ನವದೆಹಲಿ: ದೇಶದ ಮಾಜಿ ಪ್ರಧಾನಮಂತ್ರಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ಇಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ದಾಖಲಿಸಲಾಗಿತ್ತು. 92 ವರ್ಷದ ಮಾಜಿ ಪ್ರಧಾನಿಯನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಿಸಲಾಗಿತ್ತು.
ಡಾ. ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಅವರನ್ನು ಗುರುವಾರ ಸಂಜೆ ಏಮ್ಸ್ಗೆ ಕರೆತರಾಗಿತ್ತು. ಬಳಿಕ ಅವರನ್ನು ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಅವರು ವಿಧಿವಶರಾಗಿದ್ದಾರೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.
Dr. Manmohan Singh Ji and I interacted regularly when he was PM and I was the CM of Gujarat. We would have extensive deliberations on various subjects relating to governance. His wisdom and humility were always visible.
— Narendra Modi (@narendramodi) December 26, 2024
In this hour of grief, my thoughts are with the family of… pic.twitter.com/kAOlbtyGVs
ಮನಮೋಹನ್ ಸಿಂಗ್ ಅವರು 1991- 96ರ ಅವಧಿಯಲ್ಲಿ ಮಾಜಿ ಪ್ರಧಾನಿ ಪಿ. ವಿ. ನರಸಿಂಹರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು. ದೇಶದ ಆರ್ಥಿಕತೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ತಂದಿದ್ದರು.
ಕಾಂಗ್ರೆಸ್ ನೇತೃತ್ವದಲ್ಲಿ 2004 ರಿಂದ 2014ರ ವರೆಗಿನ ಯುಪಿಎ ಸರ್ಕಾರದ ಎರಡು ಅವಧಿಯಲ್ಲಿ ಪ್ರಧಾನಿಯಾಗಿದ್ದರು. ಬಳಿಕ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಈ ವರ್ಷದ ಏಪ್ರಿಲ್ನಲ್ಲಿ ರಾಜಕೀಯದಿಂದ ನಿವೃತ್ತ ಪಡೆದಿದ್ದರು.
पूर्व प्रधानमंत्री डॉ. मनमोहन सिंह जी के निधन की सूचना अत्यंत दुःखद है। भारतीय रिजर्व बैंक में गवर्नर से लेकर देश के वित्त मंत्री और प्रधानमंत्री के रूप में डॉ. मनमोहन सिंह जी ने देश की शासन व्यवस्था में महत्त्वपूर्ण भूमिका निभाई। दुःख की इस घड़ी में उनके परिजनों व समर्थकों के…
— Amit Shah (@AmitShah) December 26, 2024
ಪ್ರಧಾನಿ ಮೋದಿ ಕಂಬನಿ: ಆರ್ಥಿಕ ತಜ್ಞನ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ. ಭಾರತ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಜಿ ಅವರನ್ನು ಕಳೆದುಕೊಂಡಿದೆ. ವಿನಮ್ರತೆಯ ಹಾದಿಯಿಂದ ಅವರು ಗೌರವಾನ್ವಿತ ಅರ್ಥಶಾಸ್ತ್ರಜ್ಞರಾದರು. ಹಣಕಾಸು ಸಚಿವರಾಗಿ ಅಲ್ಲದೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ದೇಶದ ಪ್ರಧಾನಿಯಾಗಿ ಅವರು ಜನರ ಜೀವನವನ್ನು ಸುಧಾರಿಸಲು ವ್ಯಾಪಕ ಪ್ರಯತ್ನಗಳನ್ನು ಮಾಡಿದರು ಎಂದು ಹೇಳಿದ್ದಾರೆ.
ಸಿಂಗ್ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿರುವ ಮೋದಿ, ಡಾ. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಮತ್ತು ನಾನು ಗುಜರಾತ್ ಸಿಎಂ ಆಗಿದ್ದಾಗ ಆಡಳಿತದ ಕುರಿತು ಸಂವಹನ ನಡೆಸುತ್ತಿದ್ದೆವು. ಸರ್ಕಾರದ ವಿವಿಧ ವಿಷಯಗಳ ಕುರಿತು ವ್ಯಾಪಕ ಚರ್ಚೆಗಳನ್ನು ನಡೆಸಿದ್ದೇವೆ. ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ಗೋಚರಿಸುತ್ತದೆ ಎಂದು ಸ್ಮರಿಸಿದ್ದಾರೆ.
Undoubtedly, history shall judge you kindly, Dr. Manmohan Singh ji!
— Mallikarjun Kharge (@kharge) December 26, 2024
With the passing of the Former Prime Minister, India has lost a visionary statesman, a leader of unimpeachable integrity, and an economist of unparalleled stature. His policy of Economic Liberalisation and… pic.twitter.com/BvMZh3MFXS
ಶುಕ್ರವಾರ ಕಾಂಗ್ರೆಸ್ನ ಎಲ್ಲ ಕಾರ್ಯಕ್ರಮ ರದ್ದು: ಕರ್ನಾಟಕದ ಬೆಳಗಾವಿಯಲ್ಲಿ ನಡೆಯಬೇಕಿದ್ದ ರ್ಯಾಲಿ ಸೇರಿದಂತೆ ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಪಕ್ಷದ ಎಲ್ಲಾ ಚಟುವಟಿಕೆಗಳನ್ನು ರದ್ದುಗೊಳಿಸಲಾಗಿದೆ.
ಮಾತಿಗಿಂತ ಕ್ರಿಯಾಶೀಲ ವ್ಯಕ್ತಿ. ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಅಪಾರ ಕೊಡುಗೆಯಿಂದಾಗಿ ಮನಮೋಹನ್ ಸಿಂಗ್ ಅವರು ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ತಿಳಿಸಿದ್ದಾರೆ.
Few people in politics inspire the kind of respect that Sardar Manmohan Singh ji did.
— Priyanka Gandhi Vadra (@priyankagandhi) December 26, 2024
His honesty will always be an inspiration for us and he will forever stand tall among those who truly love this country as someone who remained steadfast in his commitment to serve the nation… pic.twitter.com/BXA6zHG2Fq
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ನಿಂದ ಹಿಡಿದು ದೇಶದ ಹಣಕಾಸು ಸಚಿವರಾಗಿ, ಪ್ರಧಾನಿಯಾಗಿ ಡಾ. ಸಿಂಗ್ ಅವರದ್ದು ದೊಡ್ಡ ಹಾದಿ ಎಂದು ಹೇಳಿದ್ದಾರೆ.
ಇದನ್ನೂ ಓದಿ; ಬಿಜೆಪಿ ಜೊತೆ ಕಾಂಗ್ರೆಸ್ ಒಳಒಪ್ಪಂದ, I.N.D.I.A ಕೂಟದ ಅಸ್ತಿತ್ವಕ್ಕೆ ಧಕ್ಕೆ: ಆಪ್ ಆರೋಪ