ಪಾಟ್ನಾ: ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಕೊನೆಯುಸಿರೆಳಿದಿದ್ದಾರೆ. ಸುಶೀಲ್ ಮೋದಿ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಜ್ಯಸಭಾ ಮಾಜಿ ಸಂಸದರಾಗಿ ಸೇವೆ ಸಲ್ಲಿಸಿದ್ದರು. ಕ್ಯಾನ್ಸರ್ನಿಂದಾಗಿ ರಾಜಕೀಯದಿಂದ ಅವರು ದೂರ ಉಳಿದಿದ್ದರು.
ಸುಶೀಲ್ ಮೋದಿ ಅವರು ಜನವರಿ 5, 1952 ರಂದು ಪಾಟ್ನಾದಲ್ಲಿ ಜನಿಸಿದರು. ಬಿಹಾರದ ಮೂರನೇ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರೂ ಆಗಿ ಸೇವೆ ಸಲ್ಲಿಸಿದ್ದರು.
ರಾಜಕೀಯ ಜೀವನ: ಪಾಟ್ನಾ ವಿಜ್ಞಾನ ಕಾಲೇಜಿನಲ್ಲಿ ಸಸ್ಯಶಾಸ್ತ್ರದಲ್ಲಿ ಪದವಿ ಪಡೆದಿದ್ದ ಅವರು 1990 ರಲ್ಲಿ ಬಿಹಾರ ವಿಧಾನಸಭೆಗೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಇದಾದ ನಂತರ 1995 ಮತ್ತು 2000ರಲ್ಲಿಯೂ ಶಾಸಕರಾಗಿ ಆಯ್ಕೆಯಾಗಿದ್ದರು. ಸತತ ಮೂರು ಅವಧಿಗೆ ಶಾಸಕರಾಗಿದ್ದರು. ಅವರು 2005 ರಿಂದ 2013 ಮತ್ತು 2017 ರಿಂದ 2020 ರವರೆಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರು.
ಇದನ್ನೂ ಓದಿ: ಬೆಳಗಾವಿ: ಮಾಜಿ ಎಂಎಲ್ಸಿ ಸುನಂದಾ ಪಾಟೀಲ ವಿಧಿವಶ - Sunanda Patil passes away