ ಅಕಲಕುನ್ನಂ ಪ್ರದೇಶದಲ್ಲಿ ಹೃದಯವಿದ್ರಾವಕ ಪ್ರಕರಣವೊಂದು ಇಂದು ಬೆಳಕಿಗೆ ಬಂದಿದೆ. ಬಾಡಿಗೆ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ಐವರು ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.

ಜೈಸನ್​ ಎಂಬವರ ಕುಟುಂಬವೇ ಸಾವಿಗೀಡಾಗಿದ್ದು. ಇದರಲ್ಲಿ 10 ವರ್ಷದೊಳಗಿನ ಮೂವರು ಮಕ್ಕಳೂ ಇದ್ದಾರೆ. ಜೈಸನ್​ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಪತ್ನಿ ಮತ್ತು ಮೂವರು ಮಕ್ಕಳು ಹಾಸಿಗೆಯ ಮೇಲೆ ರಕ್ತದ ಕಲೆಗಳಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐವರೂ ಅಕಲಕುನ್ನಂ ಜಂದುಪಾರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಯಾವ ಕಾರಣಕ್ಕಾಗಿ ಸಾವಿಗೀಡಾಗಿದ್ದಾರೆ ಎಂಬುದು ತನಿಖೆ ಮಾಡಲಾಗುತ್ತಿದೆ. ಜೈಸನ್​ ಅವರು ಮೊದಲು ಪತ್ನಿ ಮತ್ತು ಮಕ್ಕಳನ್ನು ಕೊಂದ ನಂತರ ಅವರೂ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್​ ಗುರಿಯಾಗಿಸಿ ಲೆಬನಾನ್‌ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿ ಸಾವು, ಇನ್ನಿಬ್ಬರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.