ETV Bharat / bharat

ಲೋಕಸಭೆಯಲ್ಲಿಂದು ಬ್ಯಾಂಕಿಂಗ್​ ಕಾನೂನುಗಳ ತಿದ್ದುಪಡಿ ಮಸೂದೆ ಮಂಡಿಸಲಿರುವ ಸಚಿವೆ ನಿರ್ಮಲಾ

ನವೆಂಬರ್​ 25ರ ಸೋಮವಾರದಿಂದ ಆರಂಭವಾಗಿರುವ ಸಂಸತ್ತಿನ​ ಚಳಿಗಾಲದ ಅಧಿವೇಶನ ಡಿಸೆಂಬರ್​ 20ರವರೆಗೆ ನಡೆಯಲಿದೆ.

Union Finance Minister Nirmala Sitharaman move the Banking Laws Bill in the Lok Sabha
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ) (IANS)
author img

By ETV Bharat Karnataka Team

Published : 2 hours ago

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಇಂದು ಲೋಕಸಭೆಯಲ್ಲಿ ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ ಮಂಡಿಸಲಿದ್ದಾರೆ. ಬ್ಯಾಂಕಿಂಗ್ ನಿಯಂತ್ರಣ ಕಾಯಿದೆಯ ಜೊತೆಗೆ ರಿಸರ್ವ್ ಬ್ಯಾಂಕ್​ ಆಫ್​ ಇಂಡಿಯಾ ಕಾಯ್ದೆ-1934 ಅನ್ನೂ ಅವರು ಮಂಡಿಸುವರು.

ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ-2024, ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆ-1934, ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ-1949, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾಯಿದೆ-1955, ಬ್ಯಾಂಕಿಂಗ್ ಕಂಪನಿಗಳ (ಅಂಡರ್‌ಟೇಕಿಂಗ್‌ಗಳ ಸ್ವಾಧೀನ ಮತ್ತು ವರ್ಗಾವಣೆ) ಕಾಯಿದೆ-1970 ಮತ್ತು ಬ್ಯಾಂಕಿಂಗ್ ಕಂಪನಿಗಳು (ಅಂಡರ್‌ಟೇಕಿಂಗ್‌ಗಳ ಸ್ವಾಧೀನ ಮತ್ತು ವರ್ಗಾವಣೆ) ಕಾಯಿದೆ-1980 ಮಂಡಿಸಲಿದ್ದಾರೆ.

ಉದ್ದೇಶವೇನು?: ಈ ಮಸೂದೆಗಳು ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರ ಅಧಿಕಾರಾವಧಿ ಮತ್ತು ಕ್ಲೈಮ್​ ಮಾಡದ ಹಣದ ಇತ್ಯರ್ಥಪಡಿಸುವಿಕೆಯ ಕುರಿತ ನಿಬಂಧನೆಯನ್ನು ಹೊಂದಿವೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​​ ಅವರು ರೈಲ್ವೆ (ತಿದ್ದುಪಡಿ) ಮಸೂದೆ-2024 ಅನ್ನು ಮಂಡಿಸಲಿದ್ದಾರೆ. ರೈಲ್ವೆ ಕಾಯಿದೆ-1989ಕ್ಕೆ ತಿದ್ದುಪಡಿ ಜೊತೆಗೆ ರೈಲ್ವೇ ಮಂಡಳಿಯ ಅಧಿಕಾರಗಳನ್ನು ಹೆಚ್ಚಿಸಲು ಮತ್ತು ಕಾರ್ಯಾಚರಣೆ ದಕ್ಷತೆ ಸುಧಾರಣೆಯ ಗುರಿಯನ್ನು ಇದು ಹೊಂದಿದೆ.

ಇಂಡಿಯನ್​ ರೈಲ್ವೆ ಬೋರ್ಡ್​ ಕಾಯ್ದೆ-1905 ಅನ್ನು ರೈಲ್ವೆ ಆ್ಯಕ್ಟ್-1989ಗೆ ಸೇರಿಸುವ ಉದ್ದೇಶವನ್ನು ಮಸೂದೆ ಹೊಂದಿದೆ. ಇದು ಭಾರತೀಯ ರೈಲ್ವೆಯ ಕಾನೂನಿನ ಚೌಕಟ್ಟು ಸರಳೀಕರಿಸಲಿದೆ.

ಈ ಎರಡೂ ಮಸೂದೆಗಳ ಹೊರತಾಗಿ ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ, 2024-25ರ ಅವಧಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿಗಳೊಂದಿಗೆ ರಾಜ್ಯಸಭಾ ಸದಸ್ಯರ ಸೇರುಸುವಿಕೆಯ ಕುರಿತು ಪ್ರಸ್ತಾವವನ್ನು ಸದನದ ಮುಂದಿಡಲಿದ್ದಾರೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ತಿರುವನಂತಪುರದ ಶ್ರೀ ಚಿತ್ರ ತಿರುನಾಳ್ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಗೆ ಇಬ್ಬರು ಸದಸ್ಯರ ಆಯ್ಕೆಗೆ ಪ್ರಸ್ತಾವನೆ ಮಂಡಿಸಲಿದ್ದಾರೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆ-2024 ತಿದ್ದುಪಡಿ ಮಸೂದೆ ಮಂಡಿಸಲಿದ್ದಾರೆ.(ಐಎಎನ್​ಎಸ್​)

ಇದನ್ನೂ ಓದಿ: ರಾಹುಲ್ ಗಾಂಧಿ ಪೌರತ್ವ ವಿವಾದ: ಮಾಹಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಲಖನೌ ಕೋರ್ಟ್​ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.