ETV Bharat / bharat

ರಾಜ್ಯದ ಜನರಿಗಾಗಿ ರಾಜೀನಾಮೆ ನೀಡಲು ಸಿದ್ಧ: ಪಶ್ಚಿಮ ಬಂಗಾಳ ಸಿಎಂ ಮಮತಾ - Mamata Banerjee - MAMATA BANERJEE

ರಾಜ್ಯದ ಜನರ ಹಿತದೃಷ್ಟಿಯಿಂದ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ವೈದ್ಯರು ಸೇವೆ ನಿಲ್ಲಿಸಿದ್ದರಿಂದ 27 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (ETV Bharat)
author img

By ETV Bharat Karnataka Team

Published : Sep 13, 2024, 9:23 AM IST

ನವದೆಹಲಿ: "ಜನರ ಹಿತಕ್ಕಾಗಿ ನಾನು ಸಿಎಂ ಸ್ಥಾನದಿಂದ ಕೆಳಗಿಳಿಯಲು ಸಿದ್ಧ. ಆದರೆ ಸಂತ್ರಸ್ತೆಗೆ ನ್ಯಾಯ ಸಿಗಬೇಕು" ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಆರ್.ಜೆ.ಕರ್ ಬಿಕ್ಕಟ್ಟು ಇಂದು ಅಂತ್ಯವಾಗಲಿದೆ ಎಂದು ನಿರೀಕ್ಷಿಸಿದ್ದ ಬಂಗಾಳದ ಜನರಲ್ಲಿ ಕ್ಷಮೆ ಕೋರುತ್ತೇನೆ. ಕಿರಿಯ ವೈದ್ಯರು ಸಭೆಗೆ ಬರಲಿಲ್ಲ. ಅವರೆಲ್ಲರೂ ಮತ್ತೆ ಸೇವೆಗೆ ಮರಳುವಂತೆ ಮನವಿ ಮಾಡುತ್ತೇನೆ" ಎಂದರು.

"ಕಳೆದ ಮೂರು ದಿನಗಳಿಂದ ನನ್ನ ಸದುದ್ದೇಶ ಮತ್ತು ಪ್ರಯತ್ನಗಳ ಮಧ್ಯೆಯೂ ಕಿರಿಯ ವೈದ್ಯರು ಮಾತುಕತೆ ನಡೆಸಲು ನಿರಾಕರಿಸಿದ್ದಾರೆ. ನಾನು ರಾಜ್ಯದ ಜನರ ಹಿತದೃಷ್ಟಿಯಿಂದ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಕಿರಿಯ ವೈದ್ಯರು ಸೇವೆ ನಿಲ್ಲಿಸಿದ್ದರಿಂದ 27 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ಏಳು ಲಕ್ಷ ಜನರ ಮೇಲೆ ಪರಿಣಾಮ ಬೀರುತ್ತಿದೆ. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಆದರೆ ಸುಪ್ರೀಂ ಕೋರ್ಟ್ ತೀರ್ಪಿನಂತೆ ವೈದ್ಯರು ಮತ್ತೆ ಕೆಲಸಕ್ಕೆ ಸೇರಿಕೊಳ್ಳಬೇಕು" ಎಂದು ಮನವಿ ಮಾಡಿದರು.

"ನಾವು ಧರಣಿ ನಿರತ ವೈದ್ಯರ ವಿರುದ್ಧವಾಗಿ ಹೋಗುತ್ತಿಲ್ಲ. ಕಿರಿಯ ವೈದ್ಯರಿಗಿಂತ ದೊಡ್ಡವಳೆಂಬ ಕಾರಣಕ್ಕೆ ಅವರನ್ನು ಕ್ಷಮಿಸಿದ್ದೇನೆ. ಸಭೆಗೆ ಬಾರದೇ ಕಾಯಿಸಿದ ವೈದ್ಯರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಏಕೆಂದರೆ ಹಿರಿಯರಾಗಿ, ಕಿರಿಯರನ್ನು ಕ್ಷಮಿಸುವುದು ನಮ್ಮ ಜವಾಬ್ದಾರಿ" ಎಂದರು.

"ವೈದ್ಯರು ಬರುತ್ತಾರೆ ಎಂದು ನಾನು ಮೂರು ದಿನಗಳಿಂದ ಕಾಯುತ್ತಿದ್ದೆ. ಆದರೆ ಅವರು ಬರಲಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಉಲ್ಲಂಘಿಸಿದ್ದಾರೆ. ಮತ್ತೆ ಕೆಲಸಕ್ಕೆ ಸೇರಿಲ್ಲ. ಆದರೆ ನಾವು ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ ಕೆಲ ಸಂದರ್ಭಗಳನ್ನು ತಾಳ್ಮೆಯಿಂದ ಎದುರಿಸಬೇಕಾಗುತ್ತದೆ. ಚರ್ಚೆಗಳ ಮೂಲಕವೇ ಪರಿಹಾರಗಳನ್ನು ತಲುಪಲು ಸಾಧ್ಯವಾದ್ದರಿಂದ ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಬೇಕಿದೆ" ಎಂದು ಮಮತಾ ಅಭಿಪ್ರಾಯಪಟ್ಟರು.

ಆಗಸ್ಟ್ 9ರಂದು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಮಹಿಳಾ ಟ್ರೈನಿ ವೈದ್ಯೆಯ ಶವ ಪತ್ತೆಯಾದ ಕೆಲವೇ ಗಂಟೆಗಳ ನಂತರ ಕಿರಿಯ ವೈದ್ಯರು ತಮ್ಮ ಮುಷ್ಕರ ಪ್ರಾರಂಭಿಸಿದ್ದರು. ಅಂದಿನಿಂದ, ಪ್ರತಿಭಟನೆ ಉಲ್ಬಣಗೊಂಡಿದೆ. ಇದರಿಂದ ಪಶ್ಚಿಮ ಬಂಗಾಳದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳು ಸ್ಥಗಿತಗೊಂಡಿವೆ.

ಇದನ್ನೂ ಓದಿ: ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎಂದ ಮಾತ್ರಕ್ಕೆ ಆರೋಪಿಗಳ ಆಸ್ತಿ ಧ್ವಂಸಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ: ಸುಪ್ರೀಂ - crime is no ground for demolition

ETV Bharat Logo

Copyright © 2024 Ushodaya Enterprises Pvt. Ltd., All Rights Reserved.