ETV Bharat / bharat

ಪೂಂಚ್‌ನಲ್ಲಿ ವಾಯುಪಡೆ ವಾಹನದ ಮೇಲೆ ಉಗ್ರರ ದಾಳಿ: ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ - Poonch Terror Attack

ಲೋಕಸಭೆ ಚುನಾವಣೆ ಹೊತ್ತಲ್ಲೇ, ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಭಯೋತ್ಪಾದಕರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಐಎಎಫ್ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಉಗ್ರರ ದಾಳಿಗೆ ಒಳಗಾದ ಭದ್ರತಾ ಸಿಬ್ಬಂದಿ ವಾಹನ
ಉಗ್ರರ ದಾಳಿಗೆ ಒಳಗಾದ ಭದ್ರತಾ ಸಿಬ್ಬಂದಿ ವಾಹನ ((Photo: IANS))
author img

By PTI

Published : May 4, 2024, 10:51 PM IST

ಜಮ್ಮು: ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಮೂರು ವಾರಗಳ ಮೊದಲು, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರು ಭಾರತೀಯ ವಾಯುಪಡೆ (ಐಎಎಫ್) ಸೇರಿದಂತೆ ಎರಡು ಭದ್ರತಾ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಭಾರತೀಯ ವಾಯಪಡೆಯ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ಯೋಧರು ಗಾಯಗೊಂಡಿದ್ದಾರೆ.

2003 ರಿಂದ 2021 ರ ನಡುವೆ ಶಾಂತಿಯುತವಾಗಿದ್ದ ಗಡಿ ಜಿಲ್ಲೆಯಾದ ಪೂಂಚ್ ಮತ್ತು ರಜೌರಿಯಲ್ಲಿ ಕಳೆದ 2 ವರ್ಷಗಳಿಂದ ಭಯೋತ್ಪಾದಕ ದಾಳಿಗಳು ಹೆಚ್ಚುತ್ತಿವೆ. ಶನಿವಾರ ಸಂಜೆ 6.15ರ ಸುಮಾರಿಗೆ ಐಎಎಫ್‌ಗೆ ಸೇರಿದ ಒಂದು ವಾಹನ ಸೇರಿದಂತೆ ಎರಡು ಭದ್ರತಾ ವಾಹನಗಳು ಬರುತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

ಜಿಲ್ಲೆಯ ಸುರನ್‌ಕೋಟೆ ಪ್ರದೇಶದ ಸಮೀಪದ ಸನೈ ಟಾಪ್ ಕಡೆಗೆ ವಾಹನಗಳು ಬರುತ್ತಿದ್ದವು. ಈ ವೇಳೆ ನಡೆದ ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದು, ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿದ್ದ ಇಬ್ಬರಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಸೇನಾಪಡೆ ತಿಳಿಸಿದೆ.

ಉಗ್ರರ ದಾಳಿ ಬೆನ್ನಲ್ಲೇ ವಾಯುಸೇನಾ ಪಡೆಯ ಯೋಧರು ಪ್ರತಿದಾಳಿ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಐವರು ಐಎಎಫ್ ಯೋಧರಿಗೆ ಬುಲೆಟ್ ಗಾಯಗಳಾಗಿದ್ದವು. ಚಿಕಿತ್ಸೆಗಾಗಿ ಅವರನ್ನು ಹತ್ತಿರದ ಸೇನಾ ಆಸ್ಪತ್ರೆಗೆ ದಾಖಲಿಸಿದ್ದೆವು. ಆದರೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಬಳಿಕ ಭಯೋತ್ಪಾದಕರ ವಿರುದ್ಧ ಸ್ಥಳೀಯ ಭದ್ರತಾ ಪಡೆಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಐಎಎಫ್​ ಎಕ್ಸ್​ನಲ್ಲಿ ಮಾಹಿತಿ ನೀಡಿದೆ. ಕಳೆದ ವರ್ಷ ಬುಫ್ಲಿಯಾಜ್‌ನಲ್ಲಿ ಸೈನಿಕರ ಮೇಲೆ ದಾಳಿ ನಡೆಸಿದ ಭಯೋತ್ಪಾದಕ ಗುಂಪಿನಿಂದಲೇ ಈ ದಾಳಿ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ

ವಾಹನಗಳಿಗೆ ಹಾನಿ: ಎಕೆ ಅಸಾಲ್ಟ್ ರೈಫಲ್‌ಗಳನ್ನು ಹೊಂದಿದ್ದ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸೇನಾ ಟ್ರಕ್‌ಗೆ ಹೆಚ್ಚಿನ ಹಾನಿಯಾಗಿದೆ. ದಾಳಿ ಬಳಿಕ ಹತ್ತಿರದ ಅರಣ್ಯಪ್ರದೇಶದೊಳಗೆ ಉಗ್ರರು ತಲೆಮರೆಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನು ಶಂಕಿತ ವ್ಯಕ್ತಿಗಳ ಚಲನವಲನದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅರೆಸೇನಾ ಪಡೆಗಳು ಮತ್ತು ಪೊಲೀಸರು ಶುಕ್ರವಾರದಿಂದ ಪೂಂಚ್​ನಲ್ಲಿ ಶೋಧಕಾರ್ಯ ನಡೆಸುತ್ತಿದ್ದರು. ಆದರೆ ಕಾರ್ಯಾಚರಣೆ ವೇಳೆ ಯಾರೂ ಸಿಕ್ಕಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್​ ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದ ಭಾಗವಾಗಿದ್ದು, ಮೇ 25 ರಂದು ಆರನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: ಅಮಿತ್​ ಶಾ ನಕಲಿ ವಿಡಿಯೋ ಹಿಂದೆ ದೊಡ್ಡ ಪಿತೂರಿ: ಕ್ರಿಮಿನಲ್​ ಕೇಸ್​ ದಾಖಲಿಸಿದ ದೆಹಲಿ ಪೊಲೀಸರು - Amit Shah fake video

ETV Bharat Logo

Copyright © 2024 Ushodaya Enterprises Pvt. Ltd., All Rights Reserved.