ETV Bharat / bharat

ದೆಹಲಿ ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಹೆಚ್.ಡಿ.ದೇವೇಗೌಡ ಭೇಟಿ - Prime Ministers Museum

author img

By ETV Bharat Karnataka Team

Published : Aug 3, 2024, 10:55 PM IST

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶನಿವಾರ ನವದೆಹಲಿಯಲ್ಲಿನ ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದರು.

deve gowda
ಹೆಚ್.ಡಿ.ದೇವೇಗೌಡ (Deve Gowda X Post)

ಬೆಂಗಳೂರು/ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಇಂದು ನವದೆಹಲಿಯಲ್ಲಿರುವ ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದರು.

ಭಾರತಕ್ಕೆ ತಮ್ಮದೇ ಆದ ಅನನ್ಯ ಕೊಡುಗೆ ನೀಡಿರುವ ಎಲ್ಲಾ ಪ್ರಧಾನಿಗಳ ಮಾಹಿತಿಯನ್ನು ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಕೈಗೊಂಡ ಕ್ರಮಗಳ ಬಗ್ಗೆ ದೇವೇಗೌಡರು ಸಂತಸ ವ್ಯಕ್ತಪಡಿಸಿದರು. ಭೇಟಿಯ ಸಂದರ್ಭದ ಫೋಟೋಗಳನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

deve gowda
ಹೆಚ್.ಡಿ.ದೇವೇಗೌಡ (Deve Gowda X Post)

ಪ್ರಧಾನಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಬಗ್ಗೆ ಮಾಜಿ ಪ್ರಧಾನಿಗಳು, ಅಲ್ಲಿ ಕಳೆದ ಕ್ಷಣಗಳ ಬಗ್ಗೆ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ವಸ್ತು ಸಂಗ್ರಹಾಲಯದ ಅಧಿಕಾರಿಗಳು ಮಾಜಿ ಪ್ರಧಾನಿಗಳನ್ನು ಬರ ಮಾಡಿಕೊಂಡು, ಅಲ್ಲಿನ ಎಲ್ಲಾ ಪ್ರಧಾನಿಗಳ ಕುರಿತಾದ ಮಾಹಿತಿಯನ್ನು ನೀಡಿದರು.
ಅಲ್ಲದೆ, ವೀಕ್ಷಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯವನ್ನು ದೇವೇಗೌಡರು ಬರೆದಿದ್ದಾರೆ.

ಇದನ್ನೂ ಓದಿ: ಆ.23ರಂದು ದೇಶದ ಮೊದಲ ಕೆಹೆಚ್ಐಆರ್ ಸಿಟಿ ಯೋಜನೆಗೆ ಚಾಲನೆ: ಸಚಿವ ಎಂ.ಬಿ.ಪಾಟೀಲ್ - KHIR city project

ETV Bharat Logo

Copyright © 2024 Ushodaya Enterprises Pvt. Ltd., All Rights Reserved.