ರಾಯ್ಪುರ್, ಛತ್ತೀಸ್‌ಗಢ: ಛತ್ತೀಸ್ಗಡದ ಬಸ್ತಾರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಐವರು ನಕ್ಸಲೀಯರು ಸಾವನ್ನಪ್ಪಿದ್ದು, ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ 8ಗಂಟೆಗೆ ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿರುವ ಉತ್ತರ ಅಬುಜ್ಮದ್‌ನ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲ್ ವಿರೋಧಿ ಗುಂಪಿನ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ.
ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಸಾವನ್ನಪ್ಪಿದ್ದು, ಸ್ಥಳದಲ್ಲಿ ಸಿಕ್ಕ ಶಸಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ತಿಳಿಸಿದರು.
ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ರಾಯಪುರದ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಜನವರಿಯಿಂದ 194 ನಕ್ಸಲೀಯರ ಹತ್ಯೆ: ಕಳೆದ ಜನವರಿಯಿಂದ 194 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ. 801 ಜನರ ಬಂಧನ, 742 ಮಂದಿ ಶರಣಾಗತರಾಗಿದ್ದಾರೆ. ನಕ್ಸಲಿಸಂ ವಿರುದ್ಧದ ಹೋರಾಟದಲ್ಲಿ ಛತ್ತೀಸ್‌ಗಢ ಸರ್ಕಾರ ದೊಡ್ಡ ಯಶಸ್ಸು ಸಾಧಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.
ಈಶಾನ್ಯ ರಾಜ್ಯಗಳು ಮತ್ತು ಜಮ್ಮು-ಕಾಶ್ಮೀರದಲ್ಲಿ ಸುಮಾರು 13 ಸಾವಿರ ಮಂದಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದಾರೆ. ನಕ್ಸಲ್ವಾದದಲ್ಲಿ ತೊಡಗಿಕೊಂಡಿರುವ ಯುವಕರು ಇದರಿಂದ ಹೊರಬಂದು ಮುಖ್ಯವಾಹಿನಿಗೆ ಸೇರುವಂತೆ ಅಮಿತ್ ಶಾ ಮನವಿ ಮಾಡಿಕೊಂಡಿದ್ದಾರೆ.
ಕಂಕೇರ್ ಮತ್ತು ನಾರಾಯಣಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ರಾಜ್ಯದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರ ನಡುವೆ ಗುಂಡಿನ ಚಕಮಕಿ ಸಾಗಿದೆ.
ಇದನ್ನೂ ಓದಿ: ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ನವಜಾತ ಶಿಶುಗಳು ಸಾವು, 17 ಕಂದಮ್ಮಗಳ ಸ್ಥಿತಿ ಗಂಭೀರ