ETV Bharat / bharat

ಖಾಸಗಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು - KUTCH HORRIFIC ACCIDENT

ಗುಜರಾತ್​ನ ಕಛ್​ನಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 5 ಜನರು ಮೃತಪಟ್ಟಿದ್ದಾರೆ.

5 died on Mundra-Kera road in Kutch, bus carrying 40 passengers meets with horrific accident
ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ (ETV Bharat)
author img

By ETV Bharat Karnataka Team

Published : Feb 21, 2025, 4:30 PM IST

ಕಚ್(ಗುಜರಾತ್‌): ಖಾಸಗಿ ಬಸ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುಜರಾತ್‌ನ ಗಡಿ ಜಿಲ್ಲೆ ಕಛ್​ನಲ್ಲಿ ಇಂದು ಸಂಭವಿಸಿತು. ಸುಮಾರು 20 ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಕಛ್​ನ ಕೇರಾ ಮುಂದ್ರಾ ರೋಹ್ ಬಳಿ ಅಪಘಾತ ಸಂಭವಿಸಿದೆ. ಬಸ್​ನಲ್ಲಿ 40 ಜನರು ಪ್ರಯಾಣಿಸುತ್ತಿದ್ದರು. ಡಿಕ್ಕಿಯ ರಭಸಕ್ಕೆ ಬಸ್​ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.

ಖಾಸಗಿ ಬಸ್ ಮುಂದ್ರಾದಿಂದ ಬರುತ್ತಿದ್ದರೆ, ಟ್ರಕ್ ಭುಜ್​ನಿಂದ ಸಂಚರಿಸುತ್ತಿತ್ತು. ಈ ವೇಳೆ ರಸ್ತೆ ಅಪಘಾತ ಘಟಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಐದು ಜನ ಸ್ಥಳದಲ್ಲೇ ಸಾವು; ಕುಟುಂಬಸ್ಥರ ಆಕ್ರಂದನ - TERRIBLE ROAD ACCIDENT

ETV Bharat Logo

Copyright © 2025 Ushodaya Enterprises Pvt. Ltd., All Rights Reserved.