ಬನಸ್ಕಾಂತ(ಗುಜರಾತ್): ಮಾದಕ ವಸ್ತು ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ ಇಲ್ಲಿನ ಪಾಲನ್‌ಪುರ ನಗರದ ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಕ್ರಿಮಿನಲ್ ಪ್ರಕರಣದಲ್ಲಿ ಭಟ್‌ಗೆ ವಿಧಿಸಲಾದ ಎರಡನೇ ಶಿಕ್ಷೆ ಇದಾಗಿದೆ. ಮೊದಲನೆಯದು ಕಸ್ಟಡಿಯಲ್ಲಿದ್ದ ವ್ಯಕ್ತಿಯೊಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಜಾಮ್‌ನಗರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿತ್ತು.
''ನನ್ನ ಪತಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಂಡಿದ್ದೇನೆ. ಮುಂದಿನ ಹೋರಾಟ ಮಾಡುತ್ತೇವೆ. ಈ ಬಗ್ಗೆ ಉನ್ನತ ನ್ಯಾಯಾಲಯದ ಮೊರೆ ಹೋಗುತ್ತೇವೆ. ಅವರನ್ನು ಗೌರವಯುತವಾಗಿ ವಾಪಸ್ ಕರೆಸಿಕೊಳ್ಳುತ್ತೇವೆ'' ಎಂದು ಸಂಜೀವ್ ಭಟ್ ಪತ್ನಿ ಹೇಳಿದ್ದಾರೆ.
ನ್ಯಾಯಾಲಯವು ಭಟ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿ 11 ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ 20 ವರ್ಷಗಳ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ಹಾಕಿತು. ಸಂಜೀವ್ ಭಟ್ ಪರ ವಕೀಲ ಬಿ.ಎಸ್.ತುವಾರ್ ವಾದ ಮಂಡಿಸಿದ್ದಾರೆ.
2015ರಲ್ಲಿ ಸೇವೆಯಿಂದ ವಜಾ: ಸಂಜೀವ್ ಭಟ್ ಅವರನ್ನು 2015ರಲ್ಲಿ ಭಾರತೀಯ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿತ್ತು. ಆ ಸಮಯದಲ್ಲಿ ಅವರು ಬನಸ್ಕಾಂತ ಜಿಲ್ಲೆಯ ಪೊಲೀಸ್ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ: ಹೃದಯಾಘಾತದಿಂದ ಮಾಫಿಯಾ ಡಾನ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು - Mukhtar Ansari